ಏಪ್ರಿಲ್ 29 ರಿಂದ ರಾಜ್ಯದಲ್ಲಿ ಪ್ರಧಾನಿ ಮೋದಿ ಹವಾ
ಹನ್ನೆರಡಕ್ಕೂ ಹೆಚ್ಚಿನ ರ್ಯಾಲಿಗಳಲ್ಲಿ ಭಾಗವಹಿಸಲಿರುವ ಮೋದಿ.
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿಯಲಿರುವ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು ಏಪ್ರಿಲ್ 29ರಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಪ್ರಧಾನಿ ಮೋದಿ ಹವಾ ಬಳಸಿಕೊಂಡು ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಸಜ್ಜುಗೊಂಡಿರುವ ಕಮಲ ಪಡೆ, ಕರ್ನಾಟಕದಲ್ಲಿ ತನ್ನ ವಿಜಯದೊಂದಿಗೆ 'ಕಾಂಗ್ರೆಸ್ ಮುಕ್ತ ಕರ್ನಾಟಕ'ದ ಉದ್ದೇಶ ಹೊಂದಿದೆ.
ಬಿಜೆಪಿ ಮೂಲಗಳ ಪ್ರಕಾರ, ರಾಜ್ಯದ ವಿವಿಧೆಡೆ ಆಯೋಜಿಸುವ ಬಹಿರಂಗ ಸಭೆ, ರ್ಯಾಲಿಗಳನ್ನು ನಡೆಸಲು ಯೋಜನೆ ರೂಪಿಸಿದ್ದು, ಮೋದಿ ಅವರು 12ಕ್ಕೂ ಹೆಚ್ಚಿನ ರ್ಯಾಲಿಗಳಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.