ಹಾಲಿನ ಪ್ರಮಾಣ ಹೆಚ್ಚಿಸಿ ಬೆಲೆ ಏರಿಕೆ ಮಾಡಲಾಗಿದೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಇನ್ನು ಮುಂದೆ ಅರ್ಧಲೀಟರ್‌ ಹಾಲಿನ ಪ್ಯಾಕೇಟ್‌’ನಲ್ಲಿ ಮುಂದೆ 550 ಎಂಎಲ್‌ ಹಾಲು ಹಾಗೂ ಲೀಟರ್‌ ಪ್ಯಾಕೇಟ್‌’ನಲ್ಲಿ 1,050 ಎಂಎಲ್‌ ಹಾಲು ಸಿಗಲಿದೆ

Written by - Zee Kannada News Desk | Edited by - Bhavishya Shetty | Last Updated : Jun 25, 2024, 04:22 PM IST
    • ನಂದಿನಿ ಹಾಲಿನ ಪ್ಯಾಕೇಟ್‌’ಗಳಲ್ಲಿ ಹಾಲಿನ ಪ್ರಮಾಣ 50ml ಹೆಚ್ಚಳ
    • ಹೆಚ್ಚುವರಿ ಹಾಲಿಗೆ 2ರೂ ದರ ನಿಗದಿ
    • ಸಿಎಂ ಸಿದ್ದರಾಮಯ್ಯ ಮಾಧ್ಯಮ ಪ್ರಕಟಣೆ ಮೂಲಕ ಸ್ಪಷ್ಟನೆ
ಹಾಲಿನ ಪ್ರಮಾಣ ಹೆಚ್ಚಿಸಿ ಬೆಲೆ ಏರಿಕೆ ಮಾಡಲಾಗಿದೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ title=
CM Siddaramaiah

ಬೆಂಗಳೂರು: ನಂದಿನಿ ಹಾಲಿನ ಪ್ಯಾಕೇಟ್‌’ಗಳಲ್ಲಿ ಹಾಲಿನ ಪ್ರಮಾಣವನ್ನು 50ml ಹೆಚ್ಚಳ ಮಾಡಿ, ಹೆಚ್ಚುವರಿ ಹಾಲಿಗೆ 2ರೂ ದರ ನಿಗದಿಪಡಿಸಿ ಗ್ರಾಹಕರಿಂದ ಸಂಗ್ರಹಿಸಲಾಗುತ್ತಿದೆಯೇ ವಿನಃ ಹಾಲಿನ ಬೆಲೆಯಲ್ಲಿ ಏರಿಕೆ ಮಾಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಮಾಧ್ಯಮ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಇನ್ನು ಮುಂದೆ ಅರ್ಧಲೀಟರ್‌ ಹಾಲಿನ ಪ್ಯಾಕೇಟ್‌’ನಲ್ಲಿ ಮುಂದೆ 550 ಎಂಎಲ್‌ ಹಾಲು ಹಾಗೂ ಲೀಟರ್‌ ಪ್ಯಾಕೇಟ್‌’ನಲ್ಲಿ 1,050 ಎಂಎಲ್‌ ಹಾಲು ಸಿಗಲಿದೆ.

ಇದನ್ನೂ ಓದಿ: ಅನುಷ್ಕಾಗೂ ಮುನ್ನ ಈ ನಟಿಯರ ಜೊತೆ ಡೇಟಿಂಗ್ ಮಾಡಿದ್ರು ವಿರಾಟ್! ಅದ್ರಲ್ಲಿ ಒಬ್ಬಳು ಕನ್ನಡದ ಪ್ರಖ್ಯಾತ ಹೀರೋಯಿನ್!!

ಹಾಲು ಸಂಗ್ರಹಣಾ ಕೇಂದ್ರಗಳಲ್ಲಿ ಯಾವುದೇ ಕಾರಣಕ್ಕೂ ರೈತರು ಹೆಚ್ಚುವರಿಯಾಗಿ ತರುತ್ತಿರುವ ಹಾಲನ್ನು ನಿರಾಕರಿಸಬಾರದು ಎಂಬ ಸದುದ್ದೇಶದಿಂದ ಕೆಎಂಎಫ್‌ ಸಂಸ್ಥೆ ಪ್ಯಾಕೇಟ್‌’ಗಳಲ್ಲಿ ಹಾಲಿನ ಪ್ರಮಾಣವನ್ನು ಹೆಚ್ಚಳ ಮಾಡುವ ತೀರ್ಮಾನ ಮಾಡಿದೆ ಎಂದು ತಿಳಿಸಿದ್ದಾರೆ.

ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ರಾಜ್ಯದಲ್ಲಿ ಈ ಬಾರಿ ಹಾಲಿನ ಉತ್ಪಾದನೆ ಶೇ.15 ಹೆಚ್ಚಳವಾಗಿದೆ. ಹಿಂದಿನ ವರ್ಷಗಳಲ್ಲಿ ಈ ವೇಳೆಗೆ ನಿತ್ಯ ಸರಾಸರಿ 90 ಲಕ್ಷ ಲೀಟರ್‌ ಉತ್ಪಾದನೆಯಾಗುತ್ತಿದ್ದ ಹಾಲಿನ ಪ್ರಮಾಣ ಈ ಬಾರಿ ಸರಾಸರಿ 99 ಲಕ್ಷ ಲೀಟರ್‌’ಗೆ ಏರಿಕೆಯಾಗಿದೆ. ಹೀಗೆ ಹೆಚ್ಚುವರಿಯಾಗಿ ಉತ್ಪಾದನೆಯಾಗುವ ಹಾಲನ್ನು ರೈತರಿಂದ ಖರೀದಿ ಮಾಡಬೇಕು, ಯಾವುದೇ ಕಾರಣಕ್ಕೂ ಅವರಿಂದ ಹಾಲು ಪಡೆಯಲು ನಿರಾಕರಿಸಬಾರದು ಎಂಬ ಸದುದ್ದೇಶದಿಂದ ಒಂದು ಲೀಟರ್‌ ಹಾಲಿನ ಪ್ಯಾಕೇಟಿಗೆ ಹೆಚ್ಚುವರಿಯಾಗಿ 50 ಮಿ.ಲೀ ಹಾಲನ್ನು ಸೇರಿಸಿ, ಈ ಹೆಚ್ಚುವರಿ ಹಾಲಿನ ಬೆಲೆ 2 ರೂಪಾಯಿಯನ್ನು ಮಾತ್ರ ಗ್ರಾಹಕರಿಂದ ಸಂಗ್ರಹಿಸಲಾಗುತ್ತಿದೆ. ಹಾಲಿನ ಬೆಲೆಯಲ್ಲಿ ಯಾವುದೇ ಹೆಚ್ಚಳವಾಗಿರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಈವರೆಗೆ 1,000 ಮಿಲೀ ಹಾಲಿಗೆ ರೂ.42 ಹಾಗೂ 500 ಮಿ.ಲೀ ಹಾಲಿಗೆ ರೂ.22 ದರವನ್ನು ನಿಗದಿಪಡಿಸಲಾಗಿತ್ತು. ಇನ್ನು ಮುಂದೆ 1,050 ಮಿ.ಲೀ ಹಾಗೂ 550 ಮಿ.ಲೀ ಹಾಲಿನ ಪ್ಯಾಕೇಟ್‌’ಗಳನ್ನು ಮಾರಾಟ ಮಾಡಲಾಗುತ್ತಿದ್ದು, ಅದಕ್ಕೆ ಕ್ರಮವಾಗಿ ರೂ.44 ಹಾಗೂ ರೂ.24 ದರ ನಿಗದಿಪಡಿಸಲಾಗುತ್ತದೆ. ಇದು ನಾಡಿನ ಲಕ್ಷಾಂತರ ಹೈನುಗಾರರ ಹಿತದೃಷ್ಟಿಯಿಂದ ಕೆಎಂಎಫ್‌ ಸಂಸ್ಥೆಯು ತೆಗೆದುಕೊಂಡ ನಿರ್ಣಯವಾಗಿದ್ದು, ಹೆಚ್ಚುವರಿಯಾಗಿ ಉತ್ಪಾದನೆಯಾಗುತ್ತಿರುವ ಹಾಲನ್ನು ಗ್ರಾಹಕರಿಗೆ ನೇರವಾಗಿ ತಲುಪಿಸುವ ಸದುದ್ದೇಶವನ್ನು ಹೊಂದಿದೆ ಎಂದಿದ್ದಾರೆ.

ಈಗಾಗಲೇ ಗರಿಷ್ಠ ಪ್ರಮಾಣದ ಹಾಲನ್ನು ಹಾಲಿನ ಪೌಡರ್‌ ತಯಾರಿಕೆ ಮಾಡುವ ಉದ್ದೇಶಕ್ಕೆ ಬಳಕೆ ಮಾಡಲಾಗುತ್ತಿದೆ. ನಿತ್ಯ ಸುಮಾರು 30 ಲಕ್ಷ ಲೀಟರ್‌ ಹಾಲು ಪೌಡರ್‌ ತಯಾರಿಕೆಗಾಗಿ ಬಳಸಲ್ಪಡುತ್ತಿದ್ದು, 250 ಮೆಟ್ರಿಕ್‌ ಟನ್‌ ಹಾಲಿನ ಪೌಡರ್‌ ತಯಾರಿಸಲಾಗುತ್ತಿದೆ. ಇದು ಹಾಲಿನ ಪೌಡರ್‌’ಗೆ ಇರುವ ಬೇಡಿಕೆಗೆ ಅನುಗುಣವಾಗಿದೆ ಎಂದಿದ್ದಾರೆ.

ಇದನ್ನೂ ಓದಿ: ಸೆಮಿಫೈನಲ್’ನಲ್ಲಿ ಟೀಂ ಇಂಡಿಯಾ ಎದುರಾಳಿ ಯಾರು? ಟಿ20 ವಿಶ್ವಕಪ್ ಸೆಮೀಸ್ ವೇಳಾಪಟ್ಟಿ ಹೀಗಿದೆ ನೋಡಿ

ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ವೇಳೆ ರಾಜ್ಯದಲ್ಲಿ ನಿತ್ಯ ಸರಾಸರಿ 72 ಲಕ್ಷ ಲೀಟರ್‌ ಗಳಷ್ಟು ಹಾಲು ಸಂಗ್ರಹವಾಗುತ್ತಿತ್ತು. ಈ ಹಿಂದೆ ಹಾಲಿನ ಬೆಲೆಯಲ್ಲಿ ರೂ.3 ಹೆಚ್ಚಳ ಮಾಡಿ ಆ ಹೆಚ್ಚುವರಿ ಹಣವನ್ನು ರೈತರಿಗೆ ನೇರವಾಗಿ ವರ್ಗಾಯಿಸುವ ಪ್ರೋತ್ಸಾಹದಾಯಕ ಕ್ರಮ ಕೈಗೊಂಡಿದ್ದರಿಂದ ಹೈನೋದ್ಯಮವು ಹಿಂದಿಗಿಂತ ಲಾಭ ತಂದುಕೊಡುವ ಉದ್ಯೋಗವಾಯಿತು. ಜೊತೆಗೆ ಈ ಬಾರಿ ಉತ್ತಮ ಮಳೆಯಾಗಿರುವುದರಿಂದ ಜಾನುವಾರುಗಳಿಗೆ ಹಸಿರು ಮೇವು ಲಭ್ಯವಾಗುತ್ತಿದೆ. ಈ ಎರಡು ಕಾರಣಗಳಿಂದಾಗಿ ರಾಜ್ಯದಲ್ಲಿ ಹಾಲಿನ ಉತ್ಪಾದನೆ ಇಂದು ನಿತ್ಯ ಸರಿಸುಮಾರು 1 ಕೋಟಿ ಲೀಟರ್‌ ತಲುಪುವ ಹಂತಕ್ಕೆ ಬಂದಿದೆ. ಹೀಗೆ ಹೆಚ್ಚುವರಿಯಾಗಿ ಉತ್ಪಾದನೆಯಾಗುತ್ತಿರುವ ಹಾಲನ್ನು ರೈತರಿಂದ ಖರೀದಿಸಿ, ಗ್ರಾಹಕರಿಗೂ ಹೊರೆಯಾಗದ ರೀತಿಯಲ್ಲಿ ಮಾರಾಟ ಮಾಡುವ ಸಲುವಾಗಿ ಕೆ.ಎಂ.ಎಫ್‌ ಸಂಸ್ಥೆ ಈ ನಿರ್ಧಾರ ಕೈಗೊಂಡಿದೆ ಎಂದಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News