ಹುಬ್ಬಳ್ಳಿ: ರಾಜ್ಯ ಕಾಂಗ್ರೆಸ್ ಸರ್ಕಾರ 10 ಕೆಜಿ ಅಕ್ಕಿ ಕೊಡದೇ ಇದ್ದರೂ ಜನ ಹಸಿವಿನಿಂದ ಬಳಲು ಕೇಂದ್ರ ಬಿಡಲಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಶಿಗ್ಗಾವಿ- ಸವಣೂರು ವಿಧಾನಸಭಾ ಕ್ಷೇತ್ರದ ಶಿಶುವಿನಹಾಳ, ಹಿರೇಮಲ್ಲೂರ, ಹನುಮನಹಳ್ಳಿ ಮತ್ತು ವನಹಳ್ಳಿಯಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದರು.
ಹಸಿವುಮುಕ್ತ ಕರ್ನಾಟಕ ಮಾಡುತ್ತೇವೆ. 10 ಕೆಜಿ ಅಕ್ಕಿ ಕೊಡುತ್ತೇವೆ ಎಂದೆಲ್ಲಾ ಗ್ಯಾರೆಂಟಿ ಘೋಷಣೆ ಮಾಡಿದ ಕಾಂಗ್ರೆಸ್ ಸರ್ಕಾರ ಜನಕ್ಕೆ ಕೈ ಕೊಟ್ಟಿತು. ಆದರೆ ನಿಜವಾಗಿ ಹಸಿವು ನೀಗಿಸಿದ್ದು ಕೇಂದ್ರದ "ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ" ಎಂದು ಪ್ರತಿಪಾದಿಸಿದರು.
ಇದನ್ನೂ ಓದಿ: ಪೆನ್ ಡ್ರೈವ್ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿ ಸಂತ್ರಸ್ತ ಮಹಿಳೆಯರಿಗೆ ರಕ್ಷಣೆ ಕೊಡಿ: ಕುಶಾಲಾ ಸ್ವಾಮಿ
ಸದ್ಯದ ಬರ ಪರಿಸ್ಥಿತಿಯಲ್ಲಿ ನಮ್ಮ ಧಾರವಾಡ ಲೋಕಸಭಾ ಕ್ಷೇತ್ರವೊಂದರಲ್ಲೇ ಸರಿಸುಮಾರು 15 ಲಕ್ಷ ಫಲಾನುಭವಿಗಳಿಗೆ ಗರೀಬ್ ಕಲ್ಯಾಣ್ ಅನ್ನ ಯೋಜನೆ ಆಸರೆಯಾಗಿದೆ. ಆದರೆ, "ಹ...ತ್ತು ಕೇಜಿ ಅಕ್ಕಿ.. ಬೇಕಾ... ಬೇಡ್ವಾ..?" ಎಂದು ಗ್ಯಾರೆಂಟಿ ಘೋಷಿಸಿದ ಸಿಎಂ ಸಿದ್ದರಾಮಯ್ಯ ಅವರು ಜನರ ಹಸಿವು ನೀಗಿಸುವಲ್ಲಿ ನಿಜವಾದ ಕಾಳಜಿ ತೋರಲಿಲ್ಲ ಎಂದು ಸಚಿವ ಜೋಶಿ ವಾಗ್ದಾಳಿ ನಡೆಸಿದರು.
ರಾಜ್ಯದಲ್ಲಿ ಬರ ಭೀಕರತೆ ಇದ್ರೂ ಜನತೆ ಅಷ್ಟಾಗಿ ಸಂಕಷ್ಟಕ್ಕೆ ಸಿಲುಕಲಿಲ್ಲ. ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಮೂಲಕ ನರೇಂದ್ರ ಮೋದಿ ಅವರು ಕಾಪಾಡಿದ್ದಾರೆ ಎಂದು ಸಚಿವ ಜೋಶಿ ಸಮರ್ಥಿಸಿಕೊಂಡರು. ಬಡವರ ಉದ್ಧಾರಕ್ಕಾಗಿ ಶ್ರಮಿಸುತ್ತಿರುವ ನರೇಂದ್ರ ಮೋದಿಯವರನ್ನು ಮತ್ತೆ ಪ್ರಧಾನಿಯಾಗಿಸಲು ಬಿಜೆಪಿಯನ್ನು ಬಹುಮತದಿಂದ ಗೆಲ್ಲಿಸಿ ಎಂದು ಮನವಿ ಮಾಡಿದರು.
ಇದನ್ನೂ ಓದಿ: "ಬರ ಪರಿಹಾರ ಸಾಕು ಎಂದಿರುವ ಕುಮಾರಸ್ವಾಮಿ ನಾಡದ್ರೋಹಿ" : ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ
ಈ ಸಂದರ್ಭದಲ್ಲಿ ಪ್ರಮುಖರಾದ ಶಿವಾನಂದ ಮ್ಯಾಗೇರಿ, ಶ್ರೀಕಾಂತ ದುಂಡೀಗೌಡರ, ಶಶಿಧರ ಯಲಿಗಾರ, ತಿಪ್ಪಣ್ಣ ಸಾತಣ್ಣವರ, ಪ್ರಸಾದ ಸುರಗಿಮಠ, ರವಿ ಕುಡೊಕ್ಕಲಿಗಾರ , ಬಸವರಾಜ್ ನಾರಾಯಣಪುರ , ಶ್ರೀಕಾಂತ ಬುಳ್ಳಕ್ಕನವರ, ದೇವಣ್ಣ ಚಾಕಲಬ್ಬಿ, ಶಂಕರ ಪೊಲೀಸ್ ಗೌಡ್ರು, ಹೊನ್ನಪ್ಪ ಹೂಗಾರ, ಸೋಮಯ್ಯ ಗೌರಿಮಠ, ಅರ್ಜುನ ಹಂಚಿನಮನಿ ಹಾಗು ಪಕ್ಷದ ಪ್ರಮುಖರು ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.