ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಂದ “ಒಂದು ನಿಲ್ದಾಣ, ಒಂದು ಉತ್ಪನ್ನ” ಮಳಿಗೆಗೆ ಚಾಲನೆ

One Station, One Product: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು, ಬಳ್ಳಾರಿ ರೈಲ್ವೇ ನಿಲ್ದಾಣದಲ್ಲಿನ ನೂತನ “ಒಂದು ನಿಲ್ದಾಣ, ಒಂದು ಉತ್ಪನ್ನ” ಮಳಿಗೆಗೆ ವಿಡಿಯೋ ವರ್ಚುಯಲ್ ಮೂಲಕ ಚಾಲನೆ ನೀಡಿದರು.

Written by - Manjunath N | Last Updated : Mar 12, 2024, 04:29 PM IST
  • ಕೇಂದ್ರ ಸರ್ಕಾರದ ರೈಲ್ವೆ ಸಚಿವಾಲಯವು ಸ್ಥಳೀಯ ಉತ್ಪನ್ನಗಳಿಗೆ ಉತ್ತೇಜನ ನೀಡುವ ದೃಷ್ಟಿಕೋನವನ್ನು ಹೊಂದಿದೆ.
  • ಸಂಡೂರು ಕರ ಕುಶಲ ಕೇಂದ್ರದ ಲಂಬಾಣಿ ಕಸೂತಿ ಕಲೆಯ ಉತ್ಪನ್ನಗಳ ಮಾರಾಟ ಮಳಿಗೆ ಆರಂಭಿಸಲಾಯಿತು.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಂದ “ಒಂದು ನಿಲ್ದಾಣ, ಒಂದು ಉತ್ಪನ್ನ” ಮಳಿಗೆಗೆ ಚಾಲನೆ title=

ಬಳ್ಳಾರಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು, ಬಳ್ಳಾರಿ ರೈಲ್ವೇ ನಿಲ್ದಾಣದಲ್ಲಿನ ನೂತನ “ಒಂದು ನಿಲ್ದಾಣ, ಒಂದು ಉತ್ಪನ್ನ” ಮಳಿಗೆಗೆ ವಿಡಿಯೋ ವರ್ಚುಯಲ್ ಮೂಲಕ ಚಾಲನೆ ನೀಡಿದರು.

ಸ್ಥಳೀಯ ಮಾರುಕಟ್ಟೆಯ ಉತ್ಪನ್ನಗಳಿಗೆ ಉತ್ತೇಜನ ನೀಡಲು ಬಳ್ಳಾರಿಯ ರೈಲ್ವೆ ನಿಲ್ದಾಣದಲ್ಲಿನ ‘ಒಂದು ನಿಲ್ದಾಣ, ಒಂದು ಉತ್ಪನ್ನ’ ಸ್ಟಾಲ್, ಟ್ರಾಲಿಗಳ ಲೋಕಾರ್ಪಣೆಗೊಳಿಸಿದರು.

ಇದನ್ನೂ ಓದಿ- ಅಂಗನವಾಡಿ ಕಾರ್ಯಕರ್ತರಿಗೆ ಕನಿಷ್ಠ ಎರಡು ಸಾವಿರ ರೂಪಾಯಿ ವೇತನ ಹೆಚ್ಚಳ : ನಿಯೋಗದೊಂದಿಗೆ ಮುಖ್ಯಮಂತ್ರಿಗೆ ಮನವಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರೈಲ್ವೇ ಇಲಾಖೆಯ ಸುಮಾರು 85 ಸಾವಿರ ಕೋಟಿ ರೂ. ಅಧಿಕ ಮೊತ್ತದ ವಿವಿಧ ರೈಲ್ವೆ ಯೋಜನೆಗಳ ಶಂಕುಸ್ಥಾಪನೆ, ಲೋಕಾರ್ಪಣೆ ಮಾಡಿದರು. ಇದೇ ಸಂದರ್ಭದಲ್ಲಿ 10 ವಂದೇ ಭಾರತ್ ಎಕ್ಸ್‍ಪ್ರೆಸ್ ರೈಲು ಯೋಜನೆಗಳಿಗೆ ಚಾಲನೆ ನೀಡಿದರು.

ಬಳ್ಳಾರಿಯ ರೈಲ್ವೆ ನಿಲ್ದಾಣದಲ್ಲಿ ಆಯೋಜನೆ ಮಾಡಲಾಗಿದ್ದ ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆಯ ಮೇಯರ್ ಬಿ.ಶ್ವೇತ ಅವರು ಭಾಗವಹಿಸಿದ್ದರು.

ಬಳಿಕ ಮಾತನಾಡಿದ ಅವರು, ಕೇಂದ್ರ ಸರ್ಕಾರದ ರೈಲ್ವೆ ಸಚಿವಾಲಯವು ಸ್ಥಳೀಯ ಉತ್ಪನ್ನಗಳಿಗೆ ಉತ್ತೇಜನ ನೀಡುವ ದೃಷ್ಟಿಕೋನವನ್ನು ಹೊಂದಿದೆ. ಉತ್ಪನ್ನಗಳ ಮಾರಾಟ ಮಾಡಲು ಮಳಿಗೆ ಒದಗಿಸುವ ನಿಟ್ಟಿನಲ್ಲಿ ‘ಒಂದು ನಿಲ್ದಾಣ ಒಂದು ಉತ್ಪನ್ನ’ ಮಳಿಗೆಯನ್ನು ಬಳ್ಳಾರಿ ನಿಲ್ದಾಣದಲ್ಲಿ ನೂತನವಾಗಿ ಆರಂಭಿಸಲಾಗಿದ್ದು, ಹೆಮ್ಮೆಯ ಸಂಗತಿಯಾಗಿದೆ ಎಂದು ಹೇಳಿದರು.May be an image of 1 person, television, dais and text

ಇದನ್ನೂ ಓದಿ- Lok Sabha Election 2024: ಚುನಾವಣೆಗೂ ಮುನ್ನ ಆನ್‌ಲೈನ್‌ನಲ್ಲಿ ವೋಟರ್ ಐಡಿ ವಿಳಾಸವನ್ನು ಸುಲಭವಾಗಿ ಅಪ್ಡೇಟ್ ಮಾಡಿ

ಹುಬ್ಬಳ್ಳಿ ವಲಯ ರೈಲ್ವೇ ಬಳಕೆದಾರರ ಸಲಹಾ ಸಮಿತಿಯ ಸದಸ್ಯ ರವಿ ಕುಮಾರ್ ಮಾತನಾಡಿ, ಸ್ಥಳೀಯ ಮಾರುಕಟ್ಟೆಯ ಉತ್ಪನ್ನಗಳಿಗೆ ಉತ್ತೇಜನ ನೀಡುವ ಯೋಜನೆ ‘ಒಂದು ನಿಲ್ದಾಣ ಒಂದು ಉತ್ಪನ್ನ’ ಆಗಿದ್ದು, ಸ್ಥಳೀಯ ಕುಶಲ ಕರ್ಮಿಗಳಿಗೆ ಉಪಯುಕ್ತವಾಗಲಿದೆ ಎಂದರು.

ಬಳ್ಳಾರಿ ರೈಲ್ವೆ ನಿಲ್ದಾಣದಲ್ಲಿ ‘ಒಂದು ನಿಲ್ದಾಣ, ಒಂದು ಉತ್ಪನ್ನ’ ಯೋಜನೆಯಡಿ ಸಂಡೂರು ಕರ ಕುಶಲ ಕೇಂದ್ರದ ಲಂಬಾಣಿ ಕಸೂತಿ ಕಲೆಯ ಉತ್ಪನ್ನಗಳ ಮಾರಾಟ ಮಳಿಗೆ ಆರಂಭಿಸಲಾಯಿತು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಉಪ ಮೇಯರ್ ಬಿ.ಜಾನಕಿ, ಹಿರಿಯ ವಿಭಾಗೀಯ ಮೆಕ್ಯಾನಿಕಲ್ ಇಂಜಿನಿಯರ್ ಆಂಜನೇಯಲು, ವಿಭಾಗೀಯ ವೈದ್ಯಕೀಯ ಅಧಿಕಾರಿ ಸುಶ್ಮಿತಾ ಜಗನ್ ಮೋಹನ್ ರೆಡ್ಡಿ, ಚೇಂಬರ್ ಆಫ್ ಕಾಮರ್ಸ್‍ನ ಅಧ್ಯಕ್ಷರಾದ ಮಹಾರುದ್ರ ಗೌಡ, ಚೇಂಬರ್ ಆಫ್ ಕಾಮರ್ಸ್‍ನ ಸದಸ್ಯ ರಾಮಚಂದ್ರಯ್ಯ, ಬಳ್ಳಾರಿ ರೈಲ್ವೆ ನಿಲ್ದಾಣದ ವ್ಯವಸ್ಥಾಪಕ ನಾಗೇಶ್ ಬಾಬು ಶರ್ಮಾ, ಮುಖ್ಯ ವಾಣಿಜ್ಯ ನಿರೀಕ್ಷಕ ಎಸ್. ಹೊನ್ನೂರಸ್ವಾಮಿ ಸೇರಿದಂತೆ, ಮಹಾನಗರ ಪಾಲಿಕೆಯ ಸದಸ್ಯರು, ರೈಲ್ವೆ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ವರ್ಗದವರು, ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News