ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸ ಹಿನ್ನೆಲೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸರಣಿ ಪ್ರಶ್ನೆಗಳ ಬಾಣಬಿಟ್ಟಿದ್ದು, ಉತ್ತರಿಸುವಂತೆ ಆಗ್ರಹಿಸಿದ್ದಾರೆ. #AnswerMadiModi ಹ್ಯಾಶ್ಟ್ಯಾಗ್ ಬಳಸಿ ಭಾನುವಾರ ಸರಣಿ ಟ್ವೀಟ್ ಮಾಡಿರುವ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
‘ಭ್ರಷ್ಟ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮತ್ತು ಅವರ ಮಗನ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಲೋಕಾಯುಕ್ತ ಪೊಲೀಸರು ಸಚಿತ್ರವಾಗಿ ಜಗತ್ತಿನ ಮುಂದೆ ಬಿಚ್ಚಿಟ್ಟರೂ ನೀವು ಮಾತ್ರ ಬಾಯಿ ಬಿಚ್ಚುತ್ತಿಲ್ಲ ಯಾಕೆ? ಅವರ ಲೂಟಿಯಲ್ಲಿ ನಿಮಗೂ ಪಾಲಿದೆಯಾ ಪ್ರಧಾನಿ ಮೋದಿಯವರೇ? ಬಿಜೆಪಿಯ ಸದ್ಯದ ಸರ್ವಶಕ್ತ ನಾಯಕರಾದ ನಿಮ್ಮ ಕೃಪಾಶೀರ್ವಾದ ಇಲ್ಲದೆ ಭ್ರಷ್ಟ ಶಾಸಕರೊಬ್ಬರು ಕಾನೂನಿಗೆ ಅಂಜದೆ, ಮಾನ-ಮರ್ಯಾದೆಗೆ ಅಳುಕದೆ ಪ್ರಜಾತಂತ್ರ ವ್ಯವಸ್ಥೆಯನ್ನೇ ಅಣಕಿಸುವಂತೆ ಮೆರವಣಿಗೆ ಮಾಡಿಸಿಕೊಳ್ಳಲು ಸಾಧ್ಯವೇ ಮೋದಿಯವರೇ?’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಭ್ರಷ್ಟ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮತ್ತು ಅವರ ಮಗನ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಲೋಕಾಯುಕ್ತ ಪೊಲೀಸರು ಸಚಿತ್ರವಾಗಿ ಜಗತ್ತಿನ ಮುಂದೆ ಬಿಚ್ಚಿಟ್ಟರೂ ನೀವು ಮಾತ್ರ ಬಾಯಿ ಬಿಚ್ಚುತ್ತಿಲ್ಲ ಯಾಕೆ? ಅವರ ಲೂಟಿಯಲ್ಲಿ ನಿಮಗೂ ಪಾಲಿದೆಯಾ @narendramodi ಅವರೇ? 1/10#AnswerMadiModi
— Siddaramaiah (@siddaramaiah) March 12, 2023
‘ನ ಖಾವೂಂಗಾ, ನಾ ಖಾನೆ ದೂಂಗಾ’ ಎಂಬ ನಿಮ್ಮ ಘೋಷಣೆಯನ್ನು ಈಗ ನೀವು ‘ತುಮ್ ಖಾವೋ, ಮುಜೆ ಬಿ ಖಿಲಾವೋ’ (ನೀವು ತಿನ್ನಿ, ನನಗೂ ತಿನ್ನಿಸಿ) ಎಂದು ಬದಲಾಯಿಸಿ ಕೊಂಡಿದ್ದೀರಾ ಮೋದಿಯವರೇ? ಅಟಲ್ ಬಿಹಾರಿ ವಾಜಪೇಯಿ ಪ್ರಧಾನಿಯಾಗಿದ್ದಾಗ ಪಕ್ಷದ ಅಧ್ಯಕ್ಷರಾಗಿದ್ದ ಬಂಗಾರು ಲಕ್ಷ್ಮಣ್ ಎಂಬ ದಲಿತ ನಾಯಕರು ಲಂಚ ಪಡೆಯುವಾಗ ಕ್ಯಾಮೆರಾದ ಕಣ್ಣಲ್ಲಿ ಸಿಕ್ಕಿ ಹಾಕಿಕೊಂಡಿದ್ದರು. ತಕ್ಷಣ ವಾಜಪೇಯಿ ಅವರು ಲಕ್ಷ್ಮಣ್ ಅವರಿಂದ ರಾಜೀನಾಮೆ ಕೊಡಿಸಿಲ್ಲವೇ ಮೋದಿಜೀ?’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: Sachidanand Savdi : ಲಕ್ಷ್ಮಣ ಸವದಿ ಪುತ್ರನಿಂದ ಸ್ಪೋಟಕ ಹೇಳಿಕೆ..!
ನ ಖಾವೂಂಗಾ, ನಾ ಖಾನೆ ದೂಂಗಾ ಎಂಬ ನಿಮ್ಮ ಘೋಷಣೆಯನ್ನು ಈಗ ನೀವು ‘ತುಮ್ ಖಾವೋ, ಮುಜೆ ಬಿ ಖಿಲಾವೋ’ ( ನೀವು ತಿನ್ನಿ, ನನಗೂ ತಿನ್ನಿಸಿ) ಎಂದು ಬದಲಾಯಿಸಿ ಕೊಂಡಿದ್ದೀರಾ @narendramodi ಅವರೇ? 3/10#AnswerMadiModi
— Siddaramaiah (@siddaramaiah) March 12, 2023
‘ವಾಜಪೇಯಿ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಇದ್ದಾಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತ್ರವಲ್ಲ ಜನಾರ್ದನ ರೆಡ್ಡಿ, ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಕೃಷ್ಣಯ್ಯ ಶೆಟ್ಟಿ, ಸಂಪಂಗಿ ಮೊದಲಾದವರು ಭ್ರಷ್ಟಾಚಾರದ ಆರೋಪದಲ್ಲಿ ಸಚಿವ ಸ್ಥಾನವನ್ನು ಕಳೆದುಕೊಂಡು ಜೈಲುಪಾಲಾದರಲ್ಲಾ? ಈಗ್ಯಾಕೆ ಹೀಗೆ ಮೋದಿಜೀ? ಸದನದಲ್ಲಿ ಬ್ಲೂಫಿಲ್ಮ್ ನೋಡಿದ್ದ ಕಾರಣಕ್ಕಾಗಿ ಮೂವರು ಬಿಜೆಪಿ ನಾಯಕರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು. ಅತ್ಯಾಚಾರದ ಆರೋಪ ಹೊತ್ತಿದ್ದ ಇನ್ನೊಬ್ಬ ಸಚಿವರೂ ರಾಜೀನಾಮೆ ನೀಡಬೇಕಾಯಿತು. ಅದು ವಾಜಪೇಯಿ ಕಾಲ, ಇದು ಮೋದಿ ಕಾಲವೇ?’ ಎಂದು ಸಿದ್ದರಾಮಯ್ಯ ಕುಟುಕಿದ್ದಾರೆ.
‘ಕಳೆದ ಬಾರಿಯ ಚುನಾವಣೆಯ ಕಾಲದಲ್ಲಿ ಕಾಂಗ್ರೆಸ್ ಪಕ್ಷದ ಮೇಲೆ 10% ಕಮಿಷನ್ ಸರ್ಕಾರ ಎಂದು ಆಧಾರರಹಿತ ಆರೋಪ ಮಾಡಿದ್ದಿರಿ. ಈ ಬಾರಿ ನಿಮ್ಮ ಸರ್ಕಾರ 40% ಕಮಿಷನ್ ಕೇಳಿ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ಗುತ್ತಿಗೆದಾರರು ನಿಮಗೆ ಪತ್ರ ಬರೆದರೂ ಯಾಕೆ ಉತ್ತರಿಸುತ್ತಿಲ್ಲ ಮೋದಿಜಿ. ನಾನು ಮುಖ್ಯಮಂತ್ರಿಯಾಗಿದ್ದಾಗ ಸಚಿವ ಸಂತೋಷ್ ಲಾಡ್ ಅವರ ಮೇಲೆ ಅಕ್ರಮ ಗಣಿಗಾರಿಕೆಯ ಆರೋಪ ಕೇಳಿ ಬಂದಿದ್ದಕ್ಕಾಗಿ ರಾಜೀನಾಮೆ ಕೊಡಿಸಿದ್ದೆ. ಕೇಂದ್ರದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದರೂ ನಮ್ಮ ಸರ್ಕಾರದ ವಿರುದ್ಧದ 8 ಆರೋಪಗಳನ್ನು ಧೈರ್ಯದಿಂದ ಸಿಬಿಐ ತನಿಖೆಗೆ ಒಪ್ಪಿಸಿದ್ದೆ ಗೊತ್ತಾ ಮೋದಿಜೀ?’ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.
ವಾಜಪೇಯಿ ನೇತೃತ್ವದಲ್ಲಿ @BJP4India ಇದ್ದಾಗ ಮುಖ್ಯಮಂತ್ರಿ @BSYBJP ಮಾತ್ರವಲ್ಲ ಜನಾರ್ದನ ರೆಡ್ಡಿ, ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಕೃಷ್ಣಯ್ಯ ಶೆಟ್ಟಿ, ಸಂಪಂಗಿ ಮೊದಲಾದವರು ಭ್ರಷ್ಟಾಚಾರದ ಆರೋಪದಲ್ಲಿ ಸಚಿವ ಸ್ಥಾನವನ್ನು ಕಳೆದುಕೊಂಡು ಜೈಲುಪಾಲಾದರಲ್ಲಾ? ಈಗ್ಯಾಕೆ ಹೀಗೆ @narendramodi ಜೀ? 5/10#AnswerMadiModi
— Siddaramaiah (@siddaramaiah) March 12, 2023
‘ಹಿಂದೆ ಕರ್ನಾಟಕಕ್ಕೆ ಬಂದಿದ್ದ ನೀವು ಕರ್ನಾಟಕದ ಕಾಂಗ್ರೆಸ್ ದೆಹಲಿಯ ಹೈಕಮಾಂಡ್ಗೆ ಎಟಿಎಂ ಎಂದು ಗೇಲಿ ಮಾಡಿದ್ದೀರಿ. ನಿಮ್ಮ ಸಚಿವರು ಮತ್ತು ಶಾಸಕರು ಕೋಟಿ ಕೋಟಿ ಲೂಟಿ ಮಾಡಿ ನಿರ್ಭೀತಿಯಿಂದ ಇದ್ದಾರೆಂದರೆ ಕರ್ನಾಟಕ ರಾಜ್ಯ ನಿಮ್ಮ ಪಕ್ಷದ ಎಟಿಎಂ ಎಂದು ಅರ್ಥೈಸಬಹುದಾ ಮೋದಿಜೀ? ಪ್ರಧಾನಿ ಮೋದಿ ನೇತೃತ್ವದ ಬಿಜೆಪಿಯಲ್ಲಿ ಎಲ್ಲಿಯ ವರೆಗೆ ಲಂಚದ ಹಣದಲ್ಲಿ ಪಾಲು ಬಿಜೆಪಿ ಹೈಕಮಾಂಡ್ ಗೆ ಸಂದಾಯವಾಗುತ್ತೋ ಅಲ್ಲಿಯ ವರೆಗೆ ಭ್ರಷ್ಟರು, ದುಷ್ಟರು ಎಲ್ಲರೂ ಸುರಕ್ಷಿತ ಎಂದು ತಿಳಿದುಕೊಳ್ಳಬಹುದೇ?’ ಎಂದು ಸಿದ್ದರಾಮಯ್ಯ ಕುಟುಕಿದ್ದಾರೆ.
ಪ್ರಧಾನಿ @narendramodi ನೇತೃತ್ವದ ಬಿಜೆಪಿಯಲ್ಲಿ ಎಲ್ಲಿಯ ವರೆಗೆ ಲಂಚದ ಹಣದಲ್ಲಿ ಪಾಲು @BJP4India ಹೈಕಮಾಂಡ್ ಗೆ ಸಂದಾಯವಾಗುತ್ತೋ ಅಲ್ಲಿಯ ವರೆಗೆ ಭ್ರಷ್ಟರು, ದುಷ್ಟರು ಎಲ್ಲರೂ ಸುರಕ್ಷಿತ ಎಂದು ತಿಳಿದುಕೊಳ್ಳಬಹುದೇ?#AnswerMadiModi
10/10— Siddaramaiah (@siddaramaiah) March 12, 2023
ಇದನ್ನೂ ಓದಿ: ವೇತನ ಹೆಚ್ಚಳಕ್ಕೆ ಆಗ್ರಹ: ಮಾ.16 ರಿಂದ ಕವಿಪ್ರನಿ-ವಿದ್ಯುತ್ ಸರಬರಾಜು ಕಂಪನಿಗಳಿಂದ ಮುಷ್ಕರ
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ