ಸಿದ್ದರಾಮಯ್ಯ ಅಂದೂ ಭ್ರಷ್ಟಾಚಾರಿ, ಇಂದೂ ಭ್ರಷ್ಟಾಚಾರಿ; ಸಿಎಂ ಮನೆಗೆ ಹೋಗೋ ಕಾಲ ಬಂದಿದೆ!
Valmiki Corporation & MUDA scam: ವಾಲ್ಮೀಕಿ ನಿಗಮ ಮತ್ತು ಭ್ರಷ್ಟಾಚಾರ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ನೇರ ಪಾತ್ರವಿದೆ. ಹೀಗಾಗಿ ಇದರ ವಿರುದ್ಧ ಕಾನೂನು ಮತ್ತು ರಾಜಕೀಯವಾಗಿ ಹೋರಾಟ ಮಾಡಿ ಈ ಭ್ರಷ್ಟಾಚಾರ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಹಾಡುತ್ತೇವೆ ಅಂತಾ ಪ್ರಲ್ಹಾದ್ ಜೋಶಿ ಎಚ್ಚರಿಸಿದರು.
ಬೆಂಗಳೂರು: ವಾಲ್ಮೀಕಿ ನಿಗಮ ಮತ್ತು ಮುಡಾ ಹಗರಣದಲ್ಲಿ ಕಾಂಗ್ರೆಸ್ ಹೈಕಮಾಂಡ್ ಸಹ ಶೇರ್ ಹೊಲ್ಡರ್ಸ್ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ನೇರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ NDA ಮೈತ್ರಿಕೂಟದ ನೇತೃತ್ವದಲ್ಲಿ ನಡೆಸಿದ ʼಮೈಸೂರು ಚಲೋʼ ಪಾದಯಾತ್ರೆ ಬಹಿರಂಗ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರು ಈ ಹಗರಣಗಳಲ್ಲಿ ಪಾಲುದಾರರು. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆ ಕೇಳುವ ಧೈರ್ಯ ಅವರಿಗಿಲ್ಲವಾಗಿದೆ. ಕಾಂಗ್ರೆಸ್ ಹೈಕಮಾಂಡ್‌ನ ಈ ಇಬ್ಬರೂ ನಾಯಕರು ಭ್ರಷ್ಟಾಚಾರ ಪ್ರಕರಣದಲ್ಲಿ ಬೇಲ್ ಪಡೆದು ಹೊರಗಿದ್ದಾರೆ. ಈಗ ರಾಜ್ಯದಲ್ಲಿ ವಾಲ್ಮೀಕಿ, ಮುಡಾ ಹಗರಣದಲ್ಲಿ ಜೈಲಿಗೆ ಹೋಗುವವರನ್ನು ತಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಇದನ್ನೂ ಓದಿ: ಡಿ ದೇವರಾಜು ಅರಸು ಹಿಂದುಳಿದ ವರ್ಗದ ಸಮುದಾಯದಗಳಿಗೆ ವಿವಿಧ ಯೋಜನೆಗಳ ಸಾಲ ಸೌಲಭ್ಯಗಳ ಅರ್ಜಿ ಆಹ್ವಾನ
ಸಿಎಂ ಮನೆಗೆ ಹೋಗೋ ಕಾಲ ಬಂದಿದೆ
ವಾಲ್ಮೀಕಿ ನಿಗಮ ಮತ್ತು ಭ್ರಷ್ಟಾಚಾರ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ನೇರ ಪಾತ್ರವಿದೆ. ಹೀಗಾಗಿ ಇದರ ವಿರುದ್ಧ ಕಾನೂನು ಮತ್ತು ರಾಜಕೀಯವಾಗಿ ಹೋರಾಟ ಮಾಡಿ ಈ ಭ್ರಷ್ಟಾಚಾರ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಹಾಡುತ್ತೇವೆ ಅಂತಾ ಪ್ರಲ್ಹಾದ್ ಜೋಶಿ ಎಚ್ಚರಿಸಿದರು.
ರಿಡು- 80 ಲಕ್ಷ ವಾಚ್ ರೂವಾರಿ ಯಾರು?
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತೆತ್ತಿದರೆ ತಮ್ಮ ಜೀವನ ತೆರೆದ ಪುಸ್ತಕ, ತಾವು ಶುದ್ಧ ಹಸ್ತದ ರಾಜಕಾರಣ ಎನ್ನುತ್ತಾರೆ. ಆದರೆ 2013-18ರವರೆಗೆ ರಿಡು ಮಾಡಿದ್ಯಾರು? 80 ಲಕ್ಷ ರೂ. ವಾಚ್ ಕಟ್ಟಿ ವಿವಾದವಾಗುತ್ತಲೇ ವಾಪಸ್ ಕೊಟ್ಟಿದ್ಯಾರು? ಎಂದು ಪ್ರಶ್ನಿಸಿದ ಪ್ರಲ್ಹಾದ್ ಜೋಶಿ, ಸಿಎಂ ಸಿದ್ದರಾಮಯ್ಯ ಅಂದೂ ಭ್ರಷ್ಟಾಚಾರಿ, ಇಂದೂ ಭ್ರಷ್ಟಾಚಾರಿಯೇ ಎಂದು ಆರೋಪಿಸಿದರು.
ಇದನ್ನೂ ಓದಿ: ಬಿ.ಎಸ್.ಯಡಿಯೂರಪ್ಪ & ವಿಜಯೇಂದ್ರ ವಿರುದ್ಧ ಬಸನಗೌಡ ಪಾಟೀಲ್ ವಾಗ್ದಾಳಿ!
ಭ್ರಷ್ಟ ಕಾಂಗ್ರೆಸ್ ಕಿತ್ತೊಗೆಯಿರಿ
ದೇಶದಲ್ಲೇ ಆಗಲಿ, ರಾಜ್ಯದಲ್ಲೇ ಆಗಲಿ ಕಾಂಗ್ರೆಸ್ ಆಡಳಿತ ಇದ್ದಾಗ ಭ್ರಷ್ಟಾಚಾರದಲ್ಲಿ ಮುಳುಗಿದೆ. ಭ್ರಷ್ಟಾಚಾರ ಕಾಂಗ್ರೆಸ್ಸಿಗರಿಗೆ ರಕ್ತಗತವಾಗಿ ಬಂದಿದ್ದು, ಕಾಂಗ್ರೆಸ್ ಪಕ್ಷವನ್ನು ಅಧಿಕಾರದಿಂದ ಕಿತ್ತೆಸೆಯಿರಿ ಎಂದು ಇದೇ ವೇಳೆ ಪ್ರಲ್ಹಾದ್ ಜೋಶಿ ಕರೆ ನೀಡಿದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.