ಮಾಜಿ ಸಚಿವ ಎಸ್.ಎ.ರಾಮದಾಸ್ ವಿರುದ್ಧ ನಂಬಿಕೆ ದ್ರೋಹ ಪ್ರಕರಣ ದಾಖಲಿಸಿದ್ದ ಪ್ರೇಮಕುಮಾರಿ ಚುನಾವಣೆಯಲ್ಲಿ ಸ್ಪರ್ಧೆ

ಮಾಜಿ ಸಚಿವ ಎಸ್.ಎ.ರಾಮದಾಸ್ ವಿರುದ್ಧ ನಂಬಿಕೆ ದ್ರೋಹದ ಆರೋಪ ಮಾಡಿದ್ದ ಪ್ರೇಮಕುಮಾರಿ ಅವರು 2018ರ ರಾಜ್ಯ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದಾಗಿ ಹೇಳಿದ್ದಾರೆ. 

Last Updated : Dec 15, 2017, 02:53 PM IST
ಮಾಜಿ ಸಚಿವ ಎಸ್.ಎ.ರಾಮದಾಸ್ ವಿರುದ್ಧ ನಂಬಿಕೆ ದ್ರೋಹ ಪ್ರಕರಣ ದಾಖಲಿಸಿದ್ದ   ಪ್ರೇಮಕುಮಾರಿ ಚುನಾವಣೆಯಲ್ಲಿ ಸ್ಪರ್ಧೆ title=

ಮೈಸೂರು: ಬಿಜೆಪಿಯ ಮಾಜಿ ಸಚಿವ ಎಸ್.ಎ.ರಾಮದಾಸ್ ಅವರ ವಿರುದ್ಧ ನಂಬಿಕೆ ದ್ರೋಹದ ಆರೋಪ ಮಾಡಿ ರಾಜ್ಯಾದ್ಯಂತ ಸುದ್ದಿಯಾಗಿದ್ದ ಪ್ರೇಮಕುಮಾರಿ ಅವರು 2018ರ ರಾಜ್ಯ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದಾಗಿ ಹೇಳಿದ್ದಾರೆ. 

ಈ ಹಿಂದೆ ಮಾಜಿ ಸಚಿವ ಎಸ್.ಎ.ರಾಮದಾಸ್ ಮದುವೆಯಾಗುವುದಾಗಿ ನಂಬಿಸಿ ತಮಗೆ ವಂಚಿಸಿರುವುದಾಗಿ ಆರೋಪಿಸಿ, ಆತ್ಮಹತ್ಯೆಗೂ ಪ್ರೇಮಕುಮಾರಿ ಪ್ರಯತ್ನಿಸಿದ್ದರು. ನಂತರ ದೂರು ದಾಖಲಿಸಿಕೊಂಡ ಪೊಲೀಸರು, ಪ್ರಕರಣ ನ್ಯಾಯಾಲಯದಲ್ಲಿದೆ. 

ಈ ಮಧ್ಯೆ ಪ್ರೇಮಕುಮಾರಿ ಚುನಾವಣಾ ಕಣಕ್ಕೆ ಇಳಿಯುವುದಾಗಿ ಹೇಳಿರುವುದು ರಾಮದಾಸ್ ಅವರಿಗೆ ಹೊಸ ತಲೆ ನೋವು ತಂದಿಡುವ ಸಾಧ್ಯತೆ ಇದೆ. ಜನಸೇವೆಯಲ್ಲಿ ನನಗೆ ಮುಂಚಿನಿಂದಲೂ ಆಸಕ್ತಿ ಇದ್ದು, ಚುನಾವಣೆಗೆ ಸ್ಪರ್ಧಿಸುತ್ತೇನೆ. ಯಾವ ಪಕ್ಷದಿಂದ ಸ್ಪರ್ಧಿಸುವುದಾಗಿ ಈಗಲೇ ಹೇಳುವುದಿಲ್ಲ. ಆದರೆ ರಾಮದಾಸ್ ಪ್ರಕರಣ ನ್ಯಾಯಾಲಯದಲ್ಲಿರುವುದರಿಂದ ಅದನ್ನು ಆದಷ್ಟು ಬೇಗ ಬಗೆಹರಿಸಿಕೊಂಡು ಚುನಾವಣೆಯಲ್ಲಿ  ಸ್ಪರ್ಧಿಸುವುದಾಗಿ ಪ್ರೇಮ ಕುಮಾರಿ ಹೇಳಿದ್ದಾರೆ. 

Trending News