ರಾಜ್ಯ ಸರ್ಕಾರದ ಆಡಳಿತಾತ್ಮಕ ಕ್ರಮಗಳ ಬಗ್ಗೆ ಪ್ರಧಾನಿ ಮೆಚ್ಚುಗೆ : ಬಸವರಾಜ್ ಬೊಮ್ಮಾಯಿ

ಪ್ರಧಾನಿ ಮೋದಿಯವರೊಂದಿಗಿನ ಭೇಟಿಯು ಸಕಾರಾತ್ಮಕವಾಗಿತ್ತು. ವಿಶೇಷವಾಗಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಕಳೆದ 100 ದಿನಗಳಲ್ಲಿ ತೆಗೆದುಕೊಂಡ ಆಡಳಿತಾತ್ಮಕ ಕ್ರಮಗಳಿಗೆ ಸಂಬಂಧಿಸಿದ ಅನೇಕ ವಿಷಯಗಳ ಬಗ್ಗೆ ಪ್ರಧಾನಿ ಅವರೊಂದಿಗೆ ವಿವರವಾಗಿ ಚರ್ಚಿಸಲಾಗಿದೆ" ಎಂದು  ಬೊಮ್ಮಾಯಿ ಹೇಳಿದ್ದಾರೆ.  

Written by - Ranjitha R K | Last Updated : Nov 11, 2021, 06:03 PM IST
  • ರಾಜ್ಯ ಸರ್ಕಾರ ಕೈಗೊಂಡ ಕೆಲಸಗಳ ಬಗ್ಗೆ ಪ್ರಧಾನ ಮಂತ್ರಿ ಮೆಚ್ಚುಗೆ - ಬೊಮ್ಮಾಯಿ
  • "ಆತ್ಮವಿಶ್ವಾಸದಿಂದ ಒಳ್ಳೆಯ ಕೆಲಸ ಮಾಡುವಂತೆ ಸೂಚನೆ "
  • ಡಿಸೆಂಬರ್ ನಲ್ಲಿ ರಾಜ್ಯಕ್ಕೆ ಮೋದಿ
ರಾಜ್ಯ ಸರ್ಕಾರದ ಆಡಳಿತಾತ್ಮಕ ಕ್ರಮಗಳ ಬಗ್ಗೆ ಪ್ರಧಾನಿ ಮೆಚ್ಚುಗೆ : ಬಸವರಾಜ್ ಬೊಮ್ಮಾಯಿ  title=
ರಾಜ್ಯ ಸರ್ಕಾರ ಕೈಗೊಂಡ ಕೆಲಸಗಳ ಬಗ್ಗೆ ಪ್ರಧಾನ ಮಂತ್ರಿ ಮೆಚ್ಚುಗೆ - ಬೊಮ್ಮಾಯಿ (photo twitter)

ನವದೆಹಲಿ : 100 ದಿನಗಳಲ್ಲಿ ರಾಜ್ಯ ಸರ್ಕಾರ ಕೈಗೊಂಡ ಕೆಲಸಗಳ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ತೃಪ್ತರಾಗಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ (Basavaraj Bommai) ತಿಳಿಸಿದ್ದಾರೆ. ಗುರುವಾರ ದೆಹಲಿಯಲ್ಲಿ ಪ್ರಧಾನ ಮಂತ್ರಿ ಅವರನ್ನು ಸಿಎಂ ಬೊಮ್ಮಾಯಿ ಭೇಟಿಯಾಗಿದ್ದಾರೆ. ಆತ್ಮವಿಶ್ವಾಸದಿಂದ ಒಳ್ಳೆಯ ಕೆಲಸ ಮಾಡುವಂತೆ ಪಿಎಂ ಸೂಚಿಸಿದ್ದಾರೆ ಎಂದು ಬೊಮ್ಮಾಯಿ ಹೇಳಿದ್ದಾರೆ .  

"ಪ್ರಧಾನಿ ಮೋದಿಯವರೊಂದಿಗಿನ (PM Modi)  ಭೇಟಿಯು ಸಕಾರಾತ್ಮಕವಾಗಿತ್ತು. ವಿಶೇಷವಾಗಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಕಳೆದ 100 ದಿನಗಳಲ್ಲಿ ತೆಗೆದುಕೊಂಡ ಆಡಳಿತಾತ್ಮಕ ಕ್ರಮಗಳಿಗೆ ಸಂಬಂಧಿಸಿದ ಅನೇಕ ವಿಷಯಗಳ ಬಗ್ಗೆ ಪ್ರಧಾನಿ ಅವರೊಂದಿಗೆ ವಿವರವಾಗಿ ಚರ್ಚಿಸಲಾಗಿದೆ" ಎಂದು ಅವರು ಹೇಳಿದ್ದಾರೆ. ಕಳೆದ 100 ದಿನಗಳಲ್ಲಿ ಕೈಗೊಂಡಿರುವ ಕ್ರಮಗಳನ್ನು, ವಿಶೇಷವಾಗಿ ರೈತರ ಮಕ್ಕಳಿಗೆ ಶಿಕ್ಷಣ ವಿದ್ಯಾರ್ಥಿವೇತನವನ್ನು ನೀಡುವ ಯೋಜನೆಯನ್ನು ಪ್ರಧಾನಿ ಮೋದಿ "ಶ್ಲಾಘಿಸಿದ್ದಾರೆ ಎಂದು ಬೊಮ್ಮಾಯಿ ಹೇಳಿದ್ದಾರೆ. ಇದಲ್ಲದೆ, ಸಾರ್ವಜನಿಕ ಟೆಂಡರ್ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ತಂದಿರುವ ರಾಜ್ಯ ಸರ್ಕಾರದ  ಬಗ್ಗೆ ಪ್ರಧಾನ ಮಂತ್ರಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸರ್ಕಾರದ ಪ್ರತಿಯೊಂದು ಇಲಾಖೆಯಲ್ಲಿ ಇದನ್ನು ಜಾರಿಗೆ ತರಬೇಕು ಎಂದು ಸೂಚಿಸಿದ್ದಾರೆ ಎಂದು ಬೊಮ್ಮಾಯಿ (Bommai) ಹೇಳಿದರು.

ಇದನ್ನೂ ಓದಿ : ಟಿಪ್ಪು ಮತಾಂಧ ಎನ್ನುವ ಬಿಜೆಪಿಯವರೇ ಟಿಪ್ಪು ಜಯಂತಿ ಮಾಡಿದ್ರು: ಸಿದ್ದರಾಮಯ್ಯ

ರಾಜ್ಯದಲ್ಲಿ ಹೊಸ ಶಿಕ್ಷಣ ನೀತಿಯ ಅನುಷ್ಠಾನದ ಕುರಿತು ವಿವರವಾಗಿ ಚರ್ಚಿಸಿದ ಮೋದಿ, ಹೊಸ ನೀತಿಯ ಬಗ್ಗೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದಿದ್ದಾರೆ. ಗ್ರಾಮ ಪಂಚಾಯತ್ (Grama panchayath)ಮಟ್ಟದಲ್ಲಿ ಅಗತ್ಯಗಳನ್ನು ಪೂರೈಸಲು ಅಮೃತ್  ಯೋಜನೆಯಲ್ಲಿ ಬದಲಾವಣೆಗಳನ್ನು ತರುವಂತೆ ನರೇಂದ್ರ ಮೋದಿ ಸೂಚಿಸಿದ್ದಾರೆ ಎಂದು ಬೊಮ್ಮಾಯಿ (Bommai) ತಿಳಿಸಿದ್ದಾರೆ. 

ವಸತಿ ರಹಿತರಿಗೆ ಮನೆ ನಿರ್ಮಿಸಲು ನಿವೇಶನ ನೀಡುವ ರಾಜ್ಯ ಯೋಜನೆಗೆ ಮೆಚ್ಚುಗೆ ವ್ಯಕ್ತಪಡಿಸಿದ ಮೋದಿ, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಹಂತ ಹಂತವಾಗಿ ಅನುಷ್ಠಾನಗೊಳಿಸುವಂತೆ ಸೂಚಿಸಿದ್ದಾರೆ. ಇದೇ ವೇಳೆ, SC ಮತ್ತು ST ಮಹಿಳೆಯರಿಗೆ ಸಾಲ ನೀಡಲು ಬ್ಯಾಂಕ್‌ಗಳು ಉತ್ಸುಕವಾಗಿಲ್ಲ ಎಂದು ಹೇಳಿದಾಗ, ಈ ಭಾಗದ ದುರ್ಬಲ ಮಹಿಳೆಯರ ಸಬಲೀಕರಣಕ್ಕಾಗಿ ಬ್ಯಾಂಕ್‌ಗಳಿಗೆ (Bank) ಈ ನಿಟ್ಟಿನಲ್ಲಿ ನಿರ್ದೇಶನ ನೀಡಲಾಗುವುದು ಎಂದು ಮೋದಿ ಭರವಸೆ ನೀಡಿದ್ದಾರೆ ಎಂದು ಬೊಮ್ಮಾಯಿ ಹೇಳಿದರು.

ಡಿಸೆಂಬರ್‌ನಲ್ಲಿ ರಾಜ್ಯದಲ್ಲಿ ನಡೆಯಲಿರುವ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಬಗ್ಗೆ ಆಹ್ವಾನ ನೀಡಿದಾಗ ಅದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎಂದು ಮುಖ್ಯಮಂತ್ರಿ (Karnakata CM) ಹೇಳಿದ್ದಾರೆ. 

ಇದನ್ನೂ ಓದಿ : ಆತ್ಮವಂಚಕ ದಲಿತ ವಿರೋಧಿ ಸಿದ್ದರಾಮಯ್ಯರ ಮಾತು ನಂಬಿಕೆಗೆ ಯೋಗ್ಯವೇ?: ಬಿಜೆಪಿ

ಬುಧವಾರ ಬೊಮ್ಮಾಯಿ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News