"ಸುಪ್ರೀಂ ಕೋರ್ಟ್ ತಪರಾಕಿಯಿಂದ ಪ್ರಧಾನಿಗಳು ಈಗಲಾದರೂ ಬುದ್ದಿ ಕಲಿಯಲಿ"

ಕರ್ನಾಟಕ ರಾಜ್ಯಕ್ಕೆ ಆಕ್ಸಿಜನ್ ಕೊಡಲ್ಲ ಎಂದಿದ್ದ ಕೇಂದ್ರ ಸರ್ಕಾರಕ್ಕೆ ಈಗ ಸುಪ್ರೀಂಕೋರ್ಟ್ ತೀರ್ಪಿನಿಂದಾಗಿ ತೀವ್ರ ಹಿನ್ನಡೆಯಾಗಿದೆ.

Last Updated : May 7, 2021, 04:29 PM IST
  • ಈಗ ತೀರ್ಪನ್ನು ಸ್ವಾಗತಿಸಿರುವ ರಾಜ್ಯ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಈಗಲಾದರೂ ಸುಪ್ರೀಂ ಕೋರ್ಟ್ ತಪರಾಕಿಯಿಂದ ಬುದ್ದಿ ಕಲಿಯಲಿ ಎಂದು ಟೀಕಿಸಿದ್ದಾರೆ.
"ಸುಪ್ರೀಂ ಕೋರ್ಟ್ ತಪರಾಕಿಯಿಂದ ಪ್ರಧಾನಿಗಳು ಈಗಲಾದರೂ ಬುದ್ದಿ ಕಲಿಯಲಿ" title=

ಬೆಂಗಳೂರು: ಕರ್ನಾಟಕ ರಾಜ್ಯಕ್ಕೆ ಆಕ್ಸಿಜನ್ ಕೊಡಲ್ಲ ಎಂದಿದ್ದ ಕೇಂದ್ರ ಸರ್ಕಾರಕ್ಕೆ ಈಗ ಸುಪ್ರೀಂಕೋರ್ಟ್ ತೀರ್ಪಿನಿಂದಾಗಿ ತೀವ್ರ ಹಿನ್ನಡೆಯಾಗಿದೆ.

ಇದನ್ನೂ ಓದಿ: ಸರ್ಕಾರ ಎಚ್ಚೆತ್ತುಕೊಂಡು ತನ್ನ ಜವಾಬ್ದಾರಿಯನ್ನು ನಿಭಾಯಿಸಲಿ-ಸೋನಿಯಾ ಗಾಂಧಿ

ಈಗ ತೀರ್ಪನ್ನು ಸ್ವಾಗತಿಸಿರುವ ರಾಜ್ಯ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಈಗಲಾದರೂ ಸುಪ್ರೀಂ ಕೋರ್ಟ್ ತಪರಾಕಿಯಿಂದ ಬುದ್ದಿ ಕಲಿಯಲಿ ಎಂದು ಟೀಕಿಸಿದ್ದಾರೆ."ನಮ್ಮ ರಾಜ್ಯಕ್ಕೆ 1200 ಮೆಟ್ರಿಕ್ ಟನ್ ಆಮ್ಲಜನಕ ಪೂರೈಸುವಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶದ ವಿರುದ್ಧ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟಿನ ಆದೇಶವನ್ನು ನಾಡಿನ ನೊಂದ ಜನರೆಲ್ಲರ ಪರವಾಗಿ ನಾನು ಸ್ವಾಗತಿಸುತ್ತೇನೆ. ಎಂದು ಹೇಳಿದ್ದಾರೆ.

ಇದನ್ನೂ ಓದಿ: "ತೇಜಸ್ವಿ ಸೂರ್ಯ ಬ್ಯಾಕಿಂಗ್ ದಂಧೆ ತಡೆಗೆ ಸೀಮಿತ ಆಗದೆ ಪಿಎಂ ಬಳಿ ಆಕ್ಸಿಜನ್ ಪೂರೈಕೆಗೆ ಒತ್ತಡ ಹೇರಲಿ"

"ಕರ್ನಾಟಕಕ್ಕೆ ನಿತ್ಯ 1600 -1700 ಮೆಟ್ರಿಕ್ ಟನ್ ಆಮ್ಲಜನಕದ ಅಗತ್ಯವಿದೆ, ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ನಿಗದಿ ಮಾಡಿದ್ದು 965 ಮೆಟ್ರಿಕ್ ಟನ್‌ ಮಾತ್ರ. ಇದರಿಂದ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆಯಿಂದ ಪ್ರಾಣ ಕಳೆದುಕೊಳ್ಳಲಿದ್ದ ರಾಜ್ಯದ ಸಹಸ್ರಾರು ರೋಗಿಗಳ‌ ಪ್ರಾಣವನ್ನು ಸುಪ್ರೀಂ ಕೋರ್ಟ್ ಉಳಿಸಿದೆ." ಎಂದು ಹೇಳಿದರು.

ಸುಪ್ರೀಂ ಕೋರ್ಟ್ ತಪರಾಕಿಯಿಂದ ಪ್ರಧಾನಿಗಳು ಈಗಲಾದರೂ ಬುದ್ದಿ ಕಲಿಯಲಿ.ಜನರ ಪ್ರಾಣದ ಜೊತೆ ಚೆಲ್ಲಾಟವಾಡುವ‌ ಕ್ರೌರ್ಯವನ್ನು ನಿಲ್ಲಿಸಲಿ. ಕರ್ನಾಟಕಕ್ಕೆ ಅಗತ್ಯವಿರುವಷ್ಟು ಪ್ರಮಾಣದ ಆಮ್ಲಜನಕವನ್ನು ತಕ್ಷಣ ಪೂರೈಸಲಿ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:​ Coronavirusನಿಂದ ಬಿಗಡಾಯಿಸುತ್ತಿರುವ ಪರಿಸ್ಥಿತಿ, ಪ್ರಧಾನಿ ಮೋದಿಯಿಂದ ಮಹತ್ವದ ಸಭೆ

ರಾಜ್ಯದಲ್ಲಿ ಉತ್ಪಾದನೆಯಾಗುವ ಆಕ್ಸಿಜನ್ ಅನ್ನು ಸಂಪೂರ್ಣ ಇಲ್ಲಿಯೇ ಬಳಕೆ ಮಾಡಿಕೊಳ್ಳಲು ಅವಕಾಶ ನೀಡುವಂತೆ ಹಾಗೂ ರಾಜ್ಯಕ್ಕೆ ನೀಡುವ ಆಕ್ಸಿಜನ್ ಪ್ರಮಾಣವನ್ನು 1500 ಮೆಟ್ರಿಕ್ ಟನ್ ಗೆ ಹೆಚ್ಚಿಸುವಂತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ರಾಜ್ಯದ 25 ಜನ ಬಿಜೆಪಿ ಸಂಸದರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಆಗ್ರಹಿಸುತ್ತೇನೆ ಎಂದು ಹೇಳಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News