Breaking News: ಖಾಸಗಿ ಬಸ್ ಪಲ್ಟಿಯಾಗಿ ಸ್ಥಳದಲ್ಲೇ 8 ಮಂದಿ ದುರ್ಮರಣ!

ಬಸ್ ನಲ್ಲಿ ಅಧಿಕ ಸಂಖ್ಯೆಯ ಪ್ರಯಾಣಿಕರನ್ನು ತುಂಬಿಕೊಂಡು ವೇಗವಾಗಿ ಚಲಾಯಿಸಿಸಿದ್ದೇ ಈ ಅಪಘಾತಕ್ಕೆ ಕಾರಣವೆಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

Written by - Zee Kannada News Desk | Last Updated : Mar 19, 2022, 12:20 PM IST
  • ಖಾಸಗಿ ಬಸ್ ಪಲ್ಟಿಯಾಗಿ 8 ಮಂದಿ ಸ್ಥಳದಲ್ಲೇ ದುರ್ಮರಣ
  • ತುಮಕೂರು ಜಿಲ್ಲೆಯ ಪಳವಳ್ಳಿ ಕಟ್ಟೆ ಹತ್ತಿರ ಬೆಳಗ್ಗೆ ಘಟನೆ
  • 25ಕ್ಕೂ ಹೆಚ್ಚು ಮಂದಿಗೆ ಗಾಯ, ಸ್ಥಳೀಯ ಆಸ್ಪತ್ರೆಗೆ ದಾಖಲು
Breaking News: ಖಾಸಗಿ ಬಸ್ ಪಲ್ಟಿಯಾಗಿ ಸ್ಥಳದಲ್ಲೇ 8 ಮಂದಿ ದುರ್ಮರಣ! title=
ಖಾಸಗಿ ಬಸ್ ಪಲ್ಟಿಯಾಗಿ ದುರಂತ

ತುಮಕೂರು: ಖಾಸಗಿ ಬಸ್ ಪಲ್ಟಿ(Private Bus Accident)ಯಾಗಿ 8 ಮಂದಿ ಸಾವನ್ನಪ್ಪಿದ್ದು, 25ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಪಳವಳ್ಳಿ ಕಟ್ಟೆ(Palavalli Katte) ಹತ್ತಿರ ಶನಿವಾರ ನಡೆದಿದೆ. ತುಮಕೂರು ಜಿಲ್ಲೆಯ ಪಾವಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿ ಈ ದುರಂತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

ವೈ.ಎನ್.ಹೊಸಕೋಟೆಯಿಂದ ಪಾವಗಡ(Pavagada)ಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ನಲ್ಲಿ 30ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು. ಇದರಲ್ಲಿ ಕಾಲೇಜು ವಿದ್ಯಾರ್ಥಿಗಳು ಸಹ ಇದ್ದರು ಎಂದು ಹೇಳಲಾಗುತ್ತಿದೆ. ಚಾಲಕ ವೇಗವಾಗಿ ಬಸ್ ಚಲಾಯಿಸಿ ನಿರ್ಲಕ್ಷ್ಯ ತೋರಿದ್ದರಿಂದ ಈ ಅಪಘಾತ ಸಂಭವಿಸಿದೆ ಅಂತಾ ಹೇಳಲಾಗುತ್ತಿದೆ.

ಇದನ್ನೂ ಓದಿ: 'ಮೇಕೆದಾಟು ಯೋಜನೆಗೆ ತ್ವರಿತ ಅನುಮೋದನೆ ಪಡೆಯಲು ಕ್ರಮ'

ಬಸ್ ನಲ್ಲಿ ಪ್ರಯಾಣಿಕರು ತುಂಬಿದ್ದರು, ಟಾಪ್ ನಲ್ಲಿ ಕೂಡ ಅನೇಕ ಪ್ರಯಾಣಿಕರು ಕುಳಿತಿದ್ದರು. ಪಳವಳ್ಳಿ ಕಟ್ಟೆ ತಿರುವಿನಲ್ಲಿ ದುರಂತ ಸಂಭವಿಸಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. ಅಪಘಾತ(Accident)ದ ಬಳಿಕ ಬಸ್ ಚಾಲಕ ಮತ್ತು ನಿರ್ವಾಹಕ ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ.

ಬಸ್ ನಲ್ಲಿ ಅಧಿಕ ಸಂಖ್ಯೆಯ ಪ್ರಯಾಣಿಕರನ್ನು ತುಂಬಿಕೊಂಡು ವೇಗವಾಗಿ ಚಲಾಯಿಸಿದ್ದೇ ಈ ಅಪಘಾತಕ್ಕೆ ಕಾರಣವೆಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಮೃತಪಟ್ಟವರಲ್ಲಿ ಬಹುತೇಕ ಕಾಲೇಜು ವಿದ್ಯಾರ್ಥಿಗಳಿದ್ದಾರೆ ಎಂದು ಹೇಳಲಾಗಿದೆ. ಗಾಯಗೊಂಡವರನ್ನು ಸ್ಥಳೀಯರು ಪಾವಗಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ತಿಳಿದು ಸ್ಥಳಕ್ಕೆ ಪಾವಗಡ ಪೊಲೀಸರು(Pavagada Police) ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಶೇ 70 ರಷ್ಟು ‌ಉದ್ಯೋಗ ನೀಡಲು ಬದ್ದ : ಸಚಿವ ನಿರಾಣಿ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News