ಹುಬ್ಬಳ್ಳಿ: ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಕೈಗೊಂಡ ಕ್ರಮ ಸರಿಯಾಗಿಯೇ ಇದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಮರ್ಥಿಸಿದರು.


COMMERCIAL BREAK
SCROLL TO CONTINUE READING

ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿ, ಉನ್ನತ ಹುದ್ದೆ, ಅಧಿಕಾರದಲ್ಲಿ ಇರುವವರಿಗೆ ಕಾನೂನು ಮತ್ತು ಸಂವಿಧಾನದ ಭಯ ಇರಬೇಕಾಗುತ್ತದೆ. ಈ ನಿಟ್ಟಿನಲ್ಲಿ ರಾಜ್ಯಪಾಲರು ಅಳೆದು ತೂಗಿ ಕ್ರಮ ಜರುಗಿಸಿದ್ದಾರೆ ಎಂದು ಹೇಳಿದರು.


ಇದನ್ನೂ ಓದಿ:ವೈದ್ಯ ವಿದ್ಯಾರ್ಥಿನಿ ಕೊಲೆ ಪ್ರಕರಣ: ಖಾಸಗಿ ಆಸ್ಪತ್ರೆಗಳ ಒಪಿಡಿ ಬಂದ್‌ ಮಾಡಿ ಪ್ರತಿಭಟನೆ


ತನಿಖೆಗೆ ಸಿಎಂ ಸಹಕರಿಸಲಿ: ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಕೇಳಿಬಂದ ಭ್ರಷ್ಟಾಚಾರ ಆರೋಪದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿದ್ದಾರೆ. ಲೋಕಾಯುಕ್ತ ಅಥವಾ ಸ್ಥಳೀಯ ಅಧಿಕಾರಿಗಳಿಂದಲೇ ತನಿಖೆ ನಡೆಯುತ್ತದೆ. ಸಿಎಂ ಸಂಪೂರ್ಣ ತನಿಖೆಗೆ ಸಹರಿಸಲಿ ಎಂದು ಪ್ರಲ್ಹಾದ ಜೋಶಿ ಸಲಹೆ ನೀಡಿದ್ದಾರೆ.
 
ಸಿಎಂ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಲಿ: ಹಿಂದೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಮ್ಮ ವಿರುದ್ಧ ಆರೋಪ ಬರುತ್ತಲೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದರು ಎಂದು ಜೋಶಿ ನೆನಪಿಸಿದರು


ಕಾನೂನು ಹೋರಾಟ ನಡೆಸಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೇಕಿದ್ದರೆ ಕಾನೂನು ಹೋರಾಟ ಮಾಡಲಿ. ಒಬ್ಬ ಸಾಮಾನ್ಯ ನಾಗರಿಕನಿಗೂ ಕಾನೂನು ಹೋರಾಟಕ್ಕೆ ಡಾ.ಅಂಬೇಡ್ಕರ್ ರಚಿಸಿದ ಸಂವಿಧಾನ ಅವಕಾಶ ಮಾಡಿಕೊಟ್ಟಿದೆ ಎಂದು ಹೇಳಿದರು.


ಇದನ್ನೂ ಓದಿ:ಕಾಂಗ್ರೆಸ್‌ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ವಿ.ಸತ್ಯ ನೇಮಕ


ಸಾರ್ವಜನಿಕ ಬದುಕಿನಲ್ಲಿ ಆಳುವವರು ಮೊದಲು ಶುದ್ಧ ಹಸ್ತರಾಗಿರಬೇಕು. ಆಗ ಪ್ರಜಾಪ್ರಭುತ್ವದ ಮೇಲೆ ಜನಕ್ಕೆ ನಂಬಿಕೆ ಬರುತ್ತದೆ. ಹಾಗಾಗಿ ಸಿಎಂ ಸಿದ್ದರಾಮಯ್ಯ ಅವರು ಮೊದಲು ರಾಜೀನಾಮೆ ನೀಡಲಿ. ತನಿಖೆಗೆ ಸಹಕರಿಸಲಿ ಎಂದು ಜೋಶಿ ಒತ್ತಾಯಿಸಿದರು.


ಕೇಂದ್ರ ತನಿಖೆ ನಡೆಸುತ್ತಿಲ್ಲ: ಕೇಂದ್ರದ ಯಾವುದೇ ಸಂಸ್ಥೆಗಳು ತನಿಖೆ ನಡೆಸುತ್ತಿಲ್ಲ. ರಾಜ್ಯದಲ್ಲಿ ಅವರದ್ದೇ ಸರ್ಕಾರವಿದೆ. ಲೋಕಾಯುಕ್ತದಂತಹ ತನಿಖೆ ಎದುರಿಸಲಿ ಎಂದು ಹೇಳಿದರು.


ತನಿಖೆಗೆ ಸಿಎಂಗೆ ಏಕೆ ಭಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವಾಗಲೂ ತಾವು ಶುದ್ಧ ಹಸ್ತರು. ನನ್ನ ರಾಜಕೀಯ ಜೀವನ ತೆರೆದ ಪುಸ್ತಕ ಎನ್ನುತ್ತಾರೆ. ಹಾಗಿದ್ದರೆ ಯಾವುದೇ ತನಿಖೆ ನಡೆದರು ಭಯವೇಕೆ? ಎಂದು ಪ್ರಶ್ನಿಸಿದರು.


ಇದನ್ನೂ ಓದಿ:ಸಕಲೇಶಪುರದಲ್ಲಿ ದಿಢೀರ್‌ ಭೂ ಕುಸಿತ : ರೈಲು ಸಂಚಾರ ಸ್ಥಗಿತ


ರಾಜಕಾರಣ ಮಾಡಲು ಹೊರಟರೆ ಜನರೇ ಉತ್ತರ ಕೊಡುತ್ತಾರೆ: ರಾಜ್ಯಪಾಲರು ಸಿಎಂ ಮೇಲೆ ತನಿಖೆಗೆ ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿರುವುದನ್ನು ಕಾಂಗ್ರೆಸ್ ರಾಜಕೀಯ ಮಾಡಲು ಹೊರಟರೆ ಜನರೇ ಅದಕ್ಕೆ ಉತ್ತರ ಕೊಡುತ್ತಾರೆ. ಸಿಎಂ ಸಿದ್ದರಾಮಯ್ಯ ಅವರನ್ನು ಈಗ ಕೇಂದ್ರದ ಯಾವುದೇ ತನಿಖಾ ಸಂಸ್ಥೆಗಳು ಬಂಧಿಸಲು ಹೊರಟಿಲ್ಲ. ಹಾಗಿದ್ದ ಮೇಲೆ ಪ್ರತಿಭಟನೆ, ಪ್ರತಿರೋಧವೇಕೆ? ಎಂದು  ಸಚಿವ ಜೋಶಿ ಪ್ರಶ್ನಿಸಿದರು.


ಹಂಸರಾಜ ಭಾರದ್ವಜ್ ಕಾಂಗ್ರೆಸ್ ಏಜೆಂಟರಾಗಿದ್ದರೆ?: ಪ್ರಸ್ತುತ ರಾಜ್ಯಪಾಲರನ್ನು ಬಿಜೆಪಿ ಏಜೆಂಟ್ ಎನ್ನುವುದು ಸರಿಯಲ್ಲ. ಹಾಗಾದರೆ ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ಇದ್ದ ರಾಜ್ಯಪಾಲ ಹಂಸರಾಜ ಭಾರದ್ವಜ ಅವರು ಕಾಂಗ್ರೆಸ್ ಏಜೆಂಟರಾಗಿದ್ದಾರೆ? ಎಂದು ಪ್ರಶ್ನಿಸಿದ ಪ್ರಲ್ಹಾದ ಜೋಶಿ, ಸಾಂವಿಧಾನಿಕವಾಗಿ ಗೌರವಾನ್ವಿತ ಹುದ್ದೆಯಲ್ಲಿ ಇರುವವರ ಬಗ್ಗೆ ಹೀಗೆ ಹಗುರವಾಗಿ  ಮಾತನಾಡುವುದು ಸರಿಯಲ್ಲ ಎಂದು ಖಂಡಿಸಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ