ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು(32) ಬರ್ಬರ ಹತ್ಯೆಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರು ಖಂಡನೆ ವ್ಯಕ್ತಪಡಿಸಿದ್ದಾರೆ.


COMMERCIAL BREAK
SCROLL TO CONTINUE READING

ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಬೊಮ್ಮಾಯಿ, ‘ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆ ಖಂಡನೀಯ. ಇಂಥ ಹೇಯಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು. ಪ್ರವೀಣ್ ಆತ್ಮಕ್ಕೆ ಶಾಂತಿ ಸಿಗಲಿ, ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ಕರುಣಿಸಲಿ.  ಓಂ ಶಾಂತಿಃ’ ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.


ದಕ್ಷಿಣ ಕನ್ನಡದ ಬೆಳ್ಳಾರೆಯಲ್ಲಿ ಯುವಕನ ಬರ್ಬರ ಹತ್ಯೆ


ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್ ಕಟೀಲ್‌ ಟ್ವೀಟ್ ಮಾಡಿ, ‘ನಮ್ಮ ಯುವನಾಯಕ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವ ಸುದ್ದಿ ಮನಸ್ಸಿಗೆ ಆಘಾತ ನೀಡಿದೆ. ಮೃತರ ಆತ್ಮಕ್ಕೆ ಸದ್ಗತಿ ಹಾಗೂ ಅವರ ಕುಟುಂಬಕ್ಕೆ, ಬಂಧು-ಮಿತ್ರರಿಗೆ, ಪಕ್ಷದ ಕಾರ್ಯಕರ್ತರಿಗೆ ದು:ಖ ಭರಿಸುವ ಶಕ್ತಿ ಭಗವಂತ ನೀಡಲಿ’ ಎಂದು ಪ್ರಾರ್ಥಿಸಿದ್ದಾರೆ.


ಮೂರನೇ ಸುತ್ತಿನ ವಿಚಾರಣೆಗೆ ಸೋನಿಯಾ ಗಾಂಧಿಗೆ ಇಡಿ ಸಮನ್ಸ್!


ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದು, ‘ದುಷ್ಕರ್ಮಿಗಳ ಕ್ರೂರತನಕ್ಕೆ ಬಲಿಯಾದ ಬಿಜೆಪಿ ಯುವಮೋರ್ಚಾ ಸದಸ್ಯರಾದ ಪ್ರವೀಣ್ ನೆಟ್ಟಾರ್ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಇಂತಹ ಭೀಕರ ಕುಕೃತ್ಯದ ಆರೋಪಿಗಳನ್ನು ಕಠಿಣ ಶಿಕ್ಷೆಗೆ ಗುರಿಪಡಿಸಿ, ಇನ್ನೆಂದೂ ಯಾರೂ ಇಂತಹ ಕೃತ್ಯಗಳನ್ನು ನಡೆಸದಂತೆ ನ್ಯಾಯ ಒದಗಿಸಬೇಕು ಎಂದು ಸರ್ಕಾರಕ್ಕೆ ಕೋರುತ್ತಿದ್ದೇನೆ’ ಎಂದು ಹೇಳಿದ್ದಾರೆ.


ದಕ್ಷಿಣ ಕನ್ನಡದ ಸುಳ್ಯದ ನಮ್ಮ ಪಕ್ಷದ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆಯನ್ನ ಉಗ್ರವಾಗಿ ಖಂಡನೀಯ. ಈ ಹೇಯಕೃತ್ಯ ಎಸಗಿರುವ ದುಷ್ಕರ್ಮಿಗಳನ್ನ ಶೀಘ್ರ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕೆಂದು  ಮುಖ್ಯಮಂತ್ರಿ ಗಳಲ್ಲಿ ವಿನಂತಿಸುತ್ತೇನೆ. ಪ್ರವೀಣ್ ಆತ್ಮಕ್ಕೆ ಶಾಂತಿ ಸಿಗಲಿ, ಓಂ ಶಾಂತಿಃ’ ಎಂದು ಸಂತಾಪ ಸೂಚಿಸಿದ್ದಾರೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.