ಬೆಂಗಳೂರು: ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯ 2022ರ ಮುಂಗಾರು ಹಂಗಾಮಿನ ಮಧ್ಯಂತರ ವಿಮಾ ಪರಿಹಾರ ಬಿಡುಗಡೆಯಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ನೀಡಿರುವ ಸಚಿವರು, ‘2022ನೇ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ಅತಿವೃಷ್ಟಿಯಿಂದ ಹಾನಿಗೀಡಾಗಿದ್ದ ಆಲೂಗಡ್ಡೆ, ಕೆಂಪು ಮೆಣಸಿನಕಾಯಿ, ಹತ್ತಿ, ಗೋವಿನಜೋಳ ಮತ್ತು ಶೇಂಗಾ ಬೆಳೆಗಳಿಂದ ರೈತರಿಗೆ ಉಂಟಾದ ಬೆಳೆ ಹಾನಿಗೆ ಫಸಲ್ ಭೀಮಾ ಯೋಜನೆಯ ಬೆಳೆ ವಿಮೆ ಮಧ್ಯಂತರ ಪರಿಹಾರವನ್ನು ಬಿಡುಗಡೆ ಮಾಡಲಾಗಿದೆ’ ಎಂದು ಹೇಳಿದ್ದಾರೆ.


Vegetable Price Today: ಭಾರೀ ಏರಿಳಿತವಾಗಿದೆ ತರಕಾರಿ ಬೆಲೆ: ಇಲ್ಲಿದೆ ನೋಡಿ ಸಂಪೂರ್ಣ ವಿವರ


‘ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ಈಗಾಗಲೇ ಹೆಸರು ನೋಂದಾಯಿಸಿಕೊಂಡ ಧಾರವಾಡ ಜಿಲ್ಲೆಯ 63,609 ರೈತರಿಗೆ ಮಧ್ಯಂತರ ಬೆಳೆ ವಿಮೆ ಪರಿಹಾರವಾಗಿ 57 ಕೋಟಿ ರೂ. ದೊರೆಯಲಿದ್ದು, ಬೆಳೆ ಕಟಾವು ಸಮೀಕ್ಷೆಯ ವರದಿ ಸಲ್ಲಿಕೆಯಾದ ನಂತರದಲ್ಲಿ ಪೂರ್ಣ ಬೆಳೆ ವಿಮೆ ರೈತರಿಗೆ ದೊರೆಯಲಿದೆ’ ಎಂದು ತಿಳಿಸಿದ್ದಾರೆ


ಪ್ರಹ್ಲಾದ್ ಜೋಶಿ ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: Pro Pakistan Slogan at College: ಪಾಕ್ ಪರ ಘೋಷಣೆ ಕೂಗಿದ್ದ ವಿದ್ಯಾರ್ಥಿಗಳಿಗೆ ಜಾಮೀನು ಮಂಜೂರು!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.