ಬೆಂಗಳೂರು: ನಕಲಿ ಧರ್ಮ ರಕ್ಷಕ ಸಂಸದ ಪ್ರತಾಪ್ ಸಿಂಹ(Pratap Simha) ಅವರ ನಾಟಕ ಬಯಲಾಗಿದೆ ಎಂದು ಕರ್ನಾಟಕ ಕಾಂಗ್ರೆಸ್ ಕಿಡಿಕಾರಿದೆ. ದೇಗುಲ ತೆರವು ವಿವಾದಕ್ಕೆ ಸಂಬಂಧಿಸಿದಂತೆ ಮಂಗಳವಾರ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ನಾನು ಸತ್ತಂಗೆ ಮಾಡ್ತೀನಿ, ನೀನು ಅತ್ತಂಗೆ ಮಾಡು ಎಂಬಂತೆ ನಕಲಿ ಧರ್ಮ ರಕ್ಷಕ ಪ್ರತಾಪ್ ಸಿಂಹ ಅವರ ನಾಟಕ ಬಯಲಾಗಿದೆ’ ಅಂತಾ ಕುಟುಕಿದೆ.   


COMMERCIAL BREAK
SCROLL TO CONTINUE READING

 #ಹಿಂದೂವಿರೋಧಿಬಿಜೆಪಿ ಹ್ಯಾಶ್ ಟ್ಯಾಗ್ ಬಳಸಿ ಟ್ವೀಟ್ ಮಾಡಿರುವ ಕಾಂಗ್ರೆಸ್(Congress), ‘ತಮ್ಮದೇ ಸರ್ಕಾರ ಅನಧಿಕೃತ ದೇವಾಲಯಗಳ ತೆರವಿಗೆ ಆದೇಶ ಹೊರಡಿಸಿದ್ದನ್ನು ಮರೆಮಾಚಿ ಜಿಲ್ಲಾಡಳಿತ ಹಾಗೂ ಅಧಿಕಾರಿಗಳ ಮೇಲೆ ಗೂಬೆ ಕೂರಿಸಿ ಪ್ರತಾಪ್ ಸಿಂಹ ಬಿಜೆಪಿ ಸರ್ಕಾರದ ಮಾನ ಉಳಿಸುವ ಡೋಂಗಿ ನಾಟಕವಾಡುತ್ತಿದ್ದಾರೆ’ ಅಂತಾ ಆಕ್ರೋಶ ವ್ಯಕ್ತಪಡಿಸಿದೆ.


Temple Demolition Controversy)ಮಾಡಬೇಕೆಂಬ ವಿಚಾರ ಈಗ ವಿವಾದದ ಸ್ವರೂಪ ಪಡೆದುಕೊಂಡಿದೆ. ಮೈಸೂರು ಭಾಗದಲ್ಲಿ ಈಗಾಗಲೇ ಹಲವಾರು ದೇಗುಲಗಳನ್ನು ನೆಲಸಮಗೊಳಿಸಲಾಗಿದೆ. ದೇಶ-ಧರ್ಮದ ವಿಚಾರದಲ್ಲಿ ನಾನು ಸದಾ ಧ್ವನಿ ಎತ್ತುತ್ತೇನೆ ಎಂದು ಹೇಳಿದ್ದ ಪ್ರತಾಪ್ ಸಿಂಹ ಹಿಂದೂ ದೇಗುಲ ತೆರವುಗೊಳಿಸುವುದನ್ನು ವಿರೋಧಿಸಿ ಜಿಲ್ಲಾಡಳಿತ ಮತ್ತು ಅಧಿಕಾರಿಗಳ ವಿರುದ್ಧ ಹರಿಹಾಯ್ದಿದ್ದರು.


ಇದನ್ನೂ ಓದಿ: Karnataka TET Result 2021: ಕರ್ನಾಟಕ ಟಿಇಟಿ ಫಲಿತಾಂಶ ಪ್ರಕಟ, ರಿಸಲ್ಟ್ ಇಲ್ಲಿ ನೋಡಿ


ಪ್ರತಾಪ್ ಸಿಂಹ ಸುಮ್ಮನೆ ನಾಟಕವಾಡುತ್ತಿದ್ದಾರೆ. ರಾಜ್ಯದಲ್ಲಿ ಅವರದೇ ಬಿಜೆಪಿ ಸರ್ಕಾರ(BJP Govt.)ವಿದೆ. ಅವರದೇ ಆಡಳಿತದಲ್ಲಿ ಹಿಂದೂ ದೇಗುಲಗಳನ್ನು ನೆಲಸಮಗೊಳಿಸಲಾಗುತ್ತಿದೆ. ಆದರೂ ಪ್ರತಾಪ್ ಸಿಂಹ ಮಾತ್ರ ಜಿಲ್ಲಾಡಳಿತ ಮತ್ತು ಅಧಿಕಾರಿಗಳ ವಿರುದ್ಧ ಮಾತನಾಡುತ್ತಿದ್ದಾರೆಂದು ಕಾಂಗ್ರೆಸ್ ಬಿಜೆಪಿ ಸಂಸದನ ವಿರುದ್ಧ ಕಿಡಿಕಾರಿತ್ತು.


BJP Govt.) ಸ್ಥಳೀಯರ ಜೊತೆ ಮಾತುಕತೆ ನಡೆಸಬೇಕಾಗಿತ್ತು.  ಹಿಂದೂ ಧರ್ಮದ ರಕ್ಷಣೆಯನ್ನು ಗುತ್ತಿಗೆ ಪಡೆದವರ ರೀತಿ ಮಾತನಾಡುವ ಬಿಜೆಪಿ ಸರ್ಕಾರಕ್ಕೆ ಇಂತಹ ದುಸ್ಸಾಹಸ ಮಾಡುವ ಮೊದಲು ಹಿಂದುತ್ವ ರಕ್ಷಣೆಯ ನೆ‌ನಪಾಗಲಿಲ್ಲವೇ?’ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕೂಡ ಪ್ರಶ್ನಿಸಿದ್ದರು.


ಇದನ್ನೂ ಓದಿ: ವಿಧಾನಸೌಧ 2ನೇ ಮಹಡಿಯಲ್ಲಿ ಬಿಯರ್ ಬಾಟಲ್ ಪತ್ತೆ: ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿಕಿಡಿ..!


ರಾಜ್ಯದಲ್ಲಿ ಹಲವು ದೇಗುಲ, ಧಾರ್ಮಿಕ ಕೇಂದ್ರಗಳನ್ನು ತೆರವುಗೊಳಿಸಲು ಆದೇಶ ಪ್ರಕಟವಾಗಿದ್ದು, ಇದಕ್ಕೆ ಸಾರ್ವಜನಿಕರು, ಸಂಘಟನೆಗಳಿಂದ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ವಿಧಾನಸಭಾ ಕಲಾಪದಲ್ಲಿಯೂ ಈ ಬಗ್ಗೆ ಚರ್ಚೆ ನಡೆಯುತ್ತಿದೆ. ಸದ್ಯ ಜನಾಕ್ರೋಶಕ್ಕೆ ಮಣಿದಿರುವ ಸರ್ಕಾರ ಮೈಸೂರಿನಲ್ಲಿ ಮಾತ್ರ ದೇಗುಲ ತೆರವು ಕಾರ್ಯಕ್ಕೆ ತಾತ್ಕಾಲಿಕ ಬ್ರೇಕ್​ ಹಾಕಿದೆ. ಈ ಬಗ್ಗೆ ಜಿಲ್ಲಾಡಳಿತಕ್ಕೆ ನೋಟಿಸ್ ನೀಡಿದ್ದು, ಇದರ ಬೆನ್ನಲ್ಲೇ ದೇವಸ್ಥಾನಗಳ ತೆರವು ಕಾರ್ಯವನ್ನು ನಿಲ್ಲಿಸಲಾಗಿದೆ. ಮೈಸೂರು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಅನಧಿಕೃತ ಧಾರ್ಮಿಕ ಕಟ್ಟಡಗಳ ವಿವಾದ ಇತ್ಯರ್ಥಕ್ಕೆ ರಾಜ್ಯ ಸರ್ಕಾರ ಯಾವುದೇ ತಡೆ ನೀಡಿಲ್ಲ. ರಾಜ್ಯ ಸರ್ಕಾರದ ಮುಂದಿನ ಆದೇಶ ಬರೋವರೆಗೂ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚಿಸಲಾಗಿದೆ ಎಂದು ತಿಳಿದುಬಂದಿದೆ.  


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.