ಮೈಸೂರು. ಮೈಸೂರು ತಾಲೂಕಿನ ಕಡಕೋಳ ಗ್ರಾಮದಲ್ಲಿ ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿ ಅವರ ಕಾರಿಗೆ ಅಪಘಾತವಾಗಿದೆ.ಅವರು ಪ್ರಯಾಣಿಸುತ್ತಿದ್ದ ಕಾರು ಜಖಂಗೊಂಡಿದೆ ಎನ್ನಲಾಗಿದೆ.


COMMERCIAL BREAK
SCROLL TO CONTINUE READING

ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಹ್ಲಾದ್ ಮೋದಿ ಮಗ ಹಾಗೂ ಸೊಸೆಗೆ ಸಣ್ಣಪುಟ್ಟ ಗಾಯಗಳಾಗಿವೆ. ಅವರು ಬೆಂಗಳೂರಿನಿಂದ ಬಂಡೀಪುರಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ.


ಈಗ ಅಪಘಾತ ನಡೆದಿರುವ ಸ್ಥಳಕ್ಕೆ ಮೈಸೂರು ಎಸ್ ಪಿ ಸೀಮಾ ಭೇಟಿ ನೀಡಿದ್ದಾರೆ.ಮೈಸೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.