ಡೆಂಘೀ ನಿಯಂತ್ರಣಕ್ಕೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ: ಸುರಳ್ಕರ್ ವಿಕಾಸ್ ಕಿಶೋರ್ ಹೇಳಿಕೆ

ಬೆಂಗಳೂರು: ಮಳೆ ಬಂದಾಗ ನೀರು ಸಂಗ್ರಹವಾಗಿ ಸೊಳ್ಳೆಗಳ ಸಂತತಿ ಹೆಚ್ವಾಗಲಿದ್ದು, ಅದನ್ನು ಫಾಗಿಂಗ್ ಮತ್ತು ಔಷಧಿ ಸಿಂಪಡಿಸುವ ಮೂಲಕ ತಡೆಯಬೇಕು. ಹೂವಿನ ಕುಂಡ, ಬೀಸಾಕಿದ ಟೈರ್, ನೀರು ಸಂಗ್ರಹಿಸುವ ತೊಟ್ಟಿ, ನೀರಿನ ಬಾಟಲ್ ಸೇರಿದಂತೆ ಇನ್ನಿತರೆಡೆ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ.

Written by - Bhavya Sunil Bangera | Last Updated : May 16, 2024, 02:52 PM IST
    • ನಗರ ವ್ಯಾಪ್ತಿಯಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಡೆಂಘೀ ನಿಯಂತ್ರಣಕ್ಕೆ ಕ್ರಮ
    • ಡೆಂಘೀ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ
    • ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದ ವಿಶೇಷ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್
ಡೆಂಘೀ ನಿಯಂತ್ರಣಕ್ಕೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ: ಸುರಳ್ಕರ್ ವಿಕಾಸ್ ಕಿಶೋರ್ ಹೇಳಿಕೆ title=
Dengue Control

ಬೆಂಗಳೂರು: ನಗರ ವ್ಯಾಪ್ತಿಯಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಡೆಂಘೀ ನಿಯಂತ್ರಣಕ್ಕೆ ಈಗಾಗಲೇ ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ವಿಶೇಷ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್ ತಿಳಿಸಿದರು.

ರಾಷ್ಟ್ರೀಯ ಡೆಂಘೀ ದಿನಾಚರಣೆಯ ಅಂಗವಾಗಿ ಇಂದು ಪೂರ್ವ ವಲಯದ ರಾಮಸ್ವಾಮಿ ಪಾಳ್ಯದಲ್ಲಿ ಹಮ್ಮಿಕೊಂಡಿದ್ದ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಡೆಂಘೀ ಪ್ರಕರಣಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಪಾಲಿಕೆ ವ್ಯಾಪ್ತಿಯ ಎಲ್ಲಾ ವಾರ್ಡ್’ಗಳಲ್ಲಿ ಸೊಳ್ಳೆ ನಿಯಂತ್ರಣ ಕುರಿತು ಅರಿವು ಮೂಡಿಸುವ ಹಾಗೂ ಔಷಧಿ ಸಿಂಪಡಣೆಯನ್ನು ಈಗಾಗಲೇ ಪ್ರಾರಂಭಿಸಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: Bhavani Singh: ಮದುವೆಯಾದ ಐದು ವರ್ಷಗಳ ಬಳಿಕ ಮೊದಲ ಮಗುನಿನ ನಿರೀಕ್ಷೆಯಲ್ಲಿ ʻರಕ್ಷಾ ಬಂಧನ‌ʼ ನಟ!!

ಮಳೆ ಬಂದಾಗ ನೀರು ಸಂಗ್ರಹವಾಗಿ ಸೊಳ್ಳೆಗಳ ಸಂತತಿ ಹೆಚ್ವಾಗಲಿದ್ದು, ಅದನ್ನು ಫಾಗಿಂಗ್ ಮತ್ತು ಔಷಧಿ ಸಿಂಪಡಿಸುವ ಮೂಲಕ ತಡೆಯಬೇಕು. ಹೂವಿನ ಕುಂಡ, ಬೀಸಾಕಿದ ಟೈರ್, ನೀರು ಸಂಗ್ರಹಿಸುವ ತೊಟ್ಟಿ, ನೀರಿನ ಬಾಟಲ್ ಸೇರಿದಂತೆ ಇನ್ನಿತರೆಡೆ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ಈ ಸಂಬಂಧ ಅಂತಹ ಜಾಗದಲ್ಲಿ ನೀರು ಸಂಗ್ರಹವಾಗದಂತೆ ನೋಡಿಕೊಳ್ಳಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಆಯಾ ವಲಯದ ವಾರ್ಡ್ ಮಟ್ಟದಲ್ಲಿ ಒಂದು ವಾರ್ಡ್’ಗೆ 4 ಔಷಧಿ ಸಿಂಪಡೆಣೆ ಮಾಡುವ ತಂಡಗಳನ್ನು ನಿಯೋಜನೆ ಮಾಡಿದ್ದು, ತಾತ್ಕಾಲಿಕವಾಗಿ ನೀರು ನಿಲ್ಲುವ ಸ್ಥಳ ಹಾಗೂ ಶಾಶ್ವತವಾಗಿ ನೀರು ನಿಲ್ಲುವ ಸ್ಥಳಗಳನ್ನು ಗುರುತಿಸಿ ಫಾಗಿಂಗ್ ಮತ್ತು ಔಷಧಿ ಸಿಂಪಡಣೆ ಮಾಡಲಾಗುತ್ತದೆ ಎಂದು ಹೇಳಿದರು.

ಲಾರ್ವಾ ಸಮೀಕ್ಷೆ ಪ್ರಾರಂಭ:

ಈಡೀಸ್, ಈಜಿಪ್ಟೈ ಎಂಬ ಸೊಳ್ಳೆಗಳಿಂದ ಡೆಂಘೀ ರೋಗ ಹರಡುತ್ತದೆ. ಆ ಸೊಳ್ಳೆಗಳು ತೆರೆಡಿಟ್ಟ ನೀರಿನ ತೊಟ್ಟಿಗಳು, ಏರ್ ಕೂಲರ್’ಗಳು, ಹೂವಿನ ಕುಂಡದ ತಟ್ಟೆಗಳು, ಬಕೆಟ್’ಗಳು, ಸಿಮೆಂಟ್ ತೊಟ್ಟಿಗಳು, ತೆಂಗಿನ ಚಿಪ್ಪುಗಳು, ಒಡೆದ ಟೈರ್ ಗಳಲ್ಲಿ ಉತ್ಪತ್ತಿಯಾಗುತ್ತವೆ. ಈ ಸಂಬಂಧ ಪ್ರಾರಂಭಿಕ ಹಂತದಲ್ಲೇ ಸೊಳ್ಳೆ ನಿಯಂತ್ರಣ ಮಾಡಲು ಲಾರ್ವಾ ಉತ್ಪಿತ್ತಿಯಾಗುವ ತಾಣಗಳನ್ನು‌ ಗುರಿತಿಸಿ ನಾಶಪಡಿಸಲಾಗುತ್ತದೆ.

ಕೊಳಚೆ ಹಾಗೂ ಇನ್ನಿತರೆ ಪ್ರದೇಶಗಳಲ್ಲಿ ಪ್ರಾಥಮಿಕ ಆರೋಗ್ಯ ಸುರಕ್ಷಣಾ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ನಮ್ಮ ಕ್ಲಿನಿಕ್ ವೈದ್ಯರ ತಂಡ ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿ ಮತ್ತು ಸಿಬ್ಬಂದಿಗಳ ತಂಡಗಳನ್ನು ರಚಿಸಿಕೊಂಡು ಮನೆ-ಮನೆ ಭೇಟಿ ನೀಡಿ ಡೆಂಘೀ ಪ್ರಕರಣಗಳ ಪತ್ತೆ ಹಚ್ಚುವ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಹೇಳಿದರು.

ಡೆಂಘೀ ಜಾಗೃತಿ ಅಭಿಯಾನ:

ನಗರದಲ್ಲಿ ಡೆಂಘೀ ನಿಯಂತ್ರಿಸುವ ನಿಟ್ಟಿನಲ್ಲಿ ಸಾಮಾಜಿಕ ಜಾಲತಾಣ, ಆಯಾ ವಲಯಗಳ ವಾರ್ಡ್ ಮಟ್ಟದಲ್ಲಿ ಜಾಗೃತಿ ಜಾಥಾ ಹಾಗೂ ಪಾಲಿಕೆಯ ಕಸದ ವಾಹನಗಳಲ್ಲಿ ಧ್ವನಿವರ್ಧಕಗಳ ಮೂಲಕ ಡೆಂಘೀ ಬಗ್ಗೆ ನಾಗರೀಕರಲ್ಲಿ ಅರಿವು ಮೂಡಿಸುವ ಕೆಲಸ ಮಾಡಿಸಲಾಗುತ್ತಿದೆ. ಜೊತೆಗೆ ಮನೆ ಮನೆಗೆ ಡೆಂಗೀ ನಿಯಂತ್ರಣದ ಕುರಿತು ಬಿತ್ತಿಪತ್ರಗಳನ್ನು ವಿತರಿಸಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ.

ಮೇ 1 ರಿಂದ 13ರವರೆಗಿನ ಡೆಂಘೀ ವರದಿ:

ವಲಯ - ಪ್ರಕರಣ

ಬೊಮ್ಮನಹಳ್ಳಿ: 23

ಪೂರ್ವ: 41

ಮಹದೇವಪುರ: 44

ಆರ್.ಆರ್ ನಗರ: 08

ದಕ್ಷಿಣ: 34

ಪಶ್ಚಿಮ: 16

ಯಲಹಂಕ: 06

ದಾಸರಹಳ್ಳಿ: 00

ಒಟ್ಟು: 172 ಪ್ರಕರಣ

ಇದನ್ನೂ ಓದಿ: ಅಂದು ಮಗಳು ಎಂದು ಕರೆದವಳನ್ನೇ ಮದ್ವೆಯಾಗಿ ಇಬ್ಬರು ಮಕ್ಕಳಿಗೆ ತಂದೆಯಾದ ಸ್ಟಾರ್ ನಟ ಈತ!

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News