ಹುಬ್ಬಳ್ಳಿ: ರಾಜ್ಯದಲ್ಲಿ ಈಗ ಹಿಂದೂ ವಿರೋಧಿ ಮತ್ತು ದೇಶ ವಿರೋಧಿ ನಡೆ ತೀವ್ರವಾಗಿದ್ದು, ಕಾಂಗ್ರೆಸ್ ಸರ್ಕಾರವೇ ಇದಕ್ಕೆಲ್ಲ ಕಾರಣ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಿಡಿ ಕಾರಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ ಏಕೆ ಹೀಗೆ  ಹಿಂದೂ ವಿರೋಧಿ ಕೃತ್ಯಗಳು ಘಟಿಸುತ್ತಿವೆ? ಇದಕ್ಕೆ ಕಾಂಗ್ರೆಸ್ ಸರ್ಕಾರದ ಮೃದು ಧೋರಣೆಯೇ ಕಾರಣ ಎಂದು ಆರೋಪಿಸಿದ್ದಾರೆ. 


COMMERCIAL BREAK
SCROLL TO CONTINUE READING

ವಿಧಾನ ಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಆಯ್ತು ಎಫ್ ಎಸ್ ಎಲ್ ವರದಿ ಬಂದರೂ ಕ್ರಮ ಕೈಗೊಂಡಿಲ್ಲ. ರಾಮೇಶ್ವರ ಕೆಫೇ ಬಾಂಬ್ ಸ್ಪೋಟ ಆದರೂ  ಸರ್ಕಾರ ಎಚ್ಛೆತ್ತುಕೊಂಡಿಲ್ಲ.ಈಗ ಹನುಮಾನ್ ಚಾಲೀಸ್ ಹಾಕಿದ್ದಕ್ಕೆ ಹಲ್ಲೆ ನಡೆದಿದೆ. ಅಂದರೆ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ ಎಂದು ಜೋಶಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. 


ಇದನ್ನೂ ಓದಿ : ರಾಜ್ಯದ ಈ ಭಾಗಗಳಲ್ಲಿ ಅಬ್ಬರಿಸಲಿದ್ದಾನೆ ವರುಣ !ಮೂರು ದಿನಗಳವರೆಗೆ ಎಡೆಬಿಡದೆ ಸುರಿಯಲಿದೆ ಮಳೆ ! ನೀಗುವುದೇ ಬೆಂಗಳೂರಿನ ನೀರಿನ ಬವಣೆ !


ಪಾಕಿಸ್ತಾನ ಜಿಂದಾಬಾದ್ ಮತ್ತು ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲಿ ಎಷ್ಟು ಜನರನ್ನು ಬಂಧಿಸಲಾಗಿದೆ? ಇಂಥ ಅಹಿತಕರ ಘಟನೆಗಳ ವಿರುದ್ಧ ಏನು ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂಬುದನ್ನು ರಾಜ್ಯ ಸರ್ಕಾರ ಈಗಲೂ ಬಾಯಿ ಬಿಡುತ್ತಿಲ್ಲ. ಇದರಿಂದ ದುಷ್ಕರ್ಮಿಗಳಿಗೆ ಬೆಂಬಲ ಸಿಕ್ಕಂತಾಗಿದೆ. ಸರ್ಕಾರದ ಈ ನಡೆಯನ್ನು ಖಂಡಿಸುತ್ತೇನೆ ಎಂದು ಹೇಳಿದ್ದಾರೆ. 


ಸರ್ಕಾರದ ನಡೆಯೇ ಹಿಂದೂ ವಿರೋಧಿಗಳಿಗೆ ಧೈರ್ಯ: ಪಾಕಿಸ್ತಾನ ಜಿಂದಾಬಾದ್ ಘೋಷಣೆಕೋರರನ್ನು ಸಂರಕ್ಷಿಸುವ ಕೆಲಸ ಈ ಸರ್ಕಾರದಿಂದ ನಡೆಯಿತು. ರಾಜ್ಯ ಸಭಾ ಸದಸ್ಯ ನಾಸಿರ್ ಹುಸೇನ್ ಮೀಡಿಯದವರಿಗೂ ಬಾಯಿಗೆ ಬಂದ ಹಾಗೆ ಬೈದರು. ಮುಖ್ಯಮಂತ್ರಿ ಸಹ ಇದನ್ನು ಸಮರ್ಥಿಸಿಕೊಳ್ಳತೊಡಗಿದರು.ಇದೆಲ್ಲ ಈಗ ಹಿಂದೂ ವಿರೋಧಿಗಳಿಗೆ ಧೈರ್ಯ ತಂದುಕೊಟ್ಟಿದೆ ಎಂದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 


ಇದನ್ನೂ ಓದಿ : ಬಿಜೆಪಿ ಅಭ್ಯರ್ಥಿ ಬಾಲರಾಜ್ ಗೆ ಬೆಂಬಲ‌ ಘೋಷಿಸಿದ ಸಂಸದ ಶ್ರೀನಿವಾಸಪ್ರಸಾದ ಅಳಿಯ


ನಾವೇನೇ ಮಾಡಿದರೂ ರಕ್ಷಣೆಗೆ ಸರ್ಕಾರವೇ ಇದೆ ಎಂಬ ಭಾವನೆ ಆರೋಪಿಗಳಲ್ಲಿದೆ. ಹೀಗಾಗಿ ಈಗ ಹನುಮಾನ್ ಚಾಲೀಸ್ ಹಾಕುವವರ ಮೇಲೆ ಹಲ್ಲೆ ಮಾಡುವ ಮಟ್ಟಕ್ಕೆ ಹಿಂದೂ ವಿರೋಧಿಗಳ ಮನಸ್ಥಿತಿ ತಲುಪಿದೆ. ಇದಕ್ಕೆಲ್ಲ ರಾಜ್ಯ ಸರ್ಕಾರವೇ ಪ್ರಮುಖ ಕಾರಣ ಎಂದು ಸಚಿವ ಜೋಶಿ ಆರೋಪಿಸಿದ್ದಾರೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.