ಬಳ್ಳಾರಿ: ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರು ಇಂದು, ಸಮಾಜದ ಕಟ್ಟಕಡೆಯ ವರ್ಗಗಳಿಗೆ ಸಾಲದ ಬೆಂಬಲವನ್ನು ಒದಗಿಸುವ ರಾಷ್ಟ್ರವ್ಯಾಪಿ ಉಪಕ್ರಮವಾದ ‘ಪ್ರಧಾನ ಮಂತ್ರಿ ಸಾಮಾಜಿಕ್ ಉತ್ಥಾನ್ ಮತ್ತು ರೋಜ್ಗಾರ್ ಆಧಾರಿತ್ ಜನಕಲ್ಯಾಣ್' (ಪಿಎಂ-ಸೂರಜ್) ರಾಷ್ಟ್ರೀಯ ಪೋರ್ಟಲ್ ಅನ್ನು ಪ್ರಧಾನ ಮಂತ್ರಿ ಕಚೇರಿಯಿಂದ ವರ್ಚುಯಲ್ ಮೂಲಕ ಚಾಲನೆ ನೀಡಿದರು.


COMMERCIAL BREAK
SCROLL TO CONTINUE READING

ಬಳಿಕ ಫಲಾನುಭವಿಗಳನ್ನುದ್ದೇಶಿಸಿ ವರ್ಚುವಲ್ ಸಂವಾದ ಮೂಲಕ ಮಾತನಾಡಿದ ಅವರು, ಪರಿಶಿಷ್ಟ ಜಾತಿ ವರ್ಗಗಳು, ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ನಮ್ಮ ಸರ್ಕಾರವು ಬದ್ಧವಾಗಿದೆ ಎಂದರು.


ನಂತರ, ರಾಷ್ಟ್ರೀಯ ನಿಗಮಗಳ ಯೋಜನೆಯ (ಪರಿಶಿಷ್ಟ ಜಾತಿಗಳು, ಸಫಾಯಿ ಕರ್ಮಚಾರಿಗಳು ಮತ್ತು ಹಿಂದುಳಿದ ವರ್ಗಗಳ) ಫಲಾನುಭವಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ, ಫಲಾನುಭವಿಗಳ ಅಭಿಪ್ರಾಯ ಪಡೆದುಕೊಂಡರು.


ಜಿಲ್ಲಾ ಮಟ್ಟದಲ್ಲಿ ಕಾರ್ಯಕ್ರಮ ವೀಕ್ಷಣೆ:


ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ಹಣಕಾಸು ಸೇವಾ ಇಲಾಖೆ ಮತ್ತು ರಾಜ್ಯ ಮಟ್ಟದ ಬ್ಯಾಂಕರ್ ಸಮಿತಿ ಇವರ ಆದೇಶದಂತೆ ಕೆನರಾ ಬ್ಯಾಂಕ್ ಜಿಲ್ಲಾ ಪ್ರಧಾನ ಕಚೇರಿ ವತಿಯಿಂದ ನಗರದ ಜಿಲ್ಲಾ ಪಂಚಾಯತ್ ನಜೀರ್ ಸಾಬ್ ಸಭಾಂಗಣದಲ್ಲಿ ಪ್ರಧಾನಮಂತ್ರಿ ಸೂರಜ್ ಪೋರ್ಟಲ್ ಚಾಲನೆ ಕಾರ್ಯಕ್ರಮ ವೀಕ್ಷಿಸಲು ಆಯೋಜಿಸಲಾಗಿತ್ತು.


ಇದನ್ನೂ ಓದಿ-Bad Cholesterol: ಶರೀರದಿಂದ ಕೆಟ್ಟ ಕೊಲೆಸ್ಟ್ರಾಲ್ ಕಿತ್ತೆಸೆಯುವ ಸಾಮರ್ಥ್ಯ ಹೊಂದಿವೆ ಈ ತರಕಾರಿಗಳು!


ಪಿಎಂ ಸೂರಜ್ ರಾಷ್ಟ್ರೀಯ ಪೋರ್ಟಲ್ ನಿಂದ ಹಿಂದುಳಿದ ವರ್ಗದವರಿಗೆ ಆದ್ಯತೆ ನೀಡುವ ಮೂಲಕ ಸಾಮಾಜಿಕ ಬದ್ಧತೆಯನ್ನು ಕೇಂದ್ರ ಸರ್ಕಾರವು ಸಾಕಾರಗೊಳಿಸುತ್ತಿದೆ ಮತ್ತು ಸಮಾಜದ ಅತ್ಯಂತ ಅಂಚಿನಲ್ಲಿರುವ ವರ್ಗಗಳನ್ನು ಉನ್ನತೀಕರಿಸುವ ಗುರಿಯನ್ನು ಹೊಂದಿದೆ' ಎಂದು ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್ ಅವರು ಹೇಳಿದರು.


ಕೆನರಾ ಬ್ಯಾಂಕ್ ಜಿಲ್ಲಾ ಮಾರ್ಗದರ್ಶಿ ವ್ಯವಸ್ಥಾಪಕ ಸೋಮನಗೌಡ ಐನಾಪುರ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಪಿಎಂ ಸೂರಜ್ ಪೋರ್ಟಲ್ ರಾಷ್ಟ್ರೀಯ ಪೋರ್ಟಲ್ ಆಗಿದೆ, ಇದು ಸಾಮಾಜಿಕ ಉನ್ನತಿ ಮತ್ತು ಉದ್ಯೋಗ ಮತ್ತು ಸಾರ್ವಜನಿಕ ಕಲ್ಯಾಣವನ್ನು ಆಧರಿಸಿದೆ. ಈ ಪೋರ್ಟಲ್ ಮೂಲಕ ಅರ್ಹರು ಸಾಲದ ಸಹಾಯವನ್ನು ಪಡೆಯಬಹುದು. ಈ ಪೋರ್ಟಲ್ ಮೂಲಕ ಜನರು ಸುಲಭವಾಗಿ ಸಾಲವನ್ನು ಪಡೆಯಲು ಸಾಧ್ಯವಾಗಲಿದ್ದು, ಇದರಲ್ಲಿ 15 ಲಕ್ಷ ರೂ. ಗಳವರೆಗೆ ವ್ಯಾಪಾರ ಸಾಲಕ್ಕೆ ಅರ್ಜಿ ಸಲ್ಲಿಸಬಹುದು.ಬ್ಯಾಂಕ್‍ಗೆ ಭೇಟಿ ನೀಡುವ ಅಗತ್ಯ ಇರುವುದಿಲ್ಲ. ಈ ಪೋರ್ಟಲ್ ಮೂಲಕವೇ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಹೇಳಿದರು.


ಇದನ್ನೂ ಓದಿ: ಬಿಜೆಪಿಯವರು ನಮ್ಮ ಗ್ಯಾರಂಟಿಯನ್ನು ಕಾಪಿ ಮಾಡುತ್ತಿದ್ದಾರೆ : ಡಿಕೆಶಿ


ಪಿಎಂ ಸೂರಜ್ ಪೋರ್ಟಲ್ ಅಡಿಯಲ್ಲಿ, ಬ್ಯಾಂಕ್‍ಗಳು, ಬ್ಯಾಂಕಿಂಗ್ ಅಲ್ಲದ ಹಣಕಾಸು ಕಂಪನಿಗಳು, ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಮತ್ತು ಇತರ ಸಂಸ್ಥೆಗಳ ಮೂಲಕ ಅರ್ಹ ಜನರಿಗೆ ಸಾಲವನ್ನು ನೀಡಲಾಗುತ್ತದೆ ಎಂದರು.ಕಾರ್ಯಕ್ರಮದಲ್ಲಿ ಕೇಂದ್ರ ಸರಕಾರದ ಯೋಜನೆಗಳಡಿ ಸೌಲಭ್ಯ ಪಡೆದ 30 ಫಲಾನುಭವಿಗಳಿಗೆ ಸಾಲ ಮಂಜೂರಾತಿ ಪತ್ರ ವಿತರಣೆ ಮಾಡಲಾಯಿತು.


ಈ ಸಂದರ್ಭದಲ್ಲಿ ಜಿಪಂ ಉಪಕಾರ್ಯದರ್ಶಿ ಗಿರಿಜಾ ಶಂಕರ್, ಕರ್ನಾಟಕ ಗ್ರಾಮೀಣಾ ಬ್ಯಾಂಕ್‍ನ ಪ್ರಾದೇಶಿಕ ವ್ಯವಸ್ಥಾಪಕ ಹೆಚ್.ಕೆ.ಗಿರೆಡ್ಡಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸತೀಶ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಲಾಲಪ್ಪ, ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಭೀಮಪ್ಪ ಎನ್.ಎಸ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಫಲಾನುಭವಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ