ಪ್ರಚೋದನಕಾರಿ ಭಾಷಣ: ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಮೋದ್ ಮುತಾಲಿಕ್ ಪ್ರವೇಶ ನಿಷೇಧ

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಕಡಬ ಮತ್ತು ಸುಳ್ಯ ತಾಲ್ಲೂಕುಗಳಿಗೆ ಮುತಾಲಿಕ್ ಪ್ರವೇಶಕ್ಕೆ ನಿಷೇಧ ವಿಧಿಸಲಾಗಿದೆ.

Written by - Puttaraj K Alur | Last Updated : Jul 28, 2022, 09:09 PM IST
  • ಪ್ರಚೋದನಕಾರಿ ಭಾಷಣ ಹಿನ್ನೆಲೆ ದಕ್ಷಿಣ ಜಿಲ್ಲೆಗೆ ಪ್ರಮೋದ್ ಮುತಾಲಿಕ್ ಪ್ರವೇಶಕ್ಕೆ ನಿರ್ಬಂಧ
  • ಇಂದಿನಿಂದ ಮುಂದಿನ ಆದೇಶದವರೆಗೆ ಮುತಾಲಿಕ್‌ ಪ್ರವೇಶ ನಿಷೇಧಿಸಿ ದಕ್ಷಿಣ ಕನ್ನಡ DC ರಾಜೇಂದ್ರ ಕೆವಿ ಆದೇಶ
  • ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮುತಾಲಿಕ್ ದಕ್ಷಿಣ ಕನ್ನಡ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ
ಪ್ರಚೋದನಕಾರಿ ಭಾಷಣ: ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಮೋದ್ ಮುತಾಲಿಕ್ ಪ್ರವೇಶ ನಿಷೇಧ title=
ಪ್ರಮೋದ್ ಮುತಾಲಿಕ್ ಪ್ರವೇಶಕ್ಕೆ ನಿರ್ಬಂಧ

ಮಂಗಳೂರು: ಪ್ರಚೋದನಕಾರಿ ಭಾಷಣ ಹಿನ್ನೆಲೆ ದಕ್ಷಿಣ ಜಿಲ್ಲೆಗೆ ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುತಾಲಿಕ್ ಪ್ರಚೋದನಕಾರಿ ಭಾಷಣ ಮಾಡುವ ಸಾಧ‍್ಯತೆ ಹಿನ್ನೆಲೆ ಈ ಕ್ರಮ ತೆಗೆದುಕೊಳ್ಳಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಗೆ ಇಂದಿನಿಂದ(ಜುಲೈ 28) ಮುಂದಿನ ಆದೇಶದವರೆಗೆ ಮುತಾಲಿಕ್‌ ಪ್ರವೇಶವನ್ನು ನಿಷೇಧಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆವಿ ಆದೇಶ ಹೊರಡಿಸಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮುತಾಲಿಕ್ ದಕ್ಷಿಣ ಕನ್ನಡ ಜಿಲ್ಲೆಯ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಕಾರ್ಯಕರ್ತರ ಹತ್ಯೆ; ಇದು ಕಾಣದ ಕೈಗಳ ಷಡ್ಯಂತ್ರವೆಂದ ಬಿಜೆಪಿ

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಕಡಬ ಮತ್ತು ಸುಳ್ಯ ತಾಲ್ಲೂಕುಗಳಿಗೆ ಮುತಾಲಿಕ್ ಪ್ರವೇಶಕ್ಕೆ ನಿಷೇಧ ವಿಧಿಸಲಾಗಿದೆ. ಮಂಗಳೂರು ನಗರ ಪೊಲೀಸ್‌ ಕಮೀಷನರೇಟ್‌ ವ್ಯಾಪ್ತಿ ಹೊರತುಪಡಿಸಿ ಜಿಲ್ಲೆಯಲ್ಲಿ ಮುತಾಲಿಕ್‍ಗೆ ಪ್ರವೇಶವಿರುವುದಿಲ್ಲ.

ಜಿಲ್ಲೆಯ ಪ್ರಸ್ತುತ ವಿದ್ಯಮಾನ ಪರಿಗಣಿಸಿ ಅಹಿತಕರ ಘಟನೆ ನಡೆಯದಂತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಮುತಾಲಿಕ್‍ಗೆ ಜುಲೈ 28ರಿಂದ ಮುಂದಿನ ಆದೇಶದವರೆಗೆ ನಿಷೇಧ ಹೇರಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.  

ಇದನ್ನೂ ಓದಿ: ರಾಜ್ಯ ಸರ್ಕಾರಕ್ಕೆ ಮೂರು ಬೇಡಿಕೆ ಇಟ್ಟ ಕಾಂಗ್ರೆಸ್

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News