Prajwal Revanna case: ಎಚ್.ಡಿ.ರೇವಣ್ಣ ಮನೆಯಲ್ಲಿ SIT ಅಧಿಕಾರಿಗಳಿಂದ ಸ್ಥಳ ಮಹಜರು!
Hassan Pen Drive Case: ಹಾಸನ ಜಿಲ್ಲೆ ಹೊಳೆನರಸೀಪುರದ ಎಚ್.ಡಿ.ರೇವಣ್ಣ ನಿವಾಸದಲ್ಲಿ ಶನಿವಾರ SIT ಅಧಿಕಾರಿಗಳು ಸ್ಥಳ ಮಹಜರು ನಡೆಸಿದ್ದಾರೆ. DYSP ಸತ್ಯ ನಾರಾಯಣ್ ಸಿಂಗ್, ಸುಮರಾಣಿ ನೇತೃತ್ವದಲ್ಲಿ ಸಂತ್ರಸ್ತ ಮಹಿಳೆಯೊಂದಿಗೆ ಬಂದ SIT ಅಧಿಕಾರಿಗಳು ಹಾಸನ ಎಎಸ್ಪಿ ತಮ್ಮಯ್ಯ ಹಾಗೂ ಸ್ಥಳೀಯ ಪೊಲೀಸರೊಂದಿಗೆ ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಹೊಳೆನರಸೀಪುರ: ಅಶ್ಲೀಲ ವಿಡಿಯೋ ಹಾಗೂ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ. ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಎಚ್.ಡಿ.ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಪ್ರಕರಣದಲ್ಲಿ ರೇವಣ್ಣ A೧ ಆರೋಪಿಯಾಗಿದ್ದರೆ, ಪ್ರಜ್ವಲ್ A೨ ಆರೋಪಿಯಾಗಿದ್ದಾರೆ. ಈಗಾಗಲೇ ವಿಚಾರಣೆಗೆ ಹಾಜರಾಗುವಂತೆ ತಂದೆ-ಮಗನಿಗೆ ನೋಟಿಸ್ ಜಾರಿ ಮಾಡಲಾಗಿದೆ.
ಇದೆಲ್ಲಾ ಬೆಳವಣಿಗೆಗಳ ನಡುವೆ ಹಾಸನ ಜಿಲ್ಲೆ ಹೊಳೆನರಸೀಪುರದ ಎಚ್.ಡಿ.ರೇವಣ್ಣ ನಿವಾಸದಲ್ಲಿ ಶನಿವಾರ SIT ಅಧಿಕಾರಿಗಳು ಸ್ಥಳ ಮಹಜರು ನಡೆಸಿದ್ದಾರೆ. DYSP ಸತ್ಯ ನಾರಾಯಣ್ ಸಿಂಗ್, ಸುಮರಾಣಿ ನೇತೃತ್ವದಲ್ಲಿ ಸಂತ್ರಸ್ತ ಮಹಿಳೆಯೊಂದಿಗೆ ಬಂದ SIT ಅಧಿಕಾರಿಗಳು ಹಾಸನ ಎಎಸ್ಪಿ ತಮ್ಮಯ್ಯ ಹಾಗೂ ಸ್ಥಳೀಯ ಪೊಲೀಸರೊಂದಿಗೆ ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಹೆಚ್.ಡಿ.ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ
ರೇವಣ್ಣ ಅವರ ನಿವಾಸದಲ್ಲಿ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ ಎಂದು ಮಹಿಳೆ ದೂರು ನೀಡಿದ್ದರು. ಈ ಹಿನ್ನೆಲೆ ಶನಿವಾರ ಸ್ಥಳ ಮಹಜರು ನಡೆಸಲಾಯಿತು. ಅಡುಗೆ ಮನೆ, ಬೆಡ್ ರೂಂ, ಸ್ಟೋರ್ ರೂಂ ಸೇರಿದಂತೆ ಮನೆಯ ಮೂಲೆಮೂಲೆಯಲ್ಲಿ ಶೋಧ ನಡೆಸಿದ್ದಾರೆ.
ಭವಾನಿ ರೇವಣ್ಣ ಇಲ್ಲದ ವೇಳೆ ಅಡುಗೆ ಮನೆ, ಬೆಡ್‌ರೂಂ ಹಾಗೂ ಸ್ಟೋರ್ ರೂಂನಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಬಗ್ಗೆ ಸಂತ್ರಸ್ಥೆ ಆರೋಪಿಸಿದ್ದಾರೆ. ಮಹಜರು ಪ್ರಕ್ರಿಯೆ ವಿಡಿಯೋ ಚಿತ್ರೀಕರಣ ನಡೆಸಲಾಗಿದ್ದು, ಪಂಚನಾಮೆ ಬಳಿಕ ಸ್ಥಳದಲ್ಲಿಯೇ ಸಂತ್ರಸ್ತೆಯ ಹೇಳಿಕೆ ದಾಖಲು ಮಾಡಿಕೊಳ್ಳಲಾಗಿದೆ. ಸ್ಥಳ ಮಹಜರು ವೇಳೆ ಎಚ್.ಡಿ.ರೇವಣ್ಣರ ಪತ್ನಿ ಭವಾನಿ ಮನೆಯಲ್ಲಿಯೇ ಇದ್ದರು ಎನ್ನಲಾಗಿದೆ. ರೇವಣ್ಣ ಪರ ವಕೀಲರು ಹಾಗೂ ಜೆಡಿಎಸ್ ನಾಯಕರು ಸಹ ಸ್ಥಳದಲ್ಲಿ ಹಾಜರಿದ್ದರು ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಬಳ್ಳಾರಿ ಕಾಂಗ್ರೆಸ್ ಅಭ್ಯರ್ಥಿ ತಡರಾತ್ರಿವರಗೆ ಪ್ರಚಾರ
ರೇವಣ್ಣರ ಮನೆಯ ಸುತ್ತಮುತ್ತ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ಎಸ್‌ಐಟಿ ಅಧಿಕಾರಿಗಳ ತಂಡವು ಎರಡು ಗಂಟೆಗಳಿಂದ ಮನೆಯಲ್ಲಿ ಪರಿಶೀಲನೆ ನಡೆಸಿದ್ದಾರೆ. ಅತ್ಯಾಚಾರ ಆರೋಪ ಎದುರಿಸುತ್ತಿರುವ ಪ್ರಜ್ವಲ್ ರೇವಣ್ಣ ಮತ್ತು ಎಚ್.ಡಿ.ರೇವಣ್ಣ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯನವರು SIT ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆ ಅಧಿಕಾರಿಗಳು ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.