ಕರ್ನಾಟಕವನ್ನು ಅಕ್ಷರಶಃ ಪಾಕಿಸ್ತಾನ ಮಾಡುತ್ತಿದೆ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

Nagamangala riot case: ಮಂಡ್ಯದ ನಾಗಮಂಗಲ ಘಟನೆ ಕುರಿತು ಪ್ರತಿಕ್ರಿಯಿಸಿರುವ ಸಚಿವರು, ಗಣಪತಿ ವಿಸರ್ಜನೆ ವೇಳೆ ನಡೆದ ಈ ದುಷ್ಕೃತ್ಯವನ್ನು ತೀವ್ರವಾಗಿ ಖಂಡಿಸಿದ್ದಾರೆ.  

Written by - Prashobh Devanahalli | Last Updated : Sep 12, 2024, 02:44 PM IST
  • ನಾಗಮಂಗಲ ಗಲಭೆ ಪ್ರಕರಣ
  • ಕರ್ನಾಟಕವನ್ನು ಪಾಕಿಸ್ತಾನ ಮಾಡುತ್ತಿದೆ ಕಾಂಗ್ರೆಸ್ ಸರ್ಕಾರ
  • ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಕ್ರೋಶ
ಕರ್ನಾಟಕವನ್ನು ಅಕ್ಷರಶಃ ಪಾಕಿಸ್ತಾನ ಮಾಡುತ್ತಿದೆ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ title=

ನವದೆಹಲಿ: ರಾಜ್ಯ ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ಅಕ್ಷರಶಃ ಪಾಕಿಸ್ತಾನ ಮಾಡಲು ಹೊರಟಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯದ ನಾಗಮಂಗಲ ಘಟನೆ ಕುರಿತು ಪ್ರತಿಕ್ರಿಯಿಸಿರುವ ಸಚಿವರು, ಗಣಪತಿ ವಿಸರ್ಜನೆ ವೇಳೆ ನಡೆದ ಈ ದುಷ್ಕೃತ್ಯವನ್ನು ತೀವ್ರವಾಗಿ ಖಂಡಿಸಿದ್ದಾರೆ.

ಸರ್ವ ಜನಾಂಗದ ಶಾಂತಿಯ ತೋಟ ಎಂಬಂತಿರುವ ಕರ್ನಾಟಕವನ್ನು ಕಾಂಗ್ರೆಸ್ ಸರ್ಕಾರ ರಾಜಕೀಯ ತುಷ್ಟೀಕರಣಕ್ಕಾಗಿ ಮತ್ತೊಂದು ಪಾಕಿಸ್ತಾನ ಮಾಡಲು ಹೊರಟಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ನ ಓಲೈಕೆ ಆಡಳಿತದಿಂದಾಗಿ ನಮ್ಮ ಕರ್ನಾಟಕದ ಪರಿಸ್ಥಿತಿ ಎಲ್ಲಿಗೆ ಬಂದು ನಿಂತಿದೆ? ಪ್ರಶ್ನಿಸಿರುವ ಸಚಿವರು, ನಾಗಮಂಗಲ ಗಲಭೆ ಸೇರಿದಂತೆ ಇತ್ತೀಚಿನ ಘಟನೆಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಪ್ರಕೃತಿಯಿಂದ ಲಾಭ ಪಡೆಯುತ್ತಿರುವ ಎಲ್ಲರಿಗೂ ಪ್ರಕೃತಿ ರಕ್ಷಣೆಯ ಹೊಣೆ ಇದೆ: ಸಿಎಂ ಸಿದ್ದರಾಮಯ್ಯ

ಮಸೀದಿ ಮುಂದೆ ಗಣೇಶ ಮೆರವಣಿಗೆ ಹೋಗಬಾರದೆ?: ಮಸೀದಿ ಮುಂದೆ ಗಣಪತಿ ಮೆರವಣಿಗೆ ಹೋಗಬಾರದು ಎಂಬ ಕಾನೂನು, ನಿಯಮ ಎಲ್ಲಿದೆ? ಗಣೇಶ ಮೂರ್ತಿ ಇದ್ದರೂ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಬೆಂಕಿ ಹಚ್ಚಿದ್ದಾರೆ. ಇದೆಂಥ ನಾಗರೀಕತೆ?ಎಂದು ಸಚಿವ ಜೋಶಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತಾಂಧ ಶಕ್ತಿ ಹತ್ತಿಕ್ಕಲು ಸರ್ಕಾರಕ್ಕೆ ಆಗ್ರಹ: ಹಿಂದೂ ಹಬ್ಬಗಳು ಎಂದರೆ ಕಾಂಗ್ರೆಸ್ ಪಕ್ಷಕ್ಕೆ ಯಾಕಿಷ್ಟು ತಾತ್ಸಾರ? ಕಾಂಗ್ರೆಸ್ ಸರ್ಕಾರ ವೋಟ್ ಬ್ಯಾಂಕ್ ನೀತಿ ಅನುಸರಿಸದೆ ಮತಾಂಧ ಶಕ್ತಿಯನ್ನು ಹತ್ತಿಕ್ಕಬೇಕು ಎಂದು ಆಗ್ರಹಿಸಿದ್ದಾರೆ.

ಕಾಂಗ್ರೆಸ್ ನ ಹಿಂದೂ ವಿರೋಧಿ ನೀತಿಯಿಂದ ಈ ರೀತಿ ಗಲಭೆ, ಘಟನೆಗಳು ಸಂಭವಿಸುತ್ತಿವೆ. ನಾಗಮಂಗಲದ ಈ ಘಟನೆಗೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ಹೊಣೆ ಎಂದು ಪ್ರಲ್ಹಾದ ಜೋಶಿ  ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಹೆಚ್ಚಾದ ಸಿಎಂ ಬದಲಾವಣೆ ಕೂಗು... ಸಾಮಾಜಿಕ ಜಾಲತಾಣದಲ್ಲಿ ಬೆಂಬಲಿಗರ ಅಭಿಯಾನ ..!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News