ರಾಜ್ಯದಲ್ಲಿ ಕಾಂಗ್ರೆಸ್ 3ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲಲ್ಲ : ಪ್ರಹ್ಲಾದ ಜೋಶಿ ಸವಾಲು
ರಾಜ್ಯದಲ್ಲಿ ಕಾಂಗ್ರೆಸ್ ಮೂರಕ್ಕಿಂತ ಹೆಚ್ಚು ಕ್ಷೇತ್ರಗಳನ್ನೂ ಗೆಲ್ಲುವುದಿಲ್ಲ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಸವಾಲು ಹಾಕಿದ್ದಾರೆ.
ಹುಬ್ಬಳ್ಳಿ: ರಾಜ್ಯದಲ್ಲಿ ಕಾಂಗ್ರೆಸ್ ಮೂರಕ್ಕಿಂತ ಹೆಚ್ಚು ಕ್ಷೇತ್ರಗಳನ್ನೂ ಗೆಲ್ಲುವುದಿಲ್ಲ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಸವಾಲು ಹಾಕಿದ್ದಾರೆ.
ಹುಬ್ಬಳ್ಳಿಯಲ್ಲಿ ಇಂದು ಸಂಜೆ ಪತ್ರಕರ್ತರೊಂದಿಗೆ ಮಾತನಾಡಿದ ಜೋಶಿ ಅವರು, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಕರ್ನಾಟಕದಲ್ಲಿ 3 ಕ್ಷೇತ್ರಗಳನ್ನೂ ದಾಟುವುದಿಲ್ಲ ಎಂದು ಭವಿಷ್ಯ ನುಡಿದರು. ಅಲ್ಲದೆ, ಒಂದು ವೇಳೆ ಮೂರಕ್ಕಿಂತ ಹೆಚ್ಚು ಕ್ಷೇತ್ರಗಳನ್ನು ಕಾಂಗ್ರೆಸ್ ಗೆದ್ದರೆ ಅವರು ಹೇಳಿದ ಕೇಳುವೆ ಎಂದು ಸಚಿವ ಜೋಶಿ ಸವಾಲು ಹಾಕಿದರು.
ಇದನ್ನೂ ಓದಿ:ಬಿಜೆಪಿ ಭದ್ರಕೋಟೆ ಗೆಲ್ಲಲು ʼಕೈʼ ಸಂಚು..! ಇಲ್ಲಿದೆ ದಕ್ಷಿಣ ಕನ್ನಡ ʼಲೋಕ ಸಮರʼದ ಇತಿಹಾಸ
ದೇಶಾದ್ಯಂತ ಕಾಂಗ್ರೆಸ್ 40 ಕ್ಷೇತ್ರಗಳನ್ನು ಗೆಲ್ಲುವುದೂ ಕಷ್ಟವಿದೆ. ಹಾಗಿರುವಾಗ ಕರ್ನಾಟಕದಲ್ಲಿ ಹೇಗೆ 20 ಕ್ಷೇತ್ರಗಳನ್ನು ಗೆಲ್ಲುತ್ತದೆ? ಎಂದು ಪ್ರಶ್ನಿಸಿದರು. ಲೋಕಸಭಾ ಚುನಾವಣೆ ಬಳಿಕ ಸಿಎಂ-ಡಿಸಿಎಂ ಬಣದಲ್ಲಿನ ಆಂತರಿಕ ಗೊಂದಲದಿಂದ ರಾಜ್ಯ ಸರ್ಕಾರ ಅದಾಗೇ ಪತನಗೊಳ್ಳಬಹುದು. ಆದರೆ, ಸರ್ಕಾರದ ಪತನದಲ್ಲಿ ಬಿಜೆಪಿ ಪಾತ್ರ ಇರುವುದಿಲ್ಲ ಎಂದು ಸಚಿವ ಜೋಶಿ ಸ್ಪಷ್ಟಪಡಿಸಿದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.