ಪ್ರಧಾನಿ‌ ಮೋದಿಗೆ ರೈತರ ಸಾಲಮನ್ನಾ ಮಾಡುವ ಆಸಕ್ತಿ ಇಲ್ಲ- ಪರಮೇಶ್ವರ್

ದೇಶದಲ್ಲಿ 2017-18 ರಲ್ಲಿ 12,500 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Updated: Aug 10, 2018 , 03:50 PM IST
ಪ್ರಧಾನಿ‌ ಮೋದಿಗೆ ರೈತರ ಸಾಲಮನ್ನಾ ಮಾಡುವ ಆಸಕ್ತಿ ಇಲ್ಲ- ಪರಮೇಶ್ವರ್

ಮಂಗಳೂರು: ರೈತರ ಸಾಲ ಮನ್ನಾ ವಿಚಾರದಲ್ಲಿ ಕೇಂದ್ರ ಸರ್ಕಾರಕ್ಕೆ ಶಾಶ್ವತ ಪರಿಹಾರ ಬೇಕಾಗಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರಿಗೂ ಈ ವಿಚಾರದಲ್ಲಿ ಆಸಕ್ತಿ ಇಲ್ಲ ಎಂದು ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು.

ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ದೇಶದಲ್ಲಿ 2017-18 ರಲ್ಲಿ 12,500 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜ್ಯ ಸರ್ಕಾರ ರೈತರ ಸಾಲ ಮನ್ನಾ ಮಾಡಿದ್ದರಿಂದ ರಾಷ್ಟ್ರೀಯ ಬ್ಯಾಂಕ್‌ನಲ್ಲಿರುವ 30 ಸಾವಿರ ಕೋಟಿ ರೂ. ಸರ್ಕಾರಕ್ಕೆ ಹೊರೆ ಬಿದ್ದಿದೆ. ಆ ಹೊರೆ ತಪ್ಪಿಸಿದರೆ ಅದೇ ಹಣದಲ್ಲಿ ರೈತರಿಗೆ ಬೇಕಾದ ಹನಿ ನೀರಾವರಿ ಸೇರಿದಂತೆ ರೈತರಿಗೆ ಅಗತ್ಯವಿರುವ ಮೊದಲಾದ ಸಲಕರಣೆ ನೀಡಲು ಸಾಧ್ಯವಿದೆ. ಆದರೆ ಕೇಂದ್ರಕ್ಕೆ ಇದು ಬೇಕಾಗಿಲ್ಲ ಎಂದು ಪರಮೇಶ್ವರ್ ವಾಗ್ದಾಳಿ ನಡೆಸಿದ್ದಾರೆ.