ಹುಬ್ಬಳ್ಳಿ: ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ತನಿಖೆ ನಡೆಸಿ ನ್ಯಾಯ ಕೊಡಿಸುವ ಬದಲು ಸಿಎಂ, ಡಿಸಿಎಂ ಅತ್ಯಂತ ಕ್ಷುಲ್ಲಕ ರಾಜಕಾರಣ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದ್ದಾರೆ. ಪ್ರಜ್ವಲ್ ರೇವಣ್ಣ ವಿರುದ್ಧ ಏಕೆ ತಕ್ಷಣ FIR ದಾಖಲಿಸಲಿಲ್ಲ? ಬಂಧಿಸಲಿಲ್ಲ? ಎಂದು ಪ್ರಶ್ನಿಸಿದ್ದಾರೆ. 


COMMERCIAL BREAK
SCROLL TO CONTINUE READING

ನೈತಿಕತೆ ಇದ್ರೆ ಉತ್ತರಿಸಿ: ಏಪ್ರಿಲ್ 21ರಂದೇ ಪ್ರಜ್ವಲ್ ರೇವಣ್ಣ ವಿಡಿಯೋಗಳು ಹರಿದಾಡಿವೆ.22ಕ್ಕೇ ಅವರ  ಮೇಲೆ ಏಕೆ ಪ್ರಕರಣ ದಾಖಲಿಸಲಿಲ್ಲ? ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನೈತಿಕತೆ ಇದ್ದರೆ ಇದಕ್ಕೆ ಉತ್ತರಿಸಲಿ ಎಂದು ಜೋಶಿ ಸವಾಲು ಹಾಕಿದ್ದಾರೆ. 


ಇದನ್ನೂ ಓದಿ : ಬಿಜೆಪಿಯವರೇ ಸಿಬಿಐ ಯನ್ನು ಕರಪ್ಷನ್‌ ಬ್ಯೂರೋ ಆಫ್‌ ಇನ್ವೆಸ್ಟಿಗೇಷನ್ ಎಂದಿದ್ದರು: ಸಿಎಂ ಸಿದ್ದರಾಮಯ್ಯ


ಸರ್ಕಾರದಿಂದ ರಾಜಕಾರಣ:
ರೇವಣ್ಣ ಪ್ರಕರಣದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಬರೀ ರಾಜಕೀಯ ಮಾಡಲು ಹೊರಟಿದೆ.ಉನ್ನತ ತನಿಖೆ, ನ್ಯಾಯ ಕಲ್ಪಿಸುವ ಯೋಚನೆಯೆ ಇಲ್ಲ ಎಂದು ಆರೋಪಿಸಿದ್ದಾರೆ. ಪ್ರಜ್ವಲ್ ರೇವಣ್ಣ ಅವರ ಪ್ರಕರಣದಲ್ಲಿ ತನಿಖೆ ನಡೆಸುವುದಲ್ಲದೆ,ಕಠಿಣ ಶಿಕ್ಷೆ ಆಗಲೇಬೇಕು.ಆದರೆ, ಸರ್ಕಾರ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳದೇ, ಕ್ಷುಲ್ಲಕ ರಾಜಕಾರಣ ಮಾಡುತ್ತಿದೆ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. 


ಕಾಂಗ್ರೆಸ್ ಗೆ ತನಿಖೆಗಿಂತ, ನ್ಯಾಯಕ್ಕಿಂತ ಹೆಚ್ಚಾಗಿ ರಾಜಕಾರಣ ಬೇಕಾಗಿದೆ. ರೇವಣ್ಣ ಅವರ ಪ್ರಕರಣದಲ್ಲಿ ಸರ್ಕಾರ ತಪ್ಪು ಮಾಡುತ್ತಿದೆ ಎಂದು ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದ್ದಾರೆ. 


ಇದನ್ನೂ ಓದಿ : ಹಿಂದೂ ಜನಸಂಖ್ಯೆ ಕುಸಿತಕ್ಕೆ ಸಚಿವ ಪ್ರಲ್ಹಾದ ಜೋಶಿ ತೀವ್ರ ಕಳವಳ!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.