ಮತಾಂಧ ಟಿಪ್ಪು ಪಾಠ ಓದಿ ದೇಶಭಕ್ತಿ ಬೆಳೆಸಿಕೊಳ್ಳಲು ಸಾಧ್ಯವೇ..!
ಮತಾಂಧ ಟಿಪ್ಪುವಿನ ಪಾಠ ಮಕ್ಕಳು ಕಲಿತು ಯಾವ ದೇಶಭಕ್ತಿಯನ್ನು ಬೆಳೆಸಿಕೊಳ್ಳಲು ಸಾಧ್ಯ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು ಒಂದು ತಿಂಗಳು ಪೂರೈಸುತಿದ್ದಂತೆ ಸಮುದಾಯಗಳ ನಡುವೆ ಒಡಕು ಮೂಡಿಸಿ ದ್ವೇಷದ ರಾಜಕಾರಣದ ಮೂಲಕ ವಿಷ ಬೀಜ ಬಿತ್ತುವ ಕೆಲಸ ಮಾಡುತ್ತಿದೆ ಎಂದು ಮಾಜಿ ಸಚಿವ ಪ್ರಭು ಚೌಹಾಣ್ ಪ್ರಶ್ನಿಸಿದ್ದಾರೆ.
ಬೆಂಗಳೂರು : ಕಾಂಗ್ರೆಸ್ ಕರ್ನಾಟಕದಲ್ಲಿ ಅಸ್ತಿರತೆ ನಿರ್ಮಾಣ ಮಾಡಲು ಬೇಕಾದ ಎಲ್ಲ ಕೆಲಸಗಳಿಗೆ ಮುನ್ನುಡಿ ಬರೆಯುತ್ತಿದೆ ಎಂದು ಮಾಜಿ ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಗುಡುಗಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು ಮಕ್ಕಳು ದೇಶ ಭಕ್ತಿಯ ಪಾಠ ಕಲಿಯುವುದು ಕಾಂಗ್ರೆಸ್ ಸರ್ಕಾರಕ್ಕೆ ಬೇಡವಾಗಿದೆ. ಮತಾಂಧ ಟಿಪ್ಪುವಿನ ಪಾಠ ಮಕ್ಕಳು ಕಲಿತು ಯಾವ ದೇಶಭಕ್ತಿಯನ್ನು ಬೆಳೆಸಿಕೊಳ್ಳಲು ಸಾಧ್ಯ ಎಂದು ಪ್ರಭು ಚೌಹಾಣ್ ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: "ಟೀಕೆ ಸಾಯುತ್ತವೆ, ಕೆಲಸ ಉಳಿಯುತ್ತವೆ" ಎಂಬ ಮಾತನ್ನು ನಾವು ನಂಬಿದ್ದೇವೆ"
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು ಒಂದು ತಿಂಗಳು ಪೂರೈಸುತಿದ್ದಂತೆ ಸಮುದಾಯಗಳ ನಡುವೆ ಒಡಕು ಮೂಡಿಸಿ ದ್ವೇಷದ ರಾಜಕಾರಣದ ಮೂಲಕ ವಿಷ ಬೀಜ ಬಿತ್ತುವ ಕೆಲಸ ಮಾಡುತ್ತಿದೆ ಎಂದು ಮಾಜಿ ಸಚಿವರು ಹಾಗೂ ಔರಾದ ಶಾಸಕ ಪ್ರಭು ಚವ್ಹಾಣ ಕಿಡಿ ಕಾರಿದ್ದಾರೆ.
ಕಾಂಗ್ರೆಸ್ ಪಕ್ಷ ಚುನಾವಣೆ ಪೂರ್ವದಲ್ಲಿ ಘೋಷಿಸಿದ ಗ್ಯಾರೆಂಟಿಗಳು ಈಗಾಗಲೇ ಜನರಲ್ಲಿ ದೊಡ್ಡ ಮಟ್ಟಿನ ಗೊಂದಲಕ್ಕೆ ಎಡೆ ಮಾಡಿದೆ. ಸರಕಾರ ಬಂದ 24 ಗಂಟೆಯಲ್ಲೇ ಗ್ಯಾರಂಟಿ ಜಾರಿಗೆ ಮಾಡುತ್ತೇವೆ ಎಂದು ಘೊಷಣೆ ಮಾಡಿದ್ದರು. ಆದರೆ, ಇದೀಗ ಷರತ್ತುಗಳ ಮೇಲೆ ಷರತ್ತುಗಳನ್ನು ವಿಧಿಸುತ್ತಾ ಕಾಂಗ್ರೆಸ್ ಸುಳ್ಳು ಭರವಸೆಗಳನ್ನು ನೀಡಲು ಮತ್ತೆ ಪರಾದಾಡುತ್ತಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಕೇಂದ್ರದ ದ್ವೇಷ ರಾಜಕಾರಣ, ಬಡವರ ವಿರೋಧಿ ನೀತಿ ವಿರುದ್ಧ ಜೂ. 20 ಪ್ರತಿಭಟನೆ
ಬಿಜೆಪಿ ಸರ್ಕಾರ ಜನಹಿತವಾಗಿ ಜಾರಿಗೊಳಿಸಿದ ಮತಾಂತರ ನಿಷೇಧ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ, ಪಠ್ಯಪುಸ್ತಕ ಪರಿಷ್ಕರಣೆಯನ್ನು ಕೈಬಿಡಲು ಹೊರಟಿರುವುದು ದ್ವೇಷ ರಾಜಕಾರಣವಲ್ಲದೆ ಮತ್ತೆನು? ರಾಜ್ಯದೆಲ್ಲೆಡೆ ವಿದ್ಯುತ್ ಬಿಲ್ ಪಾವತಿಗೂ ಜನ ಕೆಲವೆಡೆ ತಗಾದೆ ತೆಗೆದು ಮೀಟರ್ ರೀಡಿಂಗ್‍ಗೆ ಬಂದ ಸಿಬ್ಬಂದಿಗಳೊಂದಿಗೆ ವಾದ ನಡೆಸುತ್ತಿರುವ ಪ್ರಕರಣಗಳೂ ಅಲ್ಲಲ್ಲಿ ವರದಿಯಾಗುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಅಲ್ಲದೆ, ಯಾವುದೇ ಸ್ಪಷ್ಟತೆ ಇಲ್ಲದೆ ಯೋಜನೆ ಘೋಷಿಸಿದ್ದರ ಪರಿಣಾಮ ಇದಾಗಿದೆ. ಕಾಂಗ್ರೆಸ್ ಘೋಷಿಸಿದ ಗ್ಯಾರಂಟಿ ಆರಂಭದಿಂದಲೆ ಗೊಂದಲಮಯವಾಗಿದೆ. ಗ್ಯಾರಂಟಿಗೆ ಕಂಡೀಶನ್ ಯಾಕೆ? ಗ್ಯಾರಂಟಿ ಯೋಜನೆ ನಿಮಗೂ ಇದೆ, ನಮಗೂ ಇದೆ ಎಂದು ಚುನಾವಣೆ ಭಾಷಣದಲ್ಲಿ ಸಿದ್ದರಾಮಯ್ಯ, ಡಿಕೆಶಿ ಘೋಷಿಸಿದ್ದರು ಆದರೆ ಈಗ..? ಎಂದು ಪ್ರಶ್ನೆ ಮಾಡಿದ್ದಾರೆ.
ಇದನ್ನೂ ಓದಿ: ನನ್ನ ಅವಧಿಯ ಪಠ್ಯ ಪುಸ್ತಕ ಪರಿಷ್ಕರಣೆಗೆ ಸರ್ಕಾರಕ್ಕೆ ಶಿಫಾರಸ್ಸು: ಚಿಂತಕ ರೋಹಿತ್ ಚಕ್ರತೀರ್ಥ
ಕಾಂಗ್ರೆಸ್ ಜನರನ್ನು ಮರಳು ಮಾಡಿ ಅಧಿಕಾರಕ್ಕೇರಿರುವುದು ಇದೀಗ ಸ್ಪಷ್ಟವಾಗಿದೆ ಈಗಾಲಾದರು ಎಚ್ಚೆತ್ತುಕೊಂಡು ದ್ವೇಷ ರಾಜಕಾರಣ ಮಾಡುವ ಬದಲಾಗಿ ಜನರ ತಿರ್ಪನ್ನು ಗೌರವಿಸಿ ಒಳ್ಳೆಯ ಆಡಳಿತ ನೀಡಲಿ ಎಂದು ಚವ್ಹಾಣ ಸಲಹೆ ನಿಡಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.