ಬೆಂಗಳೂರು: ಕರ್ನಾಟಕ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಯ ಕರ್ನಾಟಕ – ಭಾರತ್‌ ಗೌರವ್‌ ಕಾಶಿ ದರ್ಶನ ರೈಲು ಯಾತ್ರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್‌ 11 ರಂದು ಚಾಲನೆ ನೀಡಲಿದ್ದಾರೆ ಎಂದು ಮುಜರಾಯಿ ಹಜ್‌ ಮತ್ತು ವಕ್ಫ್‌ ಸಚಿವೆ ಶಶಿಕಲಾ ಅ ಜೊಲ್ಲೆ ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: "ಧರ್ಮ, ಜಾತಿ ಬಿಟ್ಟರೆ ರಾಷ್ಟ್ರೀಯ ಪಕ್ಷಗಳಿಗೆ ಬೇರೆ ವಿಷಯ ಇಲ್ಲ"


ಈ ಬಗ್ಗೆ ಮಾಧ್ಯಮ ಪ್ರಕಟಣೆಯನ್ನು ನೀಡಿರುವ ಅವರು, ಕರ್ನಾಟಕ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಕಾಶಿ ದರ್ಶನ ರೈಲು ಪ್ಯಾಕೇಜ್‌ ಟೂರ್‌ ಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಮೃತ ಹಸ್ತದಿಂದ ಚಾಲನೆ ದೊರೆಯುತ್ತಿರುವುದು ಬಹಳ ಸಂತಸದ ಸಂಗತಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಮುತುವರ್ಜಿಯಿಂದ ಪುನರ್‌ ನಿರ್ಮಾಣಗೊಳಿಸಲಾಗಿರುವ ಭವ್ಯ ಕಾಶಿ – ದಿವ್ಯ ಕಾಶಿಯನ್ನು ರಾಜ್ಯದ ಜನರು ಕಡಿಮೆ ವೆಚ್ಚದಲ್ಲಿ ಕಣ್ತುಂಬಿಕೊಳ್ಳಲಿ ಎನ್ನುವ ಪ್ರಮುಖ ಉದ್ದೇಶದಿಂದ ಈ ರೈಲು ಪ್ರವಾಸವನ್ನು ಆಯೋಜಿಸಲಾಗಿದೆ. ನನ್ನ ಆಶಯಕ್ಕೆ ಬೆನ್ನುಲಾಗಿ ನಿಂತ ಮುಖ್ಯಮಂತ್ರಿಗಳಿಗೆ ವಿಶೇಷ ಅಭಿನಂದನೆಗಳನ್ನ ಸಲ್ಲಿಸಿದ್ದೇನೆ ಎಂದಿದ್ದಾರೆ. 


ಇದನ್ನೂ ಓದಿ: ಹುಬ್ಬಳ್ಳಿ ಈದ್ಗಾ ಮೈದಾನ ಇನ್ನು ರಾಣಿ ಚೆನ್ನಮ್ಮ ಮೈದಾನ


ಕಾಶಿ ದರ್ಶನ ಯಾತ್ರೆಗೆ ಅಭೂತಪೂರ್ವ ಸ್ಪಂದನೆ; ಎರಡನೇ ಟ್ರಿಪ್‌ ಕೂಡಾ ಸೋಲ್ಡ್‌ ಔಟ್‌:


ನವೆಂಬರ್‌ 23ರಂದು ಎರಡನೇ ಟ್ರಿಪ್‌ ಕರ್ನಾಟಕ – ಭಾರತ್‌ ಗೌರವ್‌ ಕಾಶಿ ದರ್ಶನ ರೈಲು ಯಾತ್ರೆಯ ಟ್ರಿಪ್‌ನ ದಿನಾಂಕವನ್ನು ಘೋಷಣೆ ಮಾಡಲಾಗಿತ್ತು. ಟಿಕೆಟ್‌ ಬುಕ್ಕಿಂಗ್‌ ಪ್ರಾರಂಭ ಮಾಡಿದ ಎರಡೇ ದಿನಗಳಲ್ಲಿ ಎರಡನೇ ಟ್ರಿಪ್‌ ನ ಎಲ್ಲಾ ಟಿಕೆಟ್‌ ಗಳು ಸೋಲ್ಡ್‌ ಔಟ್‌ ಆಗಿವೆ. ಕಾಶಿ ದರ್ಶನ ಯಾತ್ರೆಗೆ ಅಭೂತಪೂರ್ವ ಸ್ಪಂದನೆ ದೊರೆಯುತ್ತಿರುವುದು ಬಹಳ ಸಂತಸದ ಸಂಗತಿಯಾಗಿದೆ. ಇನ್ನು ಕೆಲವೇ ದಿನಗಳಲ್ಲಿ ಮುಂದಿನ ಟ್ರಿಪ್‌ಗಳ ದಿನಾಂಕವನ್ನು ಘೋಷಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.