Belagavi Airport: ಬೆಳಗಾವಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ನಿರ್ಮಾಣಕ್ಕೆ ಪ್ರಧಾನಿ ಮೋದಿ ಚಾಲನೆ
Belagavi Airport: ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ವತಿಯಿಂದ ಬೆಳಗಾವಿ ವಿಮಾನ ನಿಲ್ದಾಣದ ಮುಂಭಾಗದಲ್ಲಿ ಭಾನುವಾರ (ಮಾ.10) ನಡೆದ ಬೆಳಗಾವಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ನಿರ್ಮಾಣಕ್ಕೆ ವರ್ಚುವಲ್ (ಆನ್ ಲೈನ್) ಮೂಲಕ ಶಂಕುಸ್ಥಾಪನಾ ನೆರವೇರಿಸಿ ಅವರು ಮಾತನಾಡಿದರು.
ಬೆಳಗಾವಿ: "ಕೇಂದ್ರ ಸರ್ಕಾರ ಕೇವಲ ಘೋಷಣೆಗೆ ಮಾತ್ರ ಸೀಮಿತವಲ್ಲ; ನಿರಂತರ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಾ ಬಂದಿದೆ. ದೇಶದಲ್ಲಿನ ವಿಮಾನ ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸುವುದರ ಜೊತೆಗೆ ರೈಲ್ವೆ ನಿಲ್ದಾಣ, ರೈಲು ಮಾರ್ಗ ನಿರ್ಮಾಣ, ಹೊಸ ಶಿಕ್ಷಣ ನೀತಿ ಜಾರಿ, ಕಿಸಾನ್ ಸಮ್ಮಾನ ಯೋಜನೆ ಸೇರಿದಂತೆ ಸರ್ಕಾರ ದೇಶದ ಅಭಿವೃದ್ಧಿಗೆ ನಿರಂತರ ಶ್ರಮಿಸುತ್ತಿದೆ" ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಿಳಿಸಿದರು.
ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ವತಿಯಿಂದ ಬೆಳಗಾವಿ ವಿಮಾನ ನಿಲ್ದಾಣದ ಮುಂಭಾಗದಲ್ಲಿ ಭಾನುವಾರ (ಮಾ.10) ನಡೆದ ಬೆಳಗಾವಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ನಿರ್ಮಾಣಕ್ಕೆ ವರ್ಚುವಲ್ (ಆನ್ ಲೈನ್) ಮೂಲಕ ಶಂಕುಸ್ಥಾಪನಾ ನೆರವೇರಿಸಿ ಅವರು ಮಾತನಾಡಿದರು.
ದೇಶದ ಸಮಗ್ರ ಅಭಿವೃದ್ಧಿಗೆ ಸರ್ಕಾರವು ಅನುಕೂಲಕರ ವಾತಾವರಣವನ್ನು ಒದಗಿಸುತ್ತಿದೆ. ಸಣ್ಣ ಸಣ್ಣ ನಗರಗಳನ್ನು ಗುರುತಿಸಿ ಮೆಟ್ರೋ ಹಾಗೂ ವಿಮಾನ ನಿಲ್ದಾಣ ನಿರ್ಮಾಣ ಮಾಡುತ್ತಿದೆ. ದೇಶಾದ್ಯಂತ ರೈಲ್ವೆ ನಿಲ್ದಾಣ ದುರಸ್ತಿ, ಹೊಸ ರೈಲು ಮಾರ್ಗ ನಿರ್ಮಾಣ ಕಾಮಗಾರಿಗಳನ್ನು ಸಹ ಕೈಗೆತ್ತಿಕೊಳ್ಳಲಾಗಿದೆ. ಅದೇ ರೀತಿಯಲ್ಲಿ ದೇಶದ ಯುವ ಜನರಿಗೆ ಉದ್ಯೋಗಾವಕಾಶಗಳನ್ನು ಸಹ ಸೃಷ್ಟಿಸಿದೆ ಎಂದು ಹೇಳಿದರು.
ಕಬ್ಬು ಬೆಳೆಗಾರರಿಗೆ ಅನುಕೂಲಕ್ಕಾಗಿ ಬೆಳೆಗಳಿಗೆ ಬೇಡಿಕೆ ಹೆಚ್ಚಿಸಲಾಗಿದೆ. ತಂತ್ರಜ್ಞಾನ ಬೆಳವಣಿಗೆಯಿಂದ ಮುಂದಿನ ದಿನಗಳಲ್ಲಿ ಕಬ್ಬು ಬೆಳೆಯಿಂದ ಎಥನಾಲ್, ಬಯೋಗ್ಯಾಸ್ ತಯಾರಿಸಲಾಗುವುದು ಇದರಿಂದ ಕಬ್ಬು ಬೆಳೆಗೆ ಇನ್ನಷ್ಟು ಬೇಡಿಕೆ ಬರಲಿದೆ ಹಾಗೂ ದೇಶದ ಆರ್ಥಿಕತೆಯ ಪ್ರಗತಿಗೂ ಸಹಾಯವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುಲ್ ಮೂಲಕ ತಿಳಿಸಿದರು.
ಇದನ್ನೂ ಓದಿ: "2019ರ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವಿಗೆ ಕಾಂಗ್ರೆಸ್ ಪಕ್ಷವೇ ಕಾರಣ"
ಹೊಸ ಟರ್ಮಿನಲ್ ನಿರ್ಮಾಣಕ್ಕೆ ಶಂಕುಸ್ಥಾಪನೆ:
ಇದಕ್ಕೂ ಮೊದಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಆಜಂಘಡದಲ್ಲಿ ಬೆಳಗಾವಿ ವಿಮಾನ ನಿಲ್ದಾಣ ಸೇರಿದಂತೆ ದೇಶದಲ್ಲಿನ 15 ವಿಮಾನ ನಿಲ್ದಾಣಗಳ ಹೊಸ ಟರ್ಮಿನಲ್ ನಿರ್ಮಾಣಕ್ಕೆ ಏಕಕಾಲದಲ್ಲಿ ವರ್ಚುವಲ್ (ಆನ್ ಲೈನ್) ಮೂಲಕ ಶಂಕುಸ್ಥಾಪನೆ ನೆರವೇರಿಸಿದರು.Koppal : ಮಾರ್ಚ್ 6 ರಿಂದ 9 ರವೆರೆಗೆ ನಡೆದ ತೋಟಗಾರಿಕಾ ಮೇಳದಲ್ಲಿ ದಾಖಲೆಯ ವಹಿವಾಟು
ಈ ವೇಳೆ ಮಾತನಾಡಿದ ಸಂಸದೆ ಮಂಗಳಾ ಅಂಗಡಿ ವಿಮಾನ ನಿಲ್ದಾಣದಲ್ಲಿನ ರಸ್ತೆ ಅಗಲೀಕರಣ, ಪಾರ್ಕಿಂಗ್ ಜೊತೆಗೆ ಅತೀ ಹೆಚ್ಚು ವಿಮಾನ ಸಂಚಾರಕ್ಕೆ ಅನುಕೂಲವಾಗಲು ವ್ಯವಸ್ಥೆ ಕಲ್ಪಿಸಲಾಗುವುದು. ಮುಂಬರುವ ದಿನಗಳಲ್ಲಿ ಬೆಳಗಾವಿ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಿ ಮೇಲ್ದರ್ಜೆಗೇರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದು ಹೇಳಿದರು.
ಬೆಳಗಾವಿ ಉತ್ತರ ವಿಧಾನಸಭಾ ಮತ ಕ್ಷೇತ್ರದ ಶಾಸಕ ಆಸೀಫ್ (ರಾಜು) ಸೇಠ್, ದಕ್ಷಿಣ ಮತ ಕ್ಷೇತ್ರದ ಶಾಸಕ ಅಭಯ ಪಾಟೀಲ, ಕರ್ನಾಟಕ ಸರ್ಕಾರದ ನವದೆಹಲಿ ವಿಶೇಷ ಪ್ರತಿನಿಧಿ -2 ಪ್ರಕಾಶ ಹುಕ್ಕೇರಿ, ಮಹಾನಗರ ಪಾಲಿಕೆ ಮೇಯರ್ ಸವಿತಾ ಕಾಂಬಳೆ, ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿ, ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.