ನವದೆಹಲಿ: ರಾಜ್ಯದಲ್ಲಿ ಅತಿ ಭ್ರಷ್ಟ ಸರ್ಕಾರ ಆಡಳಿತದಲ್ಲಿದೆ ಎಂದು ಕಾಂಗ್ರೆಸ್-ಜೆಡಿಎಸ್ ನ ಮೈತ್ರಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರಿಗೆ ಪ್ರಜ್ವಲ್ ರೇವಣ್ಣ ತಿರುಗೇಟು ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಇದೇ ಮೊದಲ ಬಾರಿಗೆ ಹಾಸನ ಲೋಕಸಭಾ ಕ್ಷೇತ್ರದ ಆಯ್ಕೆಯಾಗಿರುವ ಪ್ರಜ್ವಲ್ ರೇವಣ್ಣ, ತಮ್ಮ ಮೊದಲ ಭಾಷಣದಲ್ಲಿ ಸಂಸತ್ತಿನಲ್ಲಿ ಗಮನ ಸೆಳೆದಿದ್ದಾರೆ. ತೇಜಸ್ವಿ ಸೂರ್ಯರ ಭಾಷಣಕ್ಕೆ ಪ್ರತಿಯಾಗಿ ಉತ್ತರಿಸಿದ ರೇವಣ್ಣ ಸದನವನ್ನು ದಾರಿ ತಪ್ಪಿಸಬೇಡಿ ಎಂದು ಪ್ರತ್ಯುತ್ತರ ನೀಡಿದ್ದಾರೆ.


ನೂತನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಈ ಹಿಂದಿನ ಬಿಜೆಪಿ ಸರ್ಕಾರದ ನಡೆಗಳನ್ನು ಲೋಕಾಯುಕ್ತ ಸಂತೋಷ್ ಹೆಗಡೆ ವರದಿ ಉಲ್ಲೇಖಿಸುವ ಮೂಲಕ ಸದನದಲ್ಲೇ ಖಂಡಿಸಿದರು. ಅಚ್ಚರಿ ಎಂದರೆ ಪ್ರಜ್ವಲ್ ರೇವಣ್ಣವರ ಮಾತುಗಳಿಗೆ ಪ್ರತಾಪ್ ಸಿಂಹ ಹಾಗೂ ಶೋಭಾ ಕರಂದ್ಲಾಜೆ ಆಕ್ಷೇಪ ವ್ಯಕ್ತಪಡಿಸಿದರಾದರೂ ತೇಜಸ್ವಿ ಸೂರ್ಯ ಮಾತ್ರ ಹಾಗೆ ಕುಳಿತಿದ್ದರು.


ಮಾಜಿ ಪ್ರಧಾನಿ ದೇವೇಗೌಡರು ಹಾಸನ ಕ್ಷೇತ್ರವನ್ನು ಮೊಮ್ಮಗನಿಗಾಗಿ ತೆರವುಗೊಳಿಸಿ ತುಮಕೂರಿನಿಂದ ಸ್ಪರ್ಧಿಸಿದ್ದರು.ಈ ಹಿನ್ನಲೆಯಲ್ಲಿ ಪ್ರಜ್ವಲ್ ರೇವಣ್ಣ ಬಿಜೆಪಿಯ ಎ. ಮಂಜು ವಿರುದ್ಧ ಗೆಲುವು ಸಾಧಿಸುವ ಮೂಲಕ ಸಂಸತ್ ಗೆ ಆಯ್ಕೆಯಾಗಿದ್ದರು. ಫಲಿತಾಂಶದ ನಂತರ ತುಮಕೂರು ಕ್ಷೇತ್ರದಿಂದ ದೇವೇಗೌಡರು ಸೋಲನ್ನು ಅನುಭವಿಸಿದ ಹಿನ್ನಲೆಯಲ್ಲಿ ಹಾಸನದ ತಮ್ಮ ಸ್ಥಾನವನ್ನು ಅಜ್ಜನಿಗೆ ಬಿಟ್ಟು ಕೊಡುವುದಾಗಿ ಹೇಳಿ ಗಮನ ಸೆಳೆದಿದ್ದರು.