ಕೋವಿಡ್ ಭ್ರಷ್ಟ ಸುಧಾಕರ್ ಪರವಾಗಿ ಮತ ಕೇಳಲು ಪ್ರಧಾನಿ ಮೋದಿ ಬರುತ್ತಿದ್ದಾರೆ: ಸಿಎಂ ಆಕ್ರೋಶ

ಬೆಂಗಳೂರು: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಾಗೇಪಲ್ಲಿಯಲ್ಲಿ ನಡೆದ ಪ್ರಜಾಧ್ವನಿ-2 ಬೃಹತ್ ಜನಸಮಾವೇಶದಲ್ಲಿ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರ ಗೆಲುವಿಗೆ ಕರೆ ನೀಡಿ ಮಾತನಾಡಿದರು.

Written by - Prashobh Devanahalli | Last Updated : Apr 18, 2024, 03:57 PM IST
    • ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಾಗೇಪಲ್ಲಿಯಲ್ಲಿ ನಡೆದ ಪ್ರಜಾಧ್ವನಿ-2 ಸಮಾವೇಶ
    • ನಂಬಿಕೆಗಳಿಗೆ ದ್ರೋಹ ಬಗೆದಿದ್ದಾರೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ
    • ಬಿಜೆಪಿಗೆ ಮತ್ತು ಇವರ ಜತೆ ಸೇರಿರುವ ಜೆಡಿಎಸ್ ಗೆ ಮತ ಕೇಳುವ ನೈತಿಕತೆ ಇಲ್ಲ.
ಕೋವಿಡ್ ಭ್ರಷ್ಟ ಸುಧಾಕರ್ ಪರವಾಗಿ ಮತ ಕೇಳಲು ಪ್ರಧಾನಿ ಮೋದಿ ಬರುತ್ತಿದ್ದಾರೆ: ಸಿಎಂ ಆಕ್ರೋಶ title=
File Photo

ಬೆಂಗಳೂರು: ಪ್ರಧಾನಿ ಮೋದಿಯವರು ಹತ್ತು ವರ್ಷದಲ್ಲಿ ಕೊಟ್ಟ ಒಂದೂ ಆಶ್ವಾಸನೆಯನ್ನೂ ಈಡೇರಿಸದೆ ಭಾರತೀಯರ ನಂಬಿಕೆಗಳಿಗೆ ದ್ರೋಹ ಬಗೆದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಾಗೇಪಲ್ಲಿಯಲ್ಲಿ ನಡೆದ ಪ್ರಜಾಧ್ವನಿ-2 ಬೃಹತ್ ಜನಸಮಾವೇಶದಲ್ಲಿ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರ ಗೆಲುವಿಗೆ ಕರೆ ನೀಡಿ ಮಾತನಾಡಿದರು.

ಇದನ್ನೂ ಓದಿ: ಡ್ರಾಮಾ ಜೂನಿಯರ್ಸ್ ಸೀಸನ್-5 ಫಿನಾಲೆ ಡೇಟ್ ಅನೌನ್ಸ್: ಈ ದಿನ ನಡೆಯಲಿದೆ ಮಹಾಸಂಚಿಕೆ

ಕೊಟ್ಟ ಮಾತು ಈಡೇರಿಸದ ಬಿಜೆಪಿಗೆ ಮತ್ತು ಇವರ ಜತೆ ಸೇರಿರುವ ಜೆಡಿಎಸ್ ಗೆ ನಿಮ್ಮ ಮತ ಕೇಳುವ ನೈತಿಕತೆ ಇಲ್ಲ. ಮೋದಿ ಪ್ರಧಾನಿ ಆದರೆ ದೇಶ ಬಿಟ್ಟು ಹೋಗ್ತೀನಿ ಅಂದಿದ್ದ ದೇವೇಗೌಡರು ಈಗ ಅದೇ ಮೋದಿಯವರನ್ನು ಅಪ್ಪಿಕೊಂಡಿದ್ದಾರೆ. ಚುನಾವಣೆ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರ ಪಥನ ಆಗ್ತದೆ ಎನ್ಮುವುದು ಬರೀ ದೇವೇಗೌಡರ  ಭ್ರಮೆ‌. ಐದೂ ವರ್ಷ ನಮ್ಮ ಸರ್ಕಾರ ಸುಭದ್ರವಾಗಿದ್ದು ಮತ್ತೆ ನಾವೇ ಗೆದ್ದು ಬರ್ತೀವಿ ಎಂದರು.

ಕೋವಿಡ್ ಸಂದರ್ಭದಲ್ಲಿ ವ್ಯಾಪಕ ಭ್ರಷ್ಟಾಚಾರ ಎಸಗಿ ಸೋತು ಮನೆ ಸೇರಿರುವ ಸುಧಾಕರ್ ಪರವಾಗಿ ಮತ ಕೇಳಲು ಪ್ರಧಾನಿ ಮೋದಿ ಚಿಕ್ಕಬಳ್ಳಾಪುರಕ್ಕೆ ಬರುತ್ತಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಮೋದಿ ಪ್ರಚಾರ ನಡೆಸಿದ್ದ ಎಲ್ಲಾ ಕ್ಷೇತ್ರಗಳಲ್ಲೂ ಬಿಜೆಪಿ ಹೀನಾಯವಾಗಿ ಸೋತಿದೆ.  ಲೋಕಸಭಾ ಚುನಾವಣೆಯಲ್ಲೂ ಅದೇ ಗತಿ ಆಗ್ತದೆ ಎಂದು ಖಚಿತವಾಗಿ ನುಡಿದರು.

ಭಾರತೀಯರಿಗೆ ಭ್ರಮೆ ಹುಟ್ಟಿಸಿ ವಂಚಿಸಿದ ಮೋದಿಯವರನ್ನು ಈ ಬಾರಿ ದೇಶ ತಿರಸ್ಕರಿಸಲಿದೆ. ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ INDIA ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರಕ್ಕೆ ಬರುತ್ತಿದ್ದಂತೆ ಹೊಸ ಗ್ಯಾರಂಟಿಗಳು ಜಾರಿಯಾಗಲಿವೆ ಎಂದರು.

ರಾಜ್ಯ ಸರ್ಕಾರದ ಗ್ಯಾರಂಟಿಗಳಿಂದ ಪ್ರತೀ ತಿಂಗಳು 5 ರಿಂದ 6 ಸಾವಿರ ರೂಪಾಯಿ ಉಳಿತಾಯ ಆಗುತ್ತಿದೆ. ಕೇಂದ್ರದಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಇಂಥಾ 25 ಹೊಸ ಗ್ಯಾರಂಟಿಗಳು ಜಾರಿಗೆ ಬರಲಿದೆ ಎಂದರು.

ಇದನ್ನೂ ಓದಿ: ಮುಂಜಾನೆ ಹಳಸಿದ ಬಾಯಿಗೆ ಈ ಹಣ್ಣಿನ ರಸ ಸೇವಿಸಿದರೆ ದಿನವಿಡೀ ನಾರ್ಮಲ್ ಇರುತ್ತೆ ಬ್ಲಡ್ ಶುಗರ್! ಟ್ರೈ ಮಾಡಿ ನೋಡಿ

ಬಿಜೆಪಿ ಶ್ರೀಮಂತರ 16 ಸಾವಿರ ಕೋಟಿಗೂ ಅಧಿಕ ಮೊತ್ತದ ಸಾಲ ಮನ್ನಾ ಮಾಡಿದೆ. ಆದರೆ ನಾವು  ಇಡೀ ದೇಶದ ರೈತರ ಸಾಲ ಮನ್ನಾ ಮಾಡುತ್ತೇವೆ ಎಂದರು. ಶಾಸಕ ಸುಬ್ಬಾರೆಡ್ಡಿ ಅವರಿಗೆ ಮುಂದೆ ಒಳ್ಳೆ ರಾಜಕೀಯ ಭವಿಷ್ಯ ಇದೆ ಎಂದು ಇದೇ ಸಂದರ್ಭದಲ್ಲಿ ಘೋಷಿಸಿದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

 

Trending News