ಬೆಂಗಳೂರು: ಬಿಜೆಪಿ ಪರಿವರ್ತನಾ ಯಾತ್ರೆಯ ವಿಫಲತೆ ಕುರಿತು ಬಿಬಿಎಂಪಿ ಸದಸ್ಯರ ಜೊತೆ ಸಭೆ, ಮಂಗಳೂರಿನಲ್ಲಿ ಕೋರ್ ಕಮಿಟಿ ಮೀಟಿಂಗ್ ಮತ್ತಿತರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ರಾಜ್ಯ ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವಡೇಕರ್ ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ.


COMMERCIAL BREAK
SCROLL TO CONTINUE READING

ಪ್ರಕಾಶ್ ಜಾವಡೇಕರ್ ಇಂದು ಬೆಳಿಗ್ಗೆ 12 ಗಂಟೆಗೆ ಬಿಜೆಪಿ ನಾಯಕರ ಜೊತೆ ಸಭೆ ನಡೆಸಲಿದ್ದು, ಬಿಜೆಪಿ ಪರಿವರ್ತನಾ ಯಾತ್ರೆ ವಿಫಲತೆಗೆ ಸಂಪೂರ್ಣ ಜವಾಬ್ದಾರಿರಾದ ಮಾಜಿ ಡಿಸಿಎಂ ಆರ್. ಅಶೋಕ್ ಅವರನ್ನು ತರಾಟೆಗೆ ತೆಗೆದುಕೊಳ್ಳುವ ಸಾಧ್ಯತೆ ಇದೆ. ನಂತರ ಬಿಬಿಎಂಪಿ ಸದಸ್ಯರ ಜೊತೆ ಸಮಾಲೋಚನೆ ನಡೆಸಿ ಬಿಬಿಎಂಪಿ ಚುನಾವಣೆಯಲ್ಲಿ ಹಿನ್ನೆಡೆ ಹೊಂದಲು ಕಾರಣಗಳೇನು ಎಂಬುದರ ಬಗ್ಗೆ ಮಾಹಿತಿ ಕಲೆಹಾಕಲಿದ್ದಾರೆ. ಆನಂತರದಲ್ಲಿ ಈ ಎಲ್ಲಾ ಮಾಹಿತಿಗಳನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾಗೆ ನೀಡಲಿದ್ದಾರೆ.


ಸಭೆ ಮುಕ್ತಾಯಗೊಂಡ ಬಳಿಕ ಸುದ್ದಿಗೋಷ್ಠಿ ನಡೆಸಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಉಂಟಾದ ಗೊಂದಲಗಳಿಗೆ ಸ್ಪಷ್ಟೀಕರಣ ನೀಡುವ ಸಾಧ್ಯತೆ ಇದೆ.