)
ಬೆಂಗಳೂರು: ಕನ್ನಡ ಸಾರಸತ್ವ ಲೋಕದ ಮೇರು ಸಾಹಿತಿಗಳಲ್ಲಿ ಒಬ್ಬರಾದ, ಪದ್ಮಭೂಷಣ ಪುರಸ್ಕೃತ ಎಸ್.ಎಲ್. ಭೈರಪ್ಪ (ಸಂತೇಶಿವರ ಲಿಂಗಣ್ಣಯ್ಯ ಭೈರಪ್ಪ) ಅವರು ತಮ್ಮ 94ನೇ ವಯಸ್ಸಿನಲ್ಲಿ ಇಂದು (ಬುಧವಾರ) ಬೆಂಗಳೂರಿನ ರಾಜರಾಜೇಶ್ವರಿ ನಗರದ ಆಸ್ಪತ್ರೆಯೊಂದರಲ್ಲಿ ನಿಧನರಾದರು. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು, ಮೆದುಳಿನ ಸಮಸ್ಯೆಯಿಂದಾಗಿ ಕಳೆದ ಕೆಲವು ತಿಂಗಳುಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯ ಕಾರಣಗಳಿಂದ ಮೈಸೂರಿನಿಂದ ಬೆಂಗಳೂರಿಗೆ ಸ್ಥಳಾಂತರಗೊಂಡಿದ್ದರು.
ಭೈರಪ್ಪನವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ' ಶ್ರೀ ಎಸ್.ಎಲ್. ಭೈರಪ್ಪ ನವರ ನಿಧನದಿಂದ, ಭಾರತದ ಆತ್ಮವನ್ನು ಆಳವಾಗಿ ಅಧ್ಯಯನ ಮಾಡಿದ ಒಬ್ಬ ಮಹಾನ್ ಧೀಮಂತ ವ್ಯಕ್ತಿಯನ್ನು ನಾವು ಕಳೆದುಕೊಂಡಿದ್ದೇವೆ. ನಿರ್ಭೀತ ಮತ್ತು ಕಾಲಾತೀತ ಚಿಂತಕರಾಗಿದ್ದ ಅವರು ತಮ್ಮ ಚಿಂತನಶೀಲ ಕೃತಿಗಳಿಂದ ಕನ್ನಡ ಸಾಹಿತ್ಯವನ್ನು ಆಳವಾಗಿ ಶ್ರೀಮಂತಗೊಳಿಸಿದರು. ಅವರ ಬರಹಗಳು ಪೀಳಿಗೆಗಳನ್ನು ಸಮಾಜವನ್ನು ಪ್ರತಿಬಿಂಬಿಸಲು, ಪ್ರಶ್ನಿಸಲು ಮತ್ತು ಅದರೊಂದಿಗೆ ಹೆಚ್ಚು ಆಳವಾಗಿ ತೊಡಗಿಸಿಕೊಳ್ಳಲು ಪ್ರೇರೇಪಿಸಿದವು.ನಮ್ಮ ಇತಿಹಾಸ ಮತ್ತು ಸಂಸ್ಕೃತಿಯ ಬಗ್ಗೆ ಅವರ ಅಚಲವಾದ ಉತ್ಸಾಹವು ಮುಂಬರುವ ವರ್ಷಗಳಲ್ಲಿ ಮನಸ್ಸುಗಳನ್ನು ಪ್ರೇರೇಪಿಸುತ್ತಲೇ ಇರುತ್ತದೆ. ಈ ದುಃಖದ ಸಮಯದಲ್ಲಿ ನನ್ನ ಆಲೋಚನೆಗಳು ಅವರ ಕುಟುಂಬ ಮತ್ತು ಅಭಿಮಾನಿಗಳೊಂದಿಗೆ ಇವೆ. ಓಂ ಶಾಂತಿ ಎಂದು ಅವರು ಕಂಬನಿ ಮಿಡಿದಿದ್ದಾರೆ.
In the passing of Shri S.L. Bhyrappa Ji, we have lost a towering stalwart who stirred our conscience and delved deep into the soul of India. A fearless and timeless thinker, he profoundly enriched Kannada literature with his thought-provoking works. His writings inspired… pic.twitter.com/ZhXwLcCGP3
— Narendra Modi (@narendramodi) September 24, 2025
ಇನ್ನೊಂದೆಡೆಗೆ ಸಿಎಂ ಸಿದ್ದರಾಮಯ್ಯ ಅವರು ಸಂತಾಪ ವ್ಯಕ್ತಪಡಿಸಿ 'ಕನ್ನಡ ಸಾರಸ್ವತ ಲೋಕದ ಹಿರಿಯ ಬರಹಗಾರರಾದ ಎಸ್.ಎಲ್.ಭೈರಪ್ಪನವರ ನಿಧನವಾರ್ತೆ ನೋವು ತಂದಿದೆ.ಭೈರಪ್ಪನವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ತಮ್ಮ ಆಪ್ತವೆನಿಸುವ ಬರಹ ಶೈಲಿಯಿಂದಾಗಿ ಅಪಾರ ಓದುಗರನ್ನು ಹೊಂದಿದ್ದ ಭೈರಪ್ಪನವರ ನಿಧನದಿಂದ ಸಾಹಿತ್ಯಲೋಕ ಬಡವಾಗಿದೆ.ಅವರ ಕುಟುಂಬವರ್ಗ ಮತ್ತು ಓದುಗ ಬಳಗಕ್ಕೆ ನನ್ನ ಸಂತಾಪಗಳು' ಎಂದು ಸಂತಾಪ ಸೂಚಿಸಿದ್ದಾರೆ.
ಕನ್ನಡ ಸಾರಸ್ವತ ಲೋಕದ ಹಿರಿಯ ಬರಹಗಾರರಾದ ಎಸ್.ಎಲ್.ಭೈರಪ್ಪನವರ ನಿಧನವಾರ್ತೆ ನೋವು ತಂದಿದೆ.
ಭೈರಪ್ಪನವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.ತಮ್ಮ ಆಪ್ತವೆನಿಸುವ ಬರಹ ಶೈಲಿಯಿಂದಾಗಿ ಅಪಾರ ಓದುಗರನ್ನು ಹೊಂದಿದ್ದ ಭೈರಪ್ಪನವರ ನಿಧನದಿಂದ ಸಾಹಿತ್ಯಲೋಕ ಬಡವಾಗಿದೆ.
ಅವರ ಕುಟುಂಬವರ್ಗ ಮತ್ತು ಓದುಗ ಬಳಗಕ್ಕೆ ನನ್ನ ಸಂತಾಪಗಳು. pic.twitter.com/D3y4Ep2H8J— Siddaramaiah (@siddaramaiah) September 24, 2025
ಮಾಜಿ ಸಿಎಂ ಹಾಗೂ ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ 'ಟ್ವೀಟ್ ಮಾಡಿ 'ಪರ್ವ' ಮತ್ತು 'ಉತ್ತರಕಾಂಡ' ಕಾದಂಬರಿಗಳ ಮೂಲಕ ಮಹಾಭಾರತ ಹಾಗೂ ರಾಮಾಯಣವನ್ನು ನೋಡುವ ಮತ್ತು ಓದುವ ಕ್ರಮವನ್ನೇ ಬದಲಿಸಿದ ಅಭಿಜಾತ ಕಾದಂಬರಿಕಾರ ಸರಸ್ವತಿ ಸಮ್ಮಾನ ಪುರಸ್ಕೃತರು, ಪದ್ಮಭೂಷಣ ಎಸ್.ಎಲ್. ಭೈರಪ್ಪನವರು ನಿಧನರಾದರೆಂಬ ಸುದ್ದಿ ಕೇಳಿ ತೀವ್ರ ಆಘಾತ ಉಂಟಾಯಿತು.ಶ್ರೀ ಭೈರಪ್ಪನವರ ಕಾದಂಬರಿಗಳನ್ನು ನಾನು ನಿಕಟವಾಗಿ ಓದಿದ್ದೇನೆ. ಅವರ ಕಥನ ಶೈಲಿ, ಪಾತ್ರ ಸೃಷ್ಟಿಯ ಪ್ರತಿಭೆಗೆ ಮಾರು ಹೋಗಿದ್ದೇನೆ. ಅವರು ಕನ್ನಡ ನೆಲದಲ್ಲಿ ಹುಟ್ಟಿ ಕನ್ನಡದಲ್ಲೇ ಬರೆದ ಅಪ್ಪಟ ಭಾರತೀಯ ಕಾದಂಬರಿಕಾರರು. ಮೇಲಾಗಿ ಹಾಸನ ಜಿಲ್ಲೆಯಲ್ಲಿ ಹುಟ್ಟಿದ್ದ 'ಅಮರ ಪ್ರತಿಭೆ' ಎಂಬ ಹೆಮ್ಮೆ ನನ್ನದು. ಅವರ ಅಗಲಿಕೆಯಿಂದ ಬಹುದೊಡ್ಡ ಶೂನ್ಯ ಸೃಷ್ಟಿಯಾಗಿದೆ.ಶ್ರೀಯುತರ ನಿಧನ ವೈಯಕ್ತಿಕವಾಗಿ ನನಗೆ ಬಹಳ ದುಃಖ ಉಂಟು ಮಾಡಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಕುಟುಂಬಸ್ಥರು, ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ' ಎಂದು ಕಂಬನಿ ಮಿಡಿದಿದ್ದಾರೆ.
September 24, 2025— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy)
'ಪರ್ವ' ಮತ್ತು 'ಉತ್ತರಕಾಂಡ' ಕಾದಂಬರಿಗಳ ಮೂಲಕ ಮಹಾಭಾರತ ಹಾಗೂ ರಾಮಾಯಣವನ್ನು ನೋಡುವ ಮತ್ತು ಓದುವ ಕ್ರಮವನ್ನೇ ಬದಲಿಸಿದ ಅಭಿಜಾತ ಕಾದಂಬರಿಕಾರ ಸರಸ್ವತಿ ಸಮ್ಮಾನ ಪುರಸ್ಕೃತರು, ಪದ್ಮಭೂಷಣ ಎಸ್.ಎಲ್. ಭೈರಪ್ಪನವರು ನಿಧನರಾದರೆಂಬ ಸುದ್ದಿ ಕೇಳಿ ತೀವ್ರ ಆಘಾತ ಉಂಟಾಯಿತು.
ಶ್ರೀ ಭೈರಪ್ಪನವರ ಕಾದಂಬರಿಗಳನ್ನು ನಾನು ನಿಕಟವಾಗಿ ಓದಿದ್ದೇನೆ. ಅವರ… pic.twitter.com/BX85Fj2hgt