ಆಜಾನ್ ವಿರುದ್ಧ ಪ್ರಶಾಂತ್ ಸಂಬರಗಿ ನೇತೃತ್ವದ ನಿಯೋಗದಿಂದ ಕಮೀಷನರ್ಗೆ ದೂರು
ರಾಜಧಾನಿಯಲ್ಲಿರುವ ಬಹುತೇಕ ಮಸೀದಿಗಳಲ್ಲಿ ನಿಷೇಧಿತ ಅವಧಿಯಲ್ಲಿ ಮೈಕ್ ಬಳಸಿ ಶಬ್ಧ ಮಾಲಿನ್ಯವಾಗುತ್ತಿದೆ. ಇದರಿಂದ ಹಿರಿಯ ನಾಗರಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ ಎಂದು ಪ್ರಶಾಂತ್ ಸಂಬರಗಿ (Prashant Sambargi) ನೇತೃತ್ವದ ನಿಯೋಗ ಪೊಲೀಸ್ ಕಮೀಷನರ್ ಕಮಲ್ ಪಂತ್ ಗೆ (Kamal Pant) ದೂರು ನೀಡಿದೆ.
ಬೆಂಗಳೂರು: ರಾಜಧಾನಿಯಲ್ಲಿರುವ ಬಹುತೇಕ ಮಸೀದಿಗಳಲ್ಲಿ ನಿಷೇಧಿತ ಅವಧಿಯಲ್ಲಿ ಮೈಕ್ ಬಳಸಿ ಶಬ್ಧ ಮಾಲಿನ್ಯವಾಗುತ್ತಿದೆ. ಇದರಿಂದ ಹಿರಿಯ ನಾಗರಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಪ್ರಶಾಂತ್ ಸಂಬರಗಿ (Prashant Sambargi) ನೇತೃತ್ವದ ನಿಯೋಗ ಪೊಲೀಸ್ ಕಮೀಷನರ್ ಕಮಲ್ ಪಂತ್ ಗೆ (Kamal Pant) ದೂರು ನೀಡಿದೆ.
ಇದನ್ನೂ ಓದಿ: ‘2023 ಮತ್ತೆ ಅಧಿಕಾರಕ್ಕೆ ಬರುತ್ತೇವೆಂದು ಕನಸು ಕಾಣದಿರಿ, ಜನ ಮೂರ್ಖರಲ್ಲ’
ಆಯುಕ್ತರಿಗೆ ದೂರು ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಪ್ರಶಾಂತ್ ಸಂಬರಗಿ, ಇವತ್ತಿನ ನಾಗರೀಕ ಸಮಾಜದಲ್ಲಿ ಶಬ್ಧ ಮಾಲಿನ್ಯ ಮಾರಕವಾಗಿದೆ. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಗೈಡ್ ಲೈನ್ಸ್ ಹಾಗೂ ಹೈಕೋರ್ಟ್ (High Court) ಆದೇಶವಿದ್ದರೂ ಮಸೀದಿ ಸೇರಿದಂತೆ ಇನ್ನಿತರ ಧಾರ್ಮಿಕ ಕೇಂದ್ರಗಳಲ್ಲಿ ಶಬ್ಧ ಮಾಲಿನ್ಯವಾಗುತ್ತಿದೆ. ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ರ ವರೆಗೆ ಆಂಪ್ಲಿಫೈಡ್ ಬಳಸಿ ಸೌಂಡ್ ಮಾಡಬಾರದು ಅಂತಾ ದೇಶದ ವಿವಿಧ ಕೋರ್ಟ್ ಆದೇಶಿಸಿವೆ ಎಂದು ಹೇಳಿದರು.
ನಗರದಲ್ಲಿರುವ ಬಹುತೇಕ ಮಸೀದಿಗಳಲ್ಲಿ ಮೈಕ್ ಇಟ್ಟು ಅಜಾನ್ (Azan) ಮಾಡ್ತಿದ್ದಾರೆ. ಮುಂಜಾನೆ 5 ಗಂಟೆಗೆ ಅಜಾನ್ ಕೂಗ್ತಿದ್ದಾರೆ. ಇದರಿಂದ ಸಾರ್ವಜನಿಕರಿಗೆ ಸಾಕಷ್ಟು ರೀತಿಯ ತೊಂದರೆಯಾಗುತ್ತಿದೆ. ಈ ನಿಟ್ಟಿನಲ್ಲಿ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ (Supreme Court) ಗೈಡ್ ಲೈನ್ಸ್ ಜಾರಿ ಮಾಡುವಂತೆ ಕಮೀಷನರ್ ಗೆ ದೂರು ನೀಡಿದ್ದೇವೆ ಎಂದರು.
ಇದನ್ನೂ ಓದಿ: ನಿಷೇಧಿತ ಸಮಯದಲ್ಲಿ ಧಾರ್ಮಿಕ ಕೇಂದ್ರಗಳಲ್ಲಿ ಮೈಕ್ ಬಳಸಿದ್ರೆ ಕಾನೂನು ಕ್ರಮ: ಕಮಲ್ ಪಂತ್
ಬೆಳಗ್ಗೆ 5 ಗಂಟೆಗೆ ಕೂಗುವ ಆಜಾನ್ ವಿಚಾರವಾಗಿ ಎಸಿಪಿಗಳಿಗೆ ಸೂಚನೆ ನೀಡಲಾಗುತ್ತೆ.ನಿರ್ಧಿಷ್ಟ ಕ್ರಮ ಕೈಗೊಳ್ಳುವ ಬಗ್ಗೆ ಕಮೀಷನರ್ ಭರವಸೆ ನೀಡಿದ್ದಾರೆ. ಆಜಾದ್ ಪರವಾಗಿ ಇಬ್ಬರು ಮಾಜಿ ಮುಖ್ಯ ಮಂತ್ರಿಗಳು ಮಾತನಾಡುತ್ತಿದ್ದಾರೆ. ಸುಪ್ರೀಂಕೋರ್ಟ್ ಹಾಗೂ ಹೈಕೋರ್ಟ್ ನಿರ್ದೇಶನ ಪಾಲಿಸುವುದು ಬೇಡ್ವಾ ಇವರಿಗೆ ಎಂದು ಪ್ರಶ್ನಿಸಿದರು.
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ (HD Kumaraswamy) ಹೇಳುತ್ತಾರೆ ನಾನು ಆಜಾನ್ ಕೇಳಿ ಬೆಳೆದಿದ್ದೇನೆ ಅಂತಾ. ಖಂಡಿತಾ ಸುಳ್ಳು ಅವರು ಬದುಕ್ತಿರೋದು 65 ಎಕರೆ ಪ್ರದೇಶದಲ್ಲಿರುವ ಮನೆಯಲ್ಲಿ.. ಅವರಿಗೆ ಅಲ್ಲಿ ಆಜಾನ್ ಕೇಳಿಸೋದಿಲ್ಲ ಎಂದು ಟಾಂಗ್ ನೀಡಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.