ಹುಬ್ಬಳ್ಳಿ : ರಾಜ್ಯದಲ್ಲಿ ಕಾಂಗ್ರೆಸ್, ಪಾಕಿಸ್ತಾನದ ಮಾದರಿಯಲ್ಲಿ ಆಡಳಿತ ನಡೆಸುತ್ತಿದ್ದು, ಬಹಳ ದಿನ ಉಳಿಯಲ್ಲ ಈ ಸರ್ಕಾರ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ ನಡೆಸಿದರು.


COMMERCIAL BREAK
SCROLL TO CONTINUE READING

ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿ, ಇನ್ನು ಮೂರು, ಮೂರೂವರೆ ವರ್ಷದಲ್ಲಿ ಈ ಸರ್ಕಾರ ಮನೆಗೆ ಹೋಗೋದೇ! ಎಂದು ಹೇಳಿದರು. ಅಲ್ಲದೆ, ನಾಗಮಂಗಲ ಗಲಭೆಯಲ್ಲಿ ಗಣಪತಿ ಪ್ರತಿಷ್ಠಾಪಿಸಿದ ಮಂಡಳಿಯವರನ್ನೇ A 1 ಆರೋಪಿಯನ್ನಾಗಿ ಮಾಡಿದ್ದಾರೆ. ಗೃಹಮಂತ್ರಿ ಮತ್ತು ಎಸ್ಪಿಗೆ ಮಾನಾ- ಮರ್ಯಾದೆ ಇದೆಯೇ? ಎಂದು ಜೋಶಿ ತರಾಟೆಗೆ ತೆಗೆದುಕೊಂಡರು.


ಇದನ್ನೂ ಓದಿ: "ಗಬ್ಬೆದ್ದು ನಾರುತ್ತಿರುವ ನಿಮ್ಮ ಶಾಸಕ ಮುನಿರತ್ನ ಅವರ ಬಾಯಿಯನ್ನು ಶುದ್ಧ ಮಾಡಿ"-ಸಿಎಂ ಸಿದ್ದರಾಮಯ್ಯ ವಾಗ್ದಾಳಿ


ಪೆಟ್ರೋಲ್ ಬಾಂಬ್, ಮಚ್ಚು, ಲಾಂಗ್ ತೂರಿದವರು A 1 ಆರೋಪಿಗಳಲ್ಲ!: ಗಣಪತಿ ಮೆರವಣಿಗೆ ವೇಳೆ  ಪೆಟ್ರೋಲ್ ಬಾಂಬ್, ಕಲ್ಲು ತೂರಿದವರು, ಮಚ್ಚು, ಲಾಂಗ್ ಬೀಸಿದವರು ಆಮ್ A1 ಆರೋಪಿಗಳಾಗಿ ಕಾಣಲಿಲ್ಲ ಇವರಿಗೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ಸಮಾಜ ವಿದ್ರೋಹಿಗಳನ್ನು, ಮತಾಂಧ ಶಕ್ತಿಗಳನ್ನು ಪ್ರೋತ್ಸಾಹಿಸುತ್ತಾ ಬಂದಿದೆ. ಅದರ ಪರಿಣಾಮವೇ ಈಗ ನಾಗಮಂಗಲ ಗಲಭೆ ಎಂದು ಸಚಿವ ಜೋಶಿ ಕಳವಳ ವ್ಯಕ್ತಪಡಿಸಿದರು.


ಅಧಿಕಾರಿಗಳು ಎಚ್ಚರ ವಹಿಸಲಿ: ಅಧಿಕಾರಿಗಳು ಎಚ್ಚರ ವಹಿಸಿ ಕಾರ್ಯ ನಿರ್ವಹಿಸಲಿ. ಯಾರನ್ನೋ  ಮೆಚ್ಚಿಸಲು, ಓಲೈಸಲು ಮತ್ತು ಯಾರ ಕೈಗೊಂಬೆಯಾಗಿ ಕೆಲಸ ಮಾಡಬಾರದು ಎಂದು ಪ್ರಲ್ಹಾದ ಜೋಶಿ ಎಚ್ಚರಿಸಿದರು.


ಇದನ್ನೂ ಓದಿ:ಸಕ ಮುನಿರತ್ನ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಿ, ಶಾಸಕ ಸ್ಥಾನದಿಂದ ಅನರ್ಹಗೊಳಿಸಿ : ಡಿ.ಕೆ. ಸುರೇಶ್ ಆಗ್ರಹ


ದೇವರನ್ನು ಬಂಧಿಸುವಷ್ಟು ಓಲೈಕೆ ರಾಜಕಾರಣವೇ?: ಕಾಂಗ್ರೆಸ್ ಸರ್ಕಾರದ್ದು ಇದೆಂಥ ಅತಿರೇಕ? ಹಿಂದೂ ದೇವರುಗಳನ್ನೂ  ಬಂಧಿಸುವಷ್ಟು ಓಲೈಕೆ ರಾಜಕಾರಣ ಮಾಡುತ್ತಿದೆ ಎಂದು ಹರಿಹಾಯ್ದರು.


ದೇಶಾದ್ಯಂತ ಸಂಚಲನ: ಕರ್ನಾಟಕ ಈಗ ದೇಶದಾದ್ಯಂತ ಸಂಚಲನ ಮೂಡಿಸಿದೆ. ನಾಗಮಂಗಲ ಗಲಭೆ ಖಂಡಿಸಿ ಬೆಂಗಳೂರಲ್ಲಿ ಪ್ರತಿಭಟನೆ ನಡೆಸಿದ ವೇಳೆ ಪ್ರತಿಭಟನಾಕರರ ಜತೆ ಗಣೇಶ ವಿಗ್ರಹಗಳನ್ನು ಬಂಧಿಸಿರುವುದು ವಿಪರ್ಯಾಸ ಮತ್ತು ನಾಚಿಕೆಗೇಡಿನ ಸಂಗತಿ ಎಂದು ಸಚಿವ ಜೋಶಿ ಖಂಡಿಸಿದರು.


ರಾಜ್ಯ ಕಾಂಗ್ರೆಸ್ ಸರ್ಕಾರ ವೋಟ್ ಬ್ಯಾಂಕ್ ಗಾಗಿ ಮಾಡುತ್ತಿರುವ ರಾಜಕೀಯ ತುಷ್ಟೀಕರಣದ ಪರಮಾವಧಿ ಇನ್ನೂ ಎಲ್ಲಿಗೆ ತಲುಪುತ್ತದೋ? ಎಂದರು. ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಲು ಸಿಎಂಗೆ ಆಗ್ರಹ: ನಾಗಮಂಗಲ ಗಲಭೆ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ರಮ ಕೈಗೊಳ್ಳಬೇಕು ಎಂದು ಸಚಿವ ಪ್ರಲ್ಹಾದ ಜೋಶಿ ಆಗ್ರಹಿಸಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.