ಬೆಂಗಳೂರು : ಇಡೀ ವಿಶ್ವಕ್ಕೆ ಕಂಟಕವಾಗಿದ್ದ ಕರೋನಾವೈರಸ್ ಮಹಾಮಾರಿಯಿಂದಾಗಿ ಸುಮಾರು 11 ತಿಂಗಳಿನಿಂದ ಮುಚ್ಚಲ್ಪಟ್ಟಿದ್ದ ಶಾಲೆಗಳನ್ನು ಪೂರ್ಣ ಪ್ರಮಾಣದಲ್ಲಿ ತೆರೆಯಲು ಸರ್ಕಾರ ತೀರ್ಮಾನ ಕೈಗೊಂಡಿದೆ. ಇಂದು ಶಿಕ್ಷಣ ಸಚಿವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಫೆಬ್ರವರಿ 22ರಿಂದ 6ರಿಂದ 8ನೇ ತರಗತಿಯವರೆಗಿನ ಶಾಲೆಗಳನ್ನು ಪೂರ್ಣ ಪ್ರಮಾಣದಲ್ಲಿ ಆರಂಭಿಸಲು ಹಾಗೂ 1ರಿಂದ 5ನೇ ತರಗತಿವರೆಗೆ ವಿದ್ಯಾಗಮ ಯೋಜನೆಯಡಿ ತರಗತಿಗಳನ್ನು ತೆರೆಯುವ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
ಕೋವಿಡ್ ತಾಂತ್ರಿಕ ಸಮಿತಿ ಸಲಹೆಯನ್ನು ಪರಿಗಣಿಸಿ ರಾಜ್ಯದಲ್ಲಿ 6ರಿಂದ 8ರವರೆಗಿನ ತರಗತಿಗಳನ್ನು ಪೂರ್ಣ ಪ್ರಮಾಣದಲ್ಲಿ ತೆರೆಯಲು (Schools Reopen) ನಿರ್ಧರಿಸಲಾಗಿದ್ದು ಬರುವ ಸೋಮವಾರದಿಂದಲೇ ಶಾಲೆಗಳನ್ನು ತೆರೆಯಲು ಸರ್ಕಾರ ತೀರ್ಮಾನಿಸಿದೆ. ಇದೇ ಸಂದರ್ಭದಲ್ಲಿ 1ರಿಂದ 5ನೇ ತರಗತಿವರೆಗೆ ವಿದ್ಯಾಗಮ ಶಾಲೆಗಳನ್ನು ಆರಂಭಿಸಲು ನಿರ್ಧಾರ ಮಾಡಲಾಗಿದೆ.
ಇದನ್ನೂ ಓದಿ - School Reopen : ಇನ್ನು ಎಲ್ಲಾ ವಿದ್ಯಾರ್ಥಿಗಳಿಗೂ ಸಿಗಲಿದೆ ಉಚಿತ ಕನ್ನಡಕ.!
ಮೊದಲಿಗೆ ವಿದ್ಯಾಗಮ ಯೋಜನೆಯಡಿ 1ರಿಂದ 5ನೇ ತರಗತಿವರೆಗೆ ಶಾಲೆಗಳನ್ನು ತೆರೆಯಲಾಗುವುದು. ಮಕ್ಕಳ ಹಾಜರಾತಿ ಹಾಗೂ ಪೋಷಕರ ಅಭಿಪ್ರಾಯಗಳನ್ನು ಕಲೆಹಾಕಿ ಮುಂದಿನ ದಿನಗಳಲ್ಲಿ ಪ್ರಾಥಮಿಕ ಶಾಲೆಗಳಿಗೂ (Primary School) ಪೂರ್ಣ ಪ್ರಮಾಣದ ತರಗತಿಗಳನ್ನು ಆರಂಭಿಸುವ ಬಗ್ಗೆಯೂ ಕೂಡ ಸದ್ಯದಲ್ಲಿಯೇ ಸರ್ಕಾರ ತೀರ್ಮಾನ ಕೈಗೊಳ್ಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ - S Suresh Kumar: ಪೂರ್ಣ ಪ್ರಮಾಣದ ಶಾಲೆ ಆರಂಭಿಸುವ ಸೂಚನೆ ನೀಡಿದ ಶಿಕ್ಷಣ ಸಚಿವರು!
ರಾಜ್ಯದಲ್ಲಿ ಈಗಾಗಲೇ 9-10 ಹಾಗೂ ಪಿಯುಸಿ, ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಪದವಿ ತರಗತಿಗಳು ನಡೆಯುತ್ತಿದ್ದು 1 ರಿಂದ 8ನೇ ತರಗತಿವರೆಗೆ ಇನ್ನೂ ಶಾಲೆಗಳು ಆರಂಭವಾಗಿರಲಿಲ್ಲ. ಈ ಹಿನ್ನಲೆಯಲ್ಲಿ ರಾಜ್ಯದಲ್ಲಿ ಕೋವಿಡ್ - 19 (Covid 19) ಕ್ಷೀಣಿಸುತ್ತಿದೆ. ಹಾಗಾಗಿ ಪ್ರಾಥಮಿಕ ಶಾಲಾ ಮಕ್ಕಳಿಗೂ ಶಾಲೆಗಳನ್ನು ತೆರೆಯುವಂತೆ ಶಿಕ್ಷಣ ಸಂಸ್ಥೆಗಳು ಹಾಗೂ ಪೋಷಕರಿಂದ ಕೂಗು ಕೇಳಿಬಂದಿತ್ತು.
ಅದಾಗ್ಯೂ ಮಕ್ಕಳ ಜೀವದ ವಿಷಯದಲ್ಲಿ ಚೆಲ್ಲಾಟ ಆಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ (S Suresh Kumar) ಕೋವಿಡ್ ತಾಂತ್ರಿಕ ಸಮಿತಿ ಸಲಹೆಯನ್ನು ಪಡೆದು ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.