"ಕೊರೊನಾ ಸಂಬಂಧ ಸುದೀರ್ಘ ವರದಿ ಪಡೆದ ನರೇಂದ್ರ ಮೋದಿ"

ಏಪ್ರಿಲ್‌ 9 ರ ಬಳಿಕ ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಕೊರೊನಾ ಪರೀಕ್ಷೆಗಳನ್ನು ಹೆಚ್ಚಳ ಮಾಡಲು ನಿರ್ಧರಿಸಿದ್ದೇವೆ. 

Written by - Bhavishya Shetty | Last Updated : Apr 27, 2022, 02:49 PM IST
  • ಸುದೀರ್ಘವಾದ ವರದಿ ಪಡೆದ ಪ್ರಧಾನಿ ನರೇಂದ್ರ ಮೋದಿ
  • ಕೊರೊನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಡೆಸಿದ ಸಭೆ
  • ಸಿಎಂ ಬಸವರಾಜ ಬೊಮ್ಮಾಯಿ ಭಾಗಿ
"ಕೊರೊನಾ ಸಂಬಂಧ ಸುದೀರ್ಘ ವರದಿ ಪಡೆದ ನರೇಂದ್ರ ಮೋದಿ" title=
Basavaraj Bommai

ಬೆಂಗಳೂರು: ಕೋವಿಡ್‌ ನಾಲ್ಕನೇ ಅಲೆ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು ಮತ್ತು ಪರಿಸ್ಥಿತಿಯನ್ನು ನಿಭಾಯಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಸುದೀರ್ಘವಾದ ವರದಿಯನ್ನು ಪಡೆದುಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು. 

ಇದನ್ನು ಓದಿ: ನಾಗರಹಾವಿನೊಂದಿಗೆ ಮುಂಗುಸಿಗಳ ಕಾಳಗ- ವಾಚ್ ವಿಡಿಯೋ

ಏಪ್ರಿಲ್‌ 9 ರ ಬಳಿಕ ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಕೊರೊನಾ ಪರೀಕ್ಷೆಗಳನ್ನು ಹೆಚ್ಚಳ ಮಾಡಲು ನಿರ್ಧರಿಸಿದ್ದೇವೆ. ಇನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ 50 ಸಾವಿರ ಬೆಡ್‌ ಹಾಗೂ ಖಾಸಗಿ 1 ಲಕ್ಷ ಬೆಡ್‌ ವ್ಯವಸ್ಥೆ ಮಾಡಲು ಸೂಚಿಸಲಾಗಿದೆ. 6 ರಿಂದ 12 ವರ್ಷದ ಮಕ್ಕಳಿಗೆ ಶಾಲೆಯಲ್ಲಿ‌ ಲಸಿಕೆ ನೀಡಲು ಸೂಚಿಸಲಾಗಿದೆ ಎಂದರು. 

ಲಸಿಕೆ ಅಭಿಯಾನ ಉತ್ತಮವಾಗಿ ಮಾಡಿರುವ ಹಿನ್ನೆಲೆಯಲ್ಲಿ ಮೂರನೇ ಅಲೆ ಸಮರ್ಥವಾಗಿ ಎದುರಿಸಿದ್ದೇವೆ. ಅನಾವಶ್ಯಕ ನಿರ್ಬಂಧ ಹೇರದಂತೆ ಪ್ರಧಾನಿ ನರೇಂದ್ರ ಮೋದಿಯವರು ಸೂಚಿಸಿದ್ದಾರೆ. ಮುಂದಿನ ಕ್ರಮಗಳ ಬಗ್ಗೆ ನಿರ್ಧರಿಸುವ ಮುನ್ನ ರಾಜ್ಯದ ಪರಿಸ್ಥಿತಿ ಬಗ್ಗೆ ಅವಲೋಕನ ನಡೆಸುತ್ತೇವೆ ಎಂದರು. 

ಸದ್ಯ ಬೆಂಗಳೂರಿನಲ್ಲಿ ಕೊರೊನಾ ಪರೀಕ್ಷೆ ಹೆಚ್ಚಳ ಮಾಡುವ ಯೋಜನೆಯಿದ್ದು, ಈ ಹಿನ್ನೆಲೆಯಲ್ಲಿ ಹಿಂದೂಸ್ತಾನ್‌ ಏರೋನಾಟಿಕಲ್‌ ಲಿಮಿಟೆಡ್‌ಗೆ ಸಿಎಂ ತೆರಳಿದ್ದಾರೆ. ಈ ಬಳಿಕ ಮಂಗಳೂರಿಗೆ ಪ್ರವಾಸ ಕೈಗೊಳ್ಳಲಿರುವ ಅವರು ಹೆಲಿಕಾಪ್ಟರ್‌ ಮೂಲಕ ತೆರಳಲಿದ್ದಾರೆ. 

ಇದನ್ನು  ಓದಿ: ಕೆಜಿಎಫ್ 3 ಚಿತ್ರದ ಬಗ್ಗೆ ರಾಕಿಂಗ್ ಸ್ಟಾರ್ ಯಶ್ ಹೇಳಿದ್ದೇನು ಗೊತ್ತೇ ?

ಕಳೆದ ಎರಡು ವಾರಗಳಿಂದ ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಪರಿಸ್ಥಿತಿ ನಿಭಾಯಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, "ಇತರ ದೇಶಗಳಿಗೆ ಹೋಲಿಸಿದರೆ ಕೊರೊನಾ ನಿರ್ವಹಣೆಯಲ್ಲಿ ಭಾರತ ಮುಂಚೂಣಿಯಲ್ಲಿದೆ. ಆದರೂ ಅನೇಕ ರಾಜ್ಯಗಳಲ್ಲಿ​ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಹೀಗಾಗಿ ಮುಂಜಾಗೃತೆ ವಹಿಸುವುದು ಅಗತ್ಯ. ಮುಂಬರುವ ಸವಾಲುಗಳನ್ನು ಒಟ್ಟಾಗಿ ಎದುರಿಸಬೇಕಾಗಿದೆ. ಅಗತ್ಯ ಮುನ್ನೆಚ್ಚರಿಕೆಗಳನ್ನು ವಹಿಸಿ" ಎಂದು ಕರೆ ನೀಡಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News