Pradhan Mantri Fasal Bima Yojana: ಮುಂಗಾರು ಹಂಗಾಮಿನ ಬೆಳೆ ವಿಮೆ ಮಧ್ಯಂತರ ಪರಿಹಾರ ಬಿಡುಗಡೆ

ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯ 2022ರ ಮುಂಗಾರು ಹಂಗಾಮಿನ ಮಧ್ಯಂತರ ವಿಮಾ ಪರಿಹಾರ ಬಿಡುಗಡೆಯಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾಹಿತಿ ನೀಡಿದ್ದಾರೆ.

Written by - Puttaraj K Alur | Last Updated : Nov 19, 2022, 12:25 PM IST
  • 2022ರ ಮುಂಗಾರು ಹಂಗಾಮಿನ ಮಧ್ಯಂತರ ವಿಮಾ ಪರಿಹಾರ ಬಿಡುಗಡೆಯಾಗಿದೆ
  • ಧಾರವಾಡ ಜಿಲ್ಲೆಯ 63,609 ರೈತರಿಗೆ ಮಧ್ಯಂತರ ಬೆಳೆ ವಿಮೆ ಪರಿಹಾರವಾಗಿ 57 ಕೋಟಿ ರೂ. ದೊರೆಯಲಿದೆ
  • ಪ್ರಧಾನಿ ಮೋದಿ ಮತ್ತು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್‍ಗೆ ಪ್ರಹ್ಲಾದ್ ಜೋಶಿ ಧನ್ಯವಾದ
Pradhan Mantri Fasal Bima Yojana: ಮುಂಗಾರು ಹಂಗಾಮಿನ ಬೆಳೆ ವಿಮೆ ಮಧ್ಯಂತರ ಪರಿಹಾರ ಬಿಡುಗಡೆ title=
ವಿಮಾ ಪರಿಹಾರ ಬಿಡುಗಡೆ

ಬೆಂಗಳೂರು: ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯ 2022ರ ಮುಂಗಾರು ಹಂಗಾಮಿನ ಮಧ್ಯಂತರ ವಿಮಾ ಪರಿಹಾರ ಬಿಡುಗಡೆಯಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ನೀಡಿರುವ ಸಚಿವರು, ‘2022ನೇ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ಅತಿವೃಷ್ಟಿಯಿಂದ ಹಾನಿಗೀಡಾಗಿದ್ದ ಆಲೂಗಡ್ಡೆ, ಕೆಂಪು ಮೆಣಸಿನಕಾಯಿ, ಹತ್ತಿ, ಗೋವಿನಜೋಳ ಮತ್ತು ಶೇಂಗಾ ಬೆಳೆಗಳಿಂದ ರೈತರಿಗೆ ಉಂಟಾದ ಬೆಳೆ ಹಾನಿಗೆ ಫಸಲ್ ಭೀಮಾ ಯೋಜನೆಯ ಬೆಳೆ ವಿಮೆ ಮಧ್ಯಂತರ ಪರಿಹಾರವನ್ನು ಬಿಡುಗಡೆ ಮಾಡಲಾಗಿದೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: Vegetable Price Today: ಭಾರೀ ಏರಿಳಿತವಾಗಿದೆ ತರಕಾರಿ ಬೆಲೆ: ಇಲ್ಲಿದೆ ನೋಡಿ ಸಂಪೂರ್ಣ ವಿವರ

‘ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ಈಗಾಗಲೇ ಹೆಸರು ನೋಂದಾಯಿಸಿಕೊಂಡ ಧಾರವಾಡ ಜಿಲ್ಲೆಯ 63,609 ರೈತರಿಗೆ ಮಧ್ಯಂತರ ಬೆಳೆ ವಿಮೆ ಪರಿಹಾರವಾಗಿ 57 ಕೋಟಿ ರೂ. ದೊರೆಯಲಿದ್ದು, ಬೆಳೆ ಕಟಾವು ಸಮೀಕ್ಷೆಯ ವರದಿ ಸಲ್ಲಿಕೆಯಾದ ನಂತರದಲ್ಲಿ ಪೂರ್ಣ ಬೆಳೆ ವಿಮೆ ರೈತರಿಗೆ ದೊರೆಯಲಿದೆ’ ಎಂದು ತಿಳಿಸಿದ್ದಾರೆ

‘ರೈತರಿಗಾಗಿ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಎಂಬ ವಿಶೇಷ ಯೋಜನೆ‌ ರೂಪಿಸಿ ರೈತರ ಸಂಕಷ್ಟ ಸಂದರ್ಭದಲ್ಲಿ ಆರ್ಥಿಕವಾಗಿ ನೆರವಾಗುತ್ತಿರುವ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹಾಗೂ ರಾಜ್ಯ ಸರ್ಕಾರದ ಪಾಲನ್ನು ಸೂಕ್ತ ಸಮಯದಲ್ಲಿ ಒದಗಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ಯವರಿಗೆ ಧನ್ಯವಾದಗಳು’ ಎಂದು ಪ್ರಹ್ಲಾದ್ ಜೋಶಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: Pro Pakistan Slogan at College: ಪಾಕ್ ಪರ ಘೋಷಣೆ ಕೂಗಿದ್ದ ವಿದ್ಯಾರ್ಥಿಗಳಿಗೆ ಜಾಮೀನು ಮಂಜೂರು!

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News