ಬೆಂಗಳೂರು : ಹಿಜಾಬ್ ಕುರಿತಂತೆ ಇಂದು ಹೈಕೋರ್ಟ್ (Karnataka High Court)ತನ್ನ ತೀರ್ಪು ಪ್ರಕಟಿಸಿದೆ. ಇದೀಗ ಹಿಜಾಬ್ ಗೆ ಅವಕಾಶ ಕೋರಿ ಕೋರ್ಟ್ ಮೆಟ್ಟಿಲೇರಿದ್ದ ವಿದ್ಯಾರ್ಥಿನಿಯರು ಸುದ್ದಿಗೋಷ್ಠಿ ನಡೆಸಿದ್ದಾರೆ (Students press meet). ಇದು ಹಿಜಾಬ್ ಗೆ ನೀಡಿದ ತಡೆ ಅಲ್ಲ, ನಮ್ಮ ಶಿಕ್ಷಣದ ತಡೆ ಎಂದು ವಿದ್ಯಾರ್ಥಿನಿಯರು ಹೇಳಿದ್ದಾರೆ. ನಮಗೆ ಧರ್ಮ ಮತ್ತು ಶಿಕ್ಷಣ ಎರಡು ಮುಖ್ಯ. ನಮಗೆ ಎರಡೂ ಅವಕಾಶ ಬೇಕು ಎಂದು ಅವರು ಹೇಳಿದ್ದಾರೆ.
ನಮಗೆ ನ್ಯಾಯಾಲಯದ ಮೇಲೆ ಬಹಳ ನಿರೀಕ್ಷೆ ಇತ್ತು, ನ್ಯಾಯಾಂಗ ವ್ಯವಸ್ಥೆಯ ಮೇಲೆ ಬಹಳ ಭರವಸೆ ಇತ್ತು. ಆದರೆ ಹೈಕೋರ್ಟ್ ನಲ್ಲಿ ತೀರ್ಪು (Karnataka high court verdict) ನಮ್ಮ ವಿರುದ್ಧ ಬಂದಿದೆ ಎಂದು ಅಳಲು ತೋಡಿಕೊಂಡಿದ್ದಾರೆ.
ಇದನ್ನೂ ಓದಿ : Hijab Row: ಶಾಲಾ-ಕಾಲೇಜುಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಡಿಕೆಶಿ ಮನವಿ
ನಮ್ಮ ದೇಶದಲ್ಲೇ ನಮಗೆ ಅನ್ಯಾಯ ಆಗಿದೆ ಎಂದು ಅನ್ನಿಸುತ್ತಿದೆ. ಇಲ್ಲಿ ನಮಗೆ ನ್ಯಾಯ ಇಲ್ಲ ಎಂದು ಅನ್ನಿಸುತ್ತಿದೆ. ನಾವು ಜಾತ್ಯಾತೀತ ದೇಶದಲ್ಲಿ ಇದ್ದೇವೆ. ಎಲ್ಲಾ ಧರ್ಮಕ್ಕೆ ಎಲ್ಲರೂ ಗೌರವ ಕೊಡಬೇಕು ಎಂದು ಅವರು ಹೇಳಿದ್ದಾರೆ. ಸರಕಾರದ ಮಧ್ಯಂತರ ಆದೇಶದ ಮೂಲಕ ಕೋರ್ಟ್ (court) ಮೇಲೆ ಒತ್ತಡ ಹಾಕಲಾಗಿದೆ. ರಾಜ್ಯ ಸರಕಾರ (State government) ಕೋರ್ಟ್ ತೀರ್ಪಿನ ಮೇಲೆ ಹಸ್ತಕ್ಷೇಪ ಮಾಡಿದೆ ಎಂದು ಅವರು ಆರೋಪಿಸಿದ್ದಾರೆ. ಸರ್ಕಾರದ ಕಡೆಯಿಂದ ಒತ್ತಡವಿದ್ದ ಕಾರಣ ಹಿಜಾಬ್ ವಿರುದ್ದ ತೀರ್ಪು ಬಂದಿದೆ ಎಂದು ಆಪಾದಿಸಿದ್ದಾರೆ (Hijab Verdict).
ತಮ್ಮ ಮುಂದಿನ ನಡೆಯ ಬಗ್ಗೆ ವಕೀಲರ ಜೊತೆ ಚರ್ಚೆ ಮಾಡುತ್ತಿದ್ದೇವೆ. ಸದ್ಯಕ್ಕೆ ಯಾವುದೇ ತೀರ್ಮಾನವನ್ನು ಕೈಗೊಂಡಿಲ್ಲ, ಈಗ ಬಂದಿರುವ ತೀರ್ಪಿನಿಂದ ಬಹಳ ನೊಂದಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ : ಹಿಜಾಬ್ ಗಾಗಿ ಪರೀಕ್ಷೆ ಬಿಟ್ಟ ಯಾದಗಿರಿಯ ವಿದ್ಯಾರ್ಥಿನಿಯರು
ರಾಜಕೀಯ ಲಾಭಕ್ಕೆ ವಿಚಾರ ವನ್ನು ಕಮ್ಯೂನಲ್ ಮಾಡಲಾಗಿದೆ ಎಂದು ವಿದ್ಯಾರ್ಥಿನಿ ಆಲಿಯಾ ಅಸಾದಿ (Aalia Asadi) ಹೇಳಿದ್ದಾರೆ. ರಾಜಕೀಯ ದುರುದ್ದೇಶದಿಂದ ವಿವಾದ ಮಾಡಲಾಗಿದೆ. ಇದರಿಂದ ಎಲ್ಲರ ಶಿಕ್ಷಣ ಕ್ಕೆ ಬಹಳ ಸಮಸ್ಯೆ ಆಗಿದೆ ಎಂದು ಹೇಳಿದ್ದಾರೆ. ಇದೆ ವೇಳೆ, ಡಾ. ಬಿ.ಆರ್ ಅಂಬೇಡ್ಕರ್ ಸಂವಿಧಾನ ರಚನೆ ಮಾಡಿದ್ದಾರೆ. ಅಂಬೇಡ್ಕರ್ ಬದುಕಿದ್ದರೆ ಇಂದು ಕಣ್ಣೀರು ಹಾಕುತ್ತಿದ್ದರು ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.
ನಮಗೆ ನ್ಯಾಯ ಸಿಗುವ ಭರವಸೆ ಇತ್ತು. ನಾವು ಹಿಜಾಬ್ ತೆಗೆದು ಕ್ಲಾಸ್ ಒಳಗೆ ಹೋಗುವುದಿಲ್ಲ. ಕಾನೂನು ರೀತಿಯಲ್ಲಿ ಹೋರಾಟ ಮಾಡುತ್ತೇವೆ. ಹಿಜಾಬ್ ಹಕ್ಕಿಗಾಗಿ ಮುಂದಿನ ಹೋರಾಟ ಮಾಡುತ್ತೇವೆ. ನಮ್ಮ ಸಂವಿಧಾನ ಹಕ್ಕಿಗಾಗಿ ಹೋರಾಡುತ್ತೇವೆ. ನಾವು ಕುರಾನ್ ಅನ್ನು ಅನುಸರಿಸುತ್ತೇವೆ. ನಾವು ಸರಕಾರದ ಆದೇಶ ಅನುಸರಿಸಬೇಕಾಗಿಲ್ಲಎಂದಿದ್ದಾರೆ. ಅಲ್ಲದೆ, ಹಿಜಾಬ್ ಧರಿಸಿಯೇ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.