Viral Video: ಬಸ್ ಚಾಲಕನ ಚಾಣಾಕ್ಷತನದಿಂದ ಪಾದಚಾರಿ ಮಹಿಳೆ ಕೂದಲೆಳೆಯ ಅಂತರದಲ್ಲಿ ಪಾರು...!

Video Viral On Social Media: ಖಾಸಗಿ ಬಸ್ ಚಾಲಕನ ಚಾಣಾಕ್ಷತನದಿಂದ ಪಾದಚಾರಿ ಮಹಿಳೆ ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾರೆ. ಚಾಲಕನ ಸಮಯಪ್ರಜ್ಞೆ ಕಂಡು ಹೆಚ್ಚಿನವರು ಮೆಚ್ಚುಗೆ ಸೂಚಿಸಿದ್ದಾರೆ. 

Written by - Zee Kannada News Desk | Last Updated : Jun 21, 2023, 02:55 PM IST
  • ಚಾಲಕನ ಚಾಣಾಕ್ಷತನದಿಂದ ಪಾದಚಾರಿ ಮಹಿಳೆ ಪಾರು
  • ಮಹಿಳೆ ಅಪಘಾತದಿಂದ ಪಾರಾಗಿರುವುದು ಸಿಸಿಟಿವಿ ವೀಡಿಯೋದಲ್ಲಿ ರೆಕಾರ್ಡ್‌
  • ಬಸ್ ಚಾಲಕನ ಚಾಣಾಕ್ಷತಕ್ಕೆ ಎಲ್ಲರಿಂದ ಮೆಚ್ಚುಗೆ
Viral Video: ಬಸ್ ಚಾಲಕನ ಚಾಣಾಕ್ಷತನದಿಂದ ಪಾದಚಾರಿ ಮಹಿಳೆ ಕೂದಲೆಳೆಯ ಅಂತರದಲ್ಲಿ ಪಾರು...! title=

ಮಂಗಳೂರು: ಖಾಸಗಿ ಬಸ್ ಚಾಲಕನ ಚಾಣಾಕ್ಷತನದಿಂದ ಪಾದಚಾರಿ ಮಹಿಳೆ ಕೂದಲೆಳೆಯ ಅಂತರದಲ್ಲಿ ಪಾರುಗಿರುವ ಘಟನೆ  ಮಂಗಳೂರು ನಗರದ ತೌಡುಗೋಳಿ ಸಮೀಪದ ನರಿಂಗಾನದಲ್ಲಿ ನಡೆದಿದೆ.

ಮಹಿಳೆ ಅಪಘಾತದಿಂದ ಪಾರಾಗಿರುವುದು ಸಿಸಿಟಿವಿ ವೀಡಿಯೋದಲ್ಲಿ ರೆಕಾರ್ಡ್‌ ಆಗಿದೆ.ಮಂಗಳೂರು ಮುಡಿಪುವಿಗೆ ಚಲಿಸುವ ಗೋಪಾಲಕೃಷ್ಣ ಖಾಸಗಿ ಬಸ್ ಚಾಲಕನ ಚಾಣಾಕ್ಷತನದಿಂದ ಮಹಿಳೆ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ.

ಇದನ್ನೂ ಓದಿ: Video Viral: ಗಾಯಕರನ್ನು ಮೀರಿಸುವಂತಿತ್ತು ಈ ಪೊಲೀಸ್ ಅಧಿಕಾರಿ ಹಾಡು; ಇಲ್ಲಿದೆ ನೋಡಿ ವಿಡಿಯೋ ..!

ಮಹಿಳೆಯೋರ್ವರು ರಸ್ತೆಯಲ್ಲಿ ಬರುವ ವಾಹನಗಳನ್ನು ಗಮನಿಸದೆ ರಸ್ತೆ ದಾಟಿದ್ದಾರೆ. ಅದೇ ವೇಳೆ ಭಾರಿ ವೇಗದಲ್ಲಿ ಖಾಸಗಿ ಬಸ್ ಬರುತ್ತಿತ್ತು. ಭಾರಿ ವೇಗದಲ್ಲಿ ಇದ್ದರೂ  ಮಹಿಳೆ ರಸ್ತೆ ದಾಟುವುದನ್ನು ಗಮನಿಸಿದ ಬಸ್ ಡ್ರೈವರ್ ಬಸ್ ನ್ನು ಎಡಕ್ಕೆ ಸರಿಸಿ ಕೂದಲೆಳೆ ಅಂತರದಲ್ಲಿ ಮಹಿಳೆಯನ್ನು ರಕ್ಷಿಸಿದ್ದಾರೆ. ಚಾಲಕನ ಸಮಯಪ್ರಜ್ಞೆಯಿಂದ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ‌. ಬಳಿಕ ಎಲ್ಲರೂ ಮಹಿಳೆಯ ಆರೋಗ್ಯ ವಿಚಾರಿಸಿ ಕಳುಹಿಸಿ ಕೊಟ್ಟಿದ್ದಾರೆ.

ಈ ಘಟನೆಯ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದ್ದು, ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ. ಚಾಲಕನ ಸಮಯಪ್ರಜ್ಞೆ ಕಂಡು ಹೆಚ್ಚಿನವರು ಮೆಚ್ಚುಗೆ ಸೂಚಿಸಿದ್ದಾರೆ. ವೈರಲ್‌ ಆಗಿರುವ ಈ ವಿಡಿಯೋಗೆ ನೆಟ್ಟಿಗರು ಸಹ ಉತ್ತಮ ಅಭಿಪ್ರಾಯ ನೀಡಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News