ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು (ಸೆ.26) ವಿದ್ಯುಕ್ತ ಚಾಲನೆ ನೀಡಿದರು. ಚಾಮುಂಡಿ ಬೆಟ್ಟದಲ್ಲಿ ದೀಪ ಬೆಳಗುವ ಮೂಲಕ ಬೆಳ್ಳಿರಥದಲ್ಲಿ ಮಹಿಳಾಸುರ ಮರ್ದಿನಿ ಅವತಾರದ ಪಂಚಲೋಹದ ವಿಗ್ರಹಕ್ಕೆ ಶುಭ ವೃಶ್ಚಿಕ ಲಗ್ನದಲ್ಲಿ ರಾಷ್ಟ್ರಪತಿ ಮುರ್ಮು ಪುಷ್ಪಾರ್ಚನೆ ಮಾಡಿದರು.


COMMERCIAL BREAK
SCROLL TO CONTINUE READING

ಇದರೊಂದರಿಗೆ 412ನೇ ಅದ್ದೂರಿ ದಸರಾ ಮಹೋತ್ಸವದ ವಿಧಿವಿಧಾನಗಳು ಅಧಿಕೃತವಾಗಿ ಆರಂಭವಾದವು. ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡಿದ್ದರು.


ಇದನ್ನೂ ಓದಿ: Good News: ನವರಾತ್ರಿಗೆ ಬಂಪರ್ ಆಫರ್ ಘೋಷಿಸಿದ KSRTC


ಇದಕ್ಕೂ ಮುನ್ನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು ಕುಂಕುಮಾರ್ಚನೆಯ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ವೇದಿಕೆ ಮೇಲೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್​ ಸೇರಿದಂತೆ ಕೆಲ ಗಣ್ಯರಿಗೆ ಮಾತ್ರ ಅವಕಾಶ ನೀಡಲಾಗಿತ್ತು.  


ಇನ್ನು ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗಾಗಿ ಸೋಮವಾರ ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮುರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಸಿಎಂ ಬಸವರಾಜ ಬೊಮ್ಮಾಯಿಯವರು ಮೈಸೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಸ್ವಾಗತಿಸಿದರು. ರಾಷ್ಟ್ರಪತಿಗಳ ಕರ್ನಾಟಕ ಪ್ರವಾಸ ಹಿನ್ನೆಲೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.


ಇದನ್ನೂ ಓದಿ: "ಪೇ ಸಿಎಂ ಅಭಿಯಾನವನ್ನು ಕಾಂಗ್ರೆಸ್ ದಯವಿಟ್ಟು ಮಾಡಲಿ. ನಾವು ಅದನ್ನು ಸ್ವಾಗತಿಸುತ್ತೇವೆ"


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.