ಮಂಡ್ಯ: ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬೆಳಕವಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರು, ಸಿಬ್ಬಂದಿ ಇಲ್ಲದೆ 22ವರ್ಷದ ಗರ್ಭಿಣಿ ದಿವ್ಯಾ ಒಂದು ಗಂಟೆ ಕಾಲ ನರಳಾಡಿದ್ದಾರೆ.


COMMERCIAL BREAK
SCROLL TO CONTINUE READING

ಎರಡು ತಿಂಗಳ ಹಿಂದೆಯಷ್ಟೇ ಉದ್ಘಾಟನೆಗೊಂಡ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರು, ದಾದಿಯರು, ಸಿಬ್ಬಂದಿ ಇಲ್ಲದೆ ಕಡೆಗೆ ಅಂಬುಲೆನ್ಸ್ ಸೇವೆಯೂ ಇಲ್ಲದೆ ನರಳಾಡಿದ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬೆಳಕವಾಡಿ ಗ್ರಾಮದಲ್ಲಿ ನಡೆದಿದೆ. ನಂತರ ಸ್ಥಳೀಯರು ಮಳವಳ್ಳಿ ಸರ್ಕಾರಿ ಆಸ್ಪತ್ರೆಗೆ ಕರೆ ಮಾಡಿ ಅಂಬುಲೆನ್ಸ್ ವ್ಯವಸ್ಥೆ ಮಾಡಿದ್ದಾರೆ.


ಮಳವಳ್ಳಿಯ ಸರ್ಕಾರಿ ಆಸ್ಪತ್ರೆಯಲ್ಲಿ ದಿವ್ಯಾ ಗಂಡು ಮಗುವಿಗೆ ಜನ್ಮ ನೀಡಿದ್ದು, ತಾಯಿ-ಮಗು ಆರೋಗ್ಯದಿಂದಿದ್ದಾರೆ ಎಂದು ವರದಿ ತಿಳಿಸಿದೆ.


ವೈದ್ಯರು ಪ್ರತಿದಿನ ಬೆಳಕವಾಡಿಗೆ ಬಂದು ಹೋಗುವ ಪರಿಪಾಟಲನ್ನು ಇಟ್ಟುಕೊಂಡಿದ್ದು, ಅವರು ಬರಲು ನಿಗದಿತ ಸಮಯವಿಲ್ಲ. ಸಿಬ್ಬಂದಿ ಅದೇ ಗ್ರಾಮದಲ್ಲಿದ್ದರು ಇಂದು ಆಸ್ಪತ್ರೆಯ ಬಾಗಿಲು ತೆರೆದಿರಲಿಲ್ಲ. 


ಆರೋಗ್ಯ ಸಚಿವರಾದ ರಮೇಶ್ ಕುಮಾರ್ ರಾಜ್ಯದಲ್ಲಿ ಈ ರೀತಿಯ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಬೇಕಿದೆ.