ಬೆಂಗಳೂರು: ಸಂಪನ್ಮೂಲ ಕ್ರೋಢಿಕರಿಸುವ ಉದ್ದೇಶದಿಂದ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದರು.
ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಕದ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಇದೆ ಎಂದರು.
ಇದನ್ನೂ ಓದಿ: ಡಯಟ್ ನೆಪದಲ್ಲಿ ತಕ್ಷಣ ಸಕ್ಕರೆ ಸೇವನೆ ನಿಲ್ಲಸಬೇಡಿ. ಇದು ಸಖತ್ ಡೇಂಜರ್..!
ಬಿಜೆಪಿಯವರ ಆಡಳಿತಾವಧಿಯಲ್ಲಿ 14 ಬಾರಿ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಿಸಿದ್ದರು. ಆಗ ಇವರೆಲ್ಲ ಎಲ್ಲಿದ್ದರು. ಬಿಜೆಪಿಯವರು ಪ್ರತಿಭಟನೆ ಮಾಡುವುದಕ್ಕು ಮುನ್ನ ಇದನ್ನು ಯೋಚಿಸಲಿ. ಅಭಿವೃದ್ಧಿ ಕಾರ್ಯಗಳಾಗಬೇಕು ಎಂಬ ಉದ್ದೇಶದಿಂದ ಬೆಲೆ ಹೆಚ್ಚಿಸಲಾಗಿದೆ. ಗ್ಯಾರಂಟಿ ಯೋಜನೆಗಳಿಗೋಸ್ಕರ ಬೆಲೆ ಏರಿಕೆ ಮಾಡಿದ್ದಾರೆ ಎಂದು ವ್ಯಾಖ್ಯಾನ ಮಾಡುವುದು ಸರಿಯಲ್ಲ ಎಂದು ಬೇಸರಿಸಿದರು.
ಅಧಿಕಾರಕ್ಕೆ ಬಂದಾಗ ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಕಡಿಮೆ ಮಾಡುತ್ತೇವೆ ಎಂದು ಸಿಎಂ ಭರವಸೆ ಕೊಟ್ಟಿರುವ ವೀಡಿಯೋ ಬಿಡುಗಡೆ ಮಾಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, ನಾನು ಇವತ್ತು ಒಂದು ಮಾತನ್ನು ಹೇಳುತ್ತೇನೆ. ಆ ಮಾತು ಶಾಶ್ವತವಾಗಿ ಉಳಿದು ಹೋಗುತ್ತದೆಯೇ? ಸಂದರ್ಭಕ್ಕೆ ಅನುಸಾರವಾಗಿ ಆಡಳಿತ ಮಾಡಬೇಕಲ್ಲವೇ? ಎಂದರು.
ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆಯ ಕುರಿತು ಪ್ರತಿಕ್ರಿಯಿಸಿ, ತನಿಖೆ ಆಗುವವರೆಗೂ ಬಹಿರಂಗವಾಗಿ ಜನರ ಮುಂದೆ ಹೇಳಿಕೆ ನೀಡಲು ಆಗುವುದಿಲ್ಲ. ತನಿಖೆ ಆದ ನಂತರ ವರದಿ ಬರುತ್ತದೆ. ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತಾರೆ. ಯಾವುದೇ ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ನಾನು ಹೇಳಿದ್ದೀನಿ, ಮುಖ್ಯಮಂತ್ರಿಯವರು ಹೇಳಿದ್ದಾರೆ. ಯಾರನ್ನೇ ರಕ್ಷಣೆ ಮಾಡುವುದಾಗಲಿ, ಯಾರ ಬಗ್ಗೆಯೂ ಮೃದು ಧೋರಣೆ ತೋರುವುದಾಗಲಿ ಇಲ್ಲ. ಯಾವ ಒತ್ತಡಕ್ಕೂ ನಾವು ಮಣಿಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಇನ್‌ಸ್ಪೆಕ್ಟರ್ ಗಿರೀಶ್ ನಾಯ್ಕ್ ಮರುನೇಮಕ ಕುರಿತು ಮಾತನಾಡಿ, ಆಡಳಿತಾತ್ಮಕವಾಗಿ ಏನು ಅಗತ್ಯ ಇದೆಯೋ ಅದನ್ನು ಮಾಡುತ್ತೇವೆ. ಕೆಲ ಸಂದರ್ಭಗಳಲ್ಲಿ ತನಿಖಾಧಿಕಾರಿಗಳನ್ನು ಬದಲಾಯಿಸಿದ್ದೇವೆ. ಸಮರ್ಥವಾದ ಅಧಿಕಾರಿ ಯಾರು ಇದ್ದಾರೆ ಎಂಬುದನ್ನು ಪರಿಗಣಿಸಿ, ಇಲಾಖೆಯ ಹಿರಿಯ ಅಧಿಕಾರಿಗಳೇ ಮರುನೇಮಕ ಮಾಡಿಕೊಳ್ಳುತ್ತಾರೆ. ನಾವ್ಯಾರು ಸೂಚನೆ ಕೊಡುವುದಿಲ್ಲ ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ಬಿಬಿಎಂಪಿ ಚುನಾವಣೆಗೆ ತಯಾರಿ ಮಾಡಿಕೊಳ್ಳುವಂತೆ ಪಕ್ಷದ ಅಧ್ಯಕ್ಷರು ಹೇಳಿದ್ದಾರೆ. ಮೀಸಲಾತಿ ಸಂಪೂರ್ಣ ಮಾಡಬೇಕು. ಮೀಸಲಾತಿ ಸರಿಯಿಲ್ಲ ಎಂದು ಯಾರಾದರು ಕೋರ್ಟ್‌ಗೆ ಹೋಗಬಹುದು. ಇದಾಗದಂತೆ ನೋಡಿಕೊಳ್ಳಬೇಕಿದೆ ಎಂದರು.
ಇದನ್ನೂ ಓದಿ: ಬಡವರ ಮೇಲೆ ತೆರಿಗೆ ಹಾಕಿ ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡುವುದು ರಾಜ್ಯದ ಜನತೆಗೆ ಮಾಡುವ ದ್ರೋಹ:
ಮಧುಗಿರಿಯ ಚಿನ್ನೇನಹಳ್ಳಿಯಲ್ಲಿ ಕಲುಷಿತ ನೀರು ಸೇವನೆ ಘಟನೆಯ ತಪ್ಪಿತಸ್ಥ ಅಧಿಕಾರಿಗಳ ವಜಾ ಮಾಡಬೇಕು ಎಂದು ಅಶೋಕ್ ಆಗ್ರಹಿಸಿರುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಯಾರು ಅದರಲ್ಲಿ ನೇರವಾಗಿ ಭಾಗಿಯಾಗಿರುತ್ತಾರೆ ಅವರನ್ನು ಅಮಾನತು ಮಾಡಬೇಕಾಗುತ್ತದೆ. ಈಗಾಗಲೇ ಗ್ರಾಮ ಪಂಚಾಯಿತಿ ಪಿಡಿಓ, ಕಾರ್ಯದರ್ಶಿ, ವಾಟರ್‌ಮೆನ್‌ನನ್ನು ಅಮಾನತು ಮಾಡಲಾಗಿದೆ. ತನಿಖೆಯಲ್ಲಿ ಹಿರಿಯ ಅಧಿಕಾರಿಗಳ ಲೋಪ ಕಂಡು ಬಂದರೆ ಅವರನ್ನು ಅಮಾನತು ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ