ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿಗಳಿಗೆ ಆ.11ರವರೆಗೆ ನ್ಯಾಯಾಂಗ ಬಂಧನ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ  ಯುವಕನನ್ನು ಮಾರಕಾಸ್ತ್ರಗಳಿಂದ ಕಡಿದು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಾರೆ ಠಾಣೆಯ ಪೊಲೀಸರು ಝಾಕಿರ್ ಮತ್ತು ಶಫೀಕ್ ಎಂಬ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. 

Written by - Yashaswini V | Last Updated : Jul 29, 2022, 06:40 AM IST
  • ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಯುವಕನನ್ನು ಮಾರಕಾಸ್ತ್ರಗಳಿಂದ ಕಡಿದು ಕೊಲೆಗೈದ ಪ್ರಕರಣ
  • ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿರುವ ಬೆಳ್ಳಾರೆ ಠಾಣೆಯ ಪೊಲೀಸರು
  • ಕೊಲೆ ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿಗಳಿಗೆ ಆ.11ರವರೆಗೆ ನ್ಯಾಯಾಂಗ ಬಂಧನ title=
Praveen Nettaru murder case

ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಮಂಗಳವಾರ (ಜುಲೈ 26)  ರಾತ್ರಿ ನಡೆದ ಬಿಜೆಪಿ ಯುವಮೋರ್ಚಾದ ಜಿಲ್ಲಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿರುವ ಇಬ್ಬರು ಆರೋಪಿಗಳನ್ನು ಆ.11ರವರೆಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ  ಯುವಕನನ್ನು ಮಾರಕಾಸ್ತ್ರಗಳಿಂದ ಕಡಿದು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಾರೆ ಠಾಣೆಯ ಪೊಲೀಸರು ಝಾಕಿರ್ ಮತ್ತು ಶಫೀಕ್ ಎಂಬ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. 

ಇದನ್ನೂ ಓದಿ- ಸಾವಿನ ಮನೆಯಲ್ಲಿ ಸಂಭ್ರಮ ಬೇಕಾ?: ಹೆಚ್.ಡಿ.ಕುಮಾರಸ್ವಾಮಿ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಇಬ್ಬರು ಆರೋಪಿಗಳನ್ನು  ಗುರುವಾರ (ಜುಲೈ 28)  ಸಂಜೆ  ಪುತ್ತೂರಿನ ಪ್ರಧಾನ ಹಿರಿಯ ವ್ಯಾವಹಾರಿಕ ನ್ಯಾಯಾಧೀಶರು ಮತ್ತು ಹೆಚ್ಚುವರಿ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಬಂಧಿತ ಆರೋಪಿಗಳಿಬ್ಬರಿಗೂ ನ್ಯಾಯಾಧೀಶ ಗೌಡ ಆರ್.ಪಿ ಅವರು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ- ಹೊಗೆನಕಲ್ ನಲ್ಲಿ 1 ಮೀನು ಹಿಡಿದು 3 ಸಾವಿರ ಸಂಪಾದಿಸಿದ ಮೀನುಗಾರ

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ತನಿಖೆಗೆ ಅಗತ್ಯವಿದ್ದಲ್ಲಿ  ಮತ್ತೆ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಿದ್ದಾರೆ ಎಂದು ಸರ್ಕಾರಿ ಸಹಾಯಕ ಅಭಿಯೋಜಕಿ ಕವಿತಾ ಅವರು ಮಾಹಿತಿ ನೀಡಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News