ಗೋಕಾಕ್: ಕೇಂದ್ರದಲ್ಲಿ ಬಿಜೆಪಿ ಸರ್ಕಾರದ ವೈಫಲ್ಯತೆ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಸಾಧನೆಯನ್ನು ಜನರು ಗಮನಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚುಸ್ಥಾನ ದೊರಕಲಿದೆ ಎಂಬ ಸಂಪೂರ್ಣ ವಿಶ್ವಾಸವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಅವರು ಗೋಕಾಕ್ ಪಟ್ಟಣದಲ್ಲಿಂದು ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.


ಕಾಂಗ್ರೆಸ್ ಪರ ಜನಬೆಂಬಲ ನಿರೀಕ್ಷೆಗೂ ಮೀರಿ ಕಂಡುಬರುತ್ತಿದೆ. ರಾಜ್ಯದಲ್ಲಿ ಕನಿಷ್ಠ 20 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ.ಗ್ಯಾರಂಟಿ ಯೋಜನೆಗಳು ಪ್ರತಿ ಮನೆಯನ್ನು ತಲುಪಿವೆ. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು 2014 ಹಾಗೂ 2019 ರಲ್ಲಿ ನೀಡಿದ್ದ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ. ಇದು ಈ ಚುನಾವಣೆಯ ಟ್ರಂಪ್ ಕಾರ್ಡ್ ಎಂದು ತಿಳಿಸಿದರು.


ಇದನ್ನೂ ಓದಿ: Avneet Kaur: "ಬಂಟಿ ನಿಮ್ಮ ಸೋಪು ಸ್ಲೋನಾ" ಅಂತ ಡೈಲಾಗ್‌ ಹೊಡೆದ ಲೈಫ್‌ಬಾಯ್‌ ಬೆಡಗಿ ಈಗ ಹೇಗಿದ್ದಾರೆ ಗೊತ್ತೇ??


ಪ್ರಧಾನಿ ನರೇಂದ್ರ ಮೋದಿ ಅವರು ಮಣಿಪುರದ ಹಿಂಸಾಚಾರದ ಬಗ್ಗೆ ತುಟಿ ಬಿಚ್ಚಿದ್ದಾರ? ಕೇಂದ್ರ ಸರ್ಕಾರ ಏನು ಕ್ರಮ ಕೈಗೊಂಡಿದೆ. ಅಮಿತ್ ಅವರು ಗೃಹ ಸಚಿವರಾಗಿ ವಿಫಲರಾದಂತೆ ಅಲ್ವಾ? ಮಣಿಪುರ ಹಿಂಸಾಚಾರಕ್ಕೆ ಮೋದಿಯವರು ಹೊಣೆಯಲ್ಲವೇ? 30 ವರ್ಷಗಳಿಂದ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡಲಾಗುತ್ತಿದೆ. ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾಗಿದ್ದ ವೇಳೆ ಮುಸ್ಲಿಂಮರ 4% ಮೀಸಲಾತಿಯನ್ನು ರದ್ದು ಮಾಡಿದ್ದರು. ಈ ಆದೇಶವನ್ನು ಪ್ರಶ್ನಿಸಿ ಮುಸ್ಲಿಂ ಸಮುದಾಯ ಸುಪ್ರೀಂ ಕೋರ್ಟ್ ಗೆ ಹೋದಾಗ, 4% ಮೀಸಲಾತಿಯನ್ನು ಮುಂದುವರೆಸುವುದಾಗಿ ಅವರೇ ಮುಚ್ಚಳಿಕೆಯನ್ನು ಬರೆದುಕೊಟ್ಟಿದ್ದಾರೆ ಎಂದರು.


ಇದನ್ನೂ ಓದಿ: Rainwater Harvesting: ಎಸ್​ಟಿಪಿಯಿಂದ ಪ್ರತಿದಿನ 50,000 ಲೀಟರ್​ ಶುದ್ಧ ನೀರು ಉತ್ಪಾದನೆ; ಬೋಸಾನ್ ವೈಟ್ ವಾಟರ್ ಚಮತ್ಕಾರ


ಕೇವಲ ರಾಜಕಾರಣಕ್ಕಾಗಿ ಹಾಗೂ ಮತಗಳಿಕೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಭಾವನಾತ್ಮಕ ವಿಚಾರಗಳಿಗೆ ಸಂಬಂಧಿಸಿದ ಸುಳ್ಳು ಹೇಳುತ್ತಾರೆ. ಕಾಂಗ್ರೆಸ್ ಪಕ್ಷ ಕಳೆದ ಐದು ದಶಕಗಳಿಂದ ದೇಶದಲ್ಲಿ ಅಧಿಕಾರದಲ್ಲಿತ್ತು, ಎಂದಾದರೂ ಮಹಿಳೆಯರ ತಾಳಿಗಳನ್ನು ಕಸಿದುಕೊಂಡಿದ್ದಾರಾ? ದೇಶದ ಜವಾಬ್ದಾರಿಯುತ ಪ್ರಧಾನಿಯಾಗಿ ಇಂತಹ ಹೇಳಿಕೆಗಳನ್ನು ನೀಡಲು ಕಾರಣ ಅವರ ಸಾಧನೆಶೂನ್ಯ ಆಡಳಿತ. ಕೆಲಸ ಮಾಡಿದ್ದೇನೆ ಓಟು ಕೊಡಿ ಎನ್ನುವ ಬದಲು ಕಾಂಗ್ರೆಸ್ ಬಗ್ಗೆ ಅಪಪ್ರಚಾರ ಮಾಡಿ ಓಟು ಕೇಳುತ್ತಾರೆ ಎಂದರೆ ನೀವೇ ಯೋಚಿಸಿ ಎಂದು ಮನವಿ ಮಾಡಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.