" ಪ್ರಧಾನಿ ನರೇಂದ್ರ ಮೋದಿ ಕರೆ ಅತ್ಯಂತ ಪ್ರಚೋದನಕಾರಿಯಾದುದು ಮಾತ್ರವಲ್ಲ ಸಂವಿಧಾನ ವಿರೋಧಿಯಾದುದು"-ಸಿಎಂ ಸಿದ್ದರಾಮಯ್ಯ 


COMMERCIAL BREAK
SCROLL TO CONTINUE READING


ಬೆಂಗಳೂರು: ‘‘ಸನಾತನ ಧರ್ಮದ ಬಗೆಗಿನ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆಗೆ ತಕ್ಕ ಪ್ರತ್ಯುತ್ತರ ನೀಡಿ’’ ಎಂಬ ಪ್ರಧಾನಿ ನರೇಂದ್ರ ಮೋದಿ ಕರೆ ಅತ್ಯಂತ ಪ್ರಚೋದನಕಾರಿಯಾದುದು ಮಾತ್ರವಲ್ಲ ಸಂವಿಧಾನ ವಿರೋಧಿಯಾದುದು. ಈ ಪ್ರಚೋದನಕಾರಿ ಹೇಳಿಕೆಯನ್ನು ಹಿಂದಕ್ಕೆ ಪಡೆಯಬೇಕೆಂದು ಆಗ್ರಹಿಸುತ್ತೇನೆ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.


ಇದನ್ನೂ ಓದಿ: ʼಬಾನದಾರಿಯಲ್ಲಿʼ ಅಪ್ಪುವನ್ನು ಸ್ಮರಿಸಿದ ಹಿರಿಯ ನಟ ರಂಗಾಯಣ ರಘು


ವಿಷಯ-ವಿದ್ಯಮಾನಗಳೇನೇ ಇರಲಿ, ಯಾರಾದರೂ ತಪ್ಪು ಮಾಡಿದ್ದರೆ ಕಾನೂನು ಪ್ರಕಾರ ಅಂತಹವರ ವಿರುದ್ಧ ಕ್ರಮಕೈಗೊಳ್ಳಬೇಕಾಗುತ್ತದೆ. ಇದರ ಬದಲಿಗೆ ತಕ್ಕ ಪ್ರತ್ಯುತ್ತರ ನೀಡಿ ಎಂದು ಜನರನ್ನು ಪ್ರಚೋದಿಸುವುದು, ಕಾನೂನನ್ನು ಕೈಗೆತ್ತಿಕೊಳ್ಳಲು ನೀಡುವ ಕರೆಯಾಗುತ್ತದೆ.ಇದನ್ನು ಪ್ರಧಾನಿಯವರು ಮಾಡಿದರೂ ಅಪರಾಧವೇ. ನರೇಂದ್ರ ಮೋದಿ ಅವರು ಕೇವಲ ಬಿಜೆಪಿಯ ನಾಯಕರಲ್ಲ, ಅವರು ಸಾಂವಿಧಾನಿಕ ಹುದ್ದೆಯಾದ ಪ್ರಧಾನಮಂತ್ರಿಯ ಕುರ್ಚಿಯಲ್ಲಿ ಕುಳಿತಿರುವವರು. ಹೀಗಿರುವಾಗ ಅವರ ನಡೆ-ನುಡಿ ಮತ್ತು ಕ್ರಿಯೆ-ಪ್ರತಿಕ್ರಿಯೆ ಆ ಸ್ಥಾನದ ಘನತೆ-ಗೌರವ ಮತ್ತು ಜವಾಬ್ದಾರಿಗಳಿಗೆ ತಕ್ಕಂತೆ ಇರಬೇಕಾಗಿರುವುದು ರಾಜಧರ್ಮವಾಗಿದೆ ಎಂದು ಅವರು ಹೇಳಿದರು.


ಇದನ್ನೂ ಓದಿ- ಹೆಸರಿಡದ ಸಿನಿಮಾ ರಿಲೀಸ್‌ಗೆ ಡೇಟ್‌ ಫಿಕ್ಸ್‌ : ವಿಕಾಸ್ ಬಹ್ಲ್‌ ನಿರ್ದೇಶನದ ಚಿತ್ರ


ನರೇಂದ್ರ ಮೋದಿ ಅವರು ಇನ್ನೂ ಆರ್.ಎಸ್.ಎಸ್ ನ ತನ್ನ ಪೂರ್ವಾಶ್ರಮದ ಗುಂಗಿನಲ್ಲಿದ್ದಂತೆ ಕಾಣುತ್ತಿದೆ. ತಾನು ಈ ದೇಶದ 140 ಕೋಟಿ ಜನರಿಗೂ ಪ್ರಧಾನಿ ಎನ್ನುವುದನ್ನು ಮರೆತಂತಿದೆ. ಪ್ರಧಾನಿಯವರ ಇಂತಹ ಹೇಳಿಕೆಗಳಿಂದ ಪ್ರಚೋದಿತರಾಗಿ ಅವರದ್ದೇ ಪಕ್ಷ ಮತ್ತು ಸಂಘಟನೆಯ ಅನೇಕ ನಾಯಕರು ಹಿಂಸಾಚಾರಕ್ಕೆ ಕರೆನೀಡುತ್ತಿರುವುದು ಕಳವಳಕಾರಿ ಬೆಳವಣಿಗೆಯಾಗಿದೆ ಎಂದರು.


ಪ್ರಧಾನಿ ನರೇಂದ್ರ ಮೋದಿ ಅವರ ಹಿಂದಿನ ನಡವಳಿಕೆಗಳನ್ನು ಗಮನಿಸಿದರೆ ಅವರ ಈಗಿನ ಹೇಳಿಕೆಗಳು ಅಚ್ಚರಿ ಹುಟ್ಟಿಸುವುದಿಲ್ಲ.ಗುಜರಾತ್ ಗಲಭೆಯ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿ ನರೇಂದ್ರ ಮೋದಿಯವರು ನಡೆದುಕೊಂಡ ರೀತಿಯ ಬಗ್ಗೆ ಆಗಿನ ಪ್ರಧಾನಿ ಅಟಲ ಬಿಹಾರಿ ವಾಜಪೇಯಿ ಅವರೇ ಅಸಮಾಧಾನ ವ್ಯಕ್ತಪಡಿಸಿ, ರಾಜಧರ್ಮ ಪಾಲಿಸಲು ಕರೆ ಕೊಟ್ಟಿದ್ದರು. ದಿವಂಗತ ವಾಜಪೇಯಿ ಅವರ ಆ ಬುದ್ದಿಮಾತನ್ನೇ ಈ ಸಂದರ್ಭದಲ್ಲಿ ಮೋದಿಯವರಿಗೆ ನೆನಪು ಮಾಡಿಕೊಡಲು ಬಯಸುತ್ತೇನೆ ಎಂದು ಹೇಳಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್.