ಬೆಂಗಳೂರು: ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕರಿಗೂ ಬಿಜೆಪಿ ನಾಯಕರಿಗೂ ಅತ್ಯುತ್ತಮ ಒಡನಾಟವಿದ್ದು, ಈ ಅಕ್ರಮದಲ್ಲಿ ಬಿಜೆಪಿ ನಾಯಕರ ಪಾಲೆಷ್ಟು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಆರೋಪಿಸಿದ್ದಾರೆ.  


COMMERCIAL BREAK
SCROLL TO CONTINUE READING

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಈ ವಿಚಾರವಾಗಿ ಮಾಹಿತಿ ನೀಡಿದ ಪ್ರಿಯಾಂಕ್ ಅವರು ಹೇಳಿದ್ದಿಷ್ಟು; “ನಮ್ಮ ವಿಶ್ವ ವಿಖ್ಯಾತ ಮೈಸೂರು ಸ್ಯಾಂಡಲ್ ಸಾಬೂನಿನ ನಕಲಿ ಉತ್ಪನ್ನಗಳ ಮಾರಾಟದ ಬಗ್ಗೆ ಮಾಧ್ಯಮಗಳಲ್ಲಿ ಭಾರಿ ಚರ್ಚೆಯಾಗಿದೆ. ಜನವರಿ ಮೊದಲ ವಾರದಲ್ಲಿ ಸಚಿವ ಎಂ.ಬಿ ಪಾಟೀಲ್ ಅವರಿಗೆ ಅನಾಮಿಕ ಕರೆ ಬರುತ್ತದೆ. ಅದರಲ್ಲಿ ಈ ವಿಚಾರ ಪ್ರಸ್ತಾಪಿಸಲಾಗುತ್ತದೆ. ಕೂಡಲೇ ಸಚಿವರು ಕೆಎಸ್ ಡಿಎಲ್ ಎಂಡಿ ಪ್ರಶಾಂತ್ ಅವ್ರಿಗೆ ಮಾಹಿತಿ ನೀಡುತ್ತಾರೆ. 


ಇದನ್ನೂ ಓದಿ:ಪ್ರಮಾಣಪತ್ರ ಸಲ್ಲಿಸುವಾಗ ಕ್ರಿಮಿನಲ್‌ ಕೇಸ್‌ಗಳ ಮಾಹಿತಿ ನೀಡಬೇಕು: ಹೈಕೋರ್ಟ್


ನಂತರ ಈ ಜಾಲದ ಹುಡುಕಾಟ ನಡೆಯುತ್ತದೆ. ಇದು ಹೈದರಾಬಾದ್ ನಲ್ಲಿದೆ ಎಂದು ತಿಳಿಯುತ್ತದೆ. ಇದನ್ನು ತಡೆಗಟ್ಟಲು ಕೆಲವು ಅಧಿಕಾರಿಗಳು ಹೋಗಿ 25 ಲಕ್ಷದ ಆರ್ಡರ್ ನೀಡುತ್ತಾರೆ. ಅವರು ಇದನ್ನು ಪೂರೈಸುವುದಾಗಿ ಒಪ್ಪಿಕೊಳ್ಳುತ್ತಾರೆ. ಇದು ದೊಡ್ಡ ಮಟ್ಟದ ಆರ್ಡರ್ ಆಗಿರುವುದರಿಂದ ನಿಮ್ಮ ಕಾರ್ಖಾನೆಗೆ ಬಂದು ತೆಗೆದುಕೊಂಡು ಹೋಗುತ್ತೇವೆ ಎಂದು ಹೇಳುತ್ತಾರೆ. ಅದಕ್ಕೆ ಅವರು ಒಪ್ಪುತ್ತಾರೆ. ಈ ನಕಲಿ ಉತ್ಪಾದನಾ ಕಾರ್ಖಾನೆ ವಿಳಾಸ ತಿಳಿದ ತಕ್ಷಣ ಅಲ್ಲಿ ದಾಳಿ ಮಾಡಿ ಅದನ್ನು ಸೂಜ್ ಮಾಡಲಾಗುತ್ತದೆ. ತೆಲಂಗಾಣ ಮತ್ತು ಆಂಧ್ರಪ್ರದೇಶದ ಸೇಲ್ಸ್ ಮ್ಯಾನೇಜರ್ ಈ ವಿಚಾರವಾಗಿ ಪ್ರಕರಣ ದಾಖಲಿಸುತ್ತಾರೆ.


ಈ ಪ್ರಕರಣದ ಎಫ್ಐಆರ್ ಪ್ರಕಾರ ರಾಕೇಶ್ ಜೈನ್ ಹಾಗೂ ಮಹಾವೀರ್ ಜೈನ್ ಎಂಬ ಇಬ್ಬರು ವ್ಯಕ್ತಿಗಳ ಮೇಲೆ ಪ್ರಕರಣ ದಾಖಲಾಗುತ್ತದೆ. ಇವರಿಬ್ಬರೂ ಪೊಲೀಸರ ವಶದಲ್ಲಿದ್ದಾರೆ. ಈ ವಿಚಾರಣೆ ನಡೆಸುವ ಸಂದರ್ಭದಲ್ಲಿ ಹೊರಬಂದ ಅಚ್ಚರಿ ಹಾಗೂ ಮುಖ್ಯ ಸಂಗತಿ ಎಂದರೆ ಈ ಇಬ್ಬರು ವ್ಯಕ್ತಿಗಳು ಬಿಜೆಪಿಯ ಸಕ್ರಿಯ ಕಾರ್ಯಕರ್ತರು. ಇವರು ಯೋಗಿ ಆದಿತ್ಯನಾಥ್ ತೆಲಂಗಾಣ ಶಾಸಕ ರಾಜಾ ಸಿಂಗ್ ಅವರ ಒಡನಾಡಿಗಳಿದ್ದಾರೆ. ಇಷ್ಟೇಲ್ಲಾ ಒಡನಾಟ ಇಟ್ಟುಕೊಂಡಿರುವವರ ಜತೆ ರಾಜ್ಯ ಬಿಜೆಪಿ ನಾಯಕರು ಸಂಪರ್ಕ ಹೊಂದಿರುವುದಿಲ್ಲವೇ?


ಚಿತ್ತಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್, ಮಾಜಿ ಶಾಸಕ ವಾಲ್ಮೀಕಿ ನಾಯಕ ಅವರ ಪುತ್ರ ವಿಠಲ್ ನಾಯಕ್ ಜತೆ ಒಡನಾಟ ಇಟ್ಟುಕೊಂಡಿದ್ದಾರೆ. ಈ ಕಾರ್ಯಾಚರಣೆ ಮಾಡಿದ್ದು ರಾಜ್ಯದ ಆಸ್ತಿ ಉಳಿಸಿಕೊಳ್ಳಲು. ಕೃಷ್ಣರಾಜ ಒಡೆಯರ್ ಅವರು 1916ರಲ್ಲಿ ಸ್ಥಾಪಿಸಿದ ಸಂಸ್ಥೆ ಇದಾಗಿದ್ದು, ಕರ್ನಾಟಕದ ಹೆಮ್ಮೆಯ ಉತ್ಪನ್ನ. ಪ್ರಧಾನಮಂತ್ರಿಗಳ ಮೇಕ್ ಇನ್ ಇಡಿಯಾ, ವೋಕಲ್ ಫಾರ್ ಲೋಕಲ್ ಯೋಜನೆಗೂ ಮುನ್ನ  ಪ್ರಾರಂಭವಾಗಿರುವ ಸಂಸ್ಥೆಗಳು. 


ಇದನ್ನೂ ಓದಿ:ಶುಕ್ರವಾರ ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ ಫಿಕ್ಸ್‌


ನಾನು ಪ್ರವಾಸೋದ್ಯಮ ಸಚಿವನಾಗಿದ್ದಾಗ ಪ್ಯಾರೀಸ್ ಹೋಗುವ ಅವಕಾಶ ಸಿಕ್ಕಿತ್ತು. ಅಲ್ಲಿ ಪ್ರತಿ ದೇಶ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಲು ಅವಕಾಶವಿರುತ್ತದೆ. ಅಲ್ಲಿನ ಜನ ಮೈಸೂರ್ ಸ್ಯಾಂಡಲ್ ಸೋಪನ್ನು ಪ್ಯಾರೀಸ್ ನಲ್ಲಿ ಮಾರಾಟ ಮಾಡುವುದಿಲ್ಲ ಯಾಕೆ ಎಂದು ಕೇಳಿದ್ದರು. ನಮ್ಮ ರಾಜ್ಯದ ಉತ್ಪನ್ನ ವಿಶ್ವದಲ್ಲೇ ಹೆಸರುವಾಸಿಯಾಗಿದೆ. ಇಂತಹ ಉತ್ಪನ್ನಗಳನ್ನು ಬಿಜೆಪಿ ನಾಯಕರು ನಕಲಿ ಉತ್ಪನ್ನಗಳ ಮಾರಾಟಕ್ಕೆ ಶಾಮೀಲಾಗಿದ್ದಾರೆ. ಕೋವಿಡ್ ಸಮಯದಲ್ಲಿ ಹೆಣದ ಮೇಲೆ ಹಣ ಮಾಡಿದ್ದರು. ಈಗ ಕರ್ನಾಟಕದ ಆಸ್ತಿ ಮಾರಲು ತಯಾರಾಗಿದ್ದಾರೆ. 


ಬಿಜೆಪಿಯಲ್ಲಿ ಸ್ಯಾಂಟ್ರೋ ರವಿ, ಸೈಲೆಂಟ್ ಸುನೀಲ್, ಫೈಟರ್ ರವಿ, ಪೃಥ್ವಿ ಸಿಂಗ್ ರಂತಹವರು ಬಿಜೆಪಿಯಲ್ಲೇ ಕಾಣಿಸಿಕೊಳ್ಳುತ್ತಿರುವುದೇಕೆ? ರಾಜ್ಯದ ಆಸ್ತಿ ಮಾರಲು ಹೊರಟವರಿಗೆ ಪಕ್ಷದ ಟಿಕೆಟ್ ನೀಡಿ, ಪದಾಧಿಕಾರಿ ಮಾಡುತ್ತೀರಾ? ನಿಮಗೆ ನಾಚಿಕೆ ಇದ್ದರೆ ಅವರನ್ನು ವಜಾ ಮಾಡುತ್ತಿದ್ದಿರಿ.


ಮೊನ್ನೆ ಗರೀಬ್ ಕಲ್ಯಾಣ್ ಯೋಜನೆಯ 700 ಕ್ವಿಂಟಾಲ್ ಅಕ್ಕಿ ಬಿಜೆಪಿ ನಾಯಕರ ಗೋದಾಮಿನಲ್ಲಿ ಸಿಕ್ಕಿದೆ. ಮೋದಿ ಅಕ್ಕಿ ಎಂದು ಬೀಗುವ ಬಿಜೆಪಿ ನಾಯಕರು ಅದನ್ನು ಕದ್ದು ಸಿಕ್ಕಿಬಿದ್ದನಂತರವೂ ಆತನನ್ನು ಪಕ್ಷದಿಂದ ಹೊರಹಾಕಿಲ್ಲ ಎಂದರೆ ನಿಮಗೂ ಇದರಲ್ಲಿ ಪಾಲಿದೆ ಎಂಬ ಅನುಮಾನ ವ್ಯಕ್ತವಾಗುತ್ತದೆ. ಬಿಜೆಪಿ ನಾಯಕರಿಗೆ ಮಣಿಕಂಠ, ಪೃಥ್ವಿ ಸಿಂಗ್, ಸ್ಯಾಂಟ್ರೋ ರವಿ ಅವರ ಮೇಲೆ ಕ್ರಮ ಕೈಗೊಳ್ಳುವ ತಾಕತ್ತು ಬಿಜೆಪಿಯವರಿಗಿಲ್ಲ. ಕಾರಣ ಅವರ ಗುಟ್ಟುಗಳೆಲ್ಲಾ ಇವರ ಬಳಿಯೇ ಇದೆ.


ಇದನ್ನೂ ಓದಿ:ಯಶ್‌ ಕಟೌಟ್‌ ಕಟ್ಟುವ ವೇಳೆ ಮೂವರು ಮೃತ ಪ್ರಕರಣ, ಇಂದು ಸೂರಣಗಿಗೆ ಯಶ್ ಸ್ನೇಹಿತರ ಭೇಟಿ


ನಕಲಿ ಮೈಸೂರು ಸ್ಯಾಂಡಲ್ ಸೋಪು ಮಾರಿರುವ ಅಕ್ರಮದಲ್ಲಿ ನಿಮಗೆ ಎಷ್ಟು ಪಾಲು ಸಿಗುತ್ತಿದೆ? ಬಿಜೆಪಿ ಶಾಸಕರಾಗಿದ್ದ ಮಾಡಾಲ್ ವಿರುಪಾಕ್ಷಪ್ಪ ಅವರ ಮನೆಯಲ್ಲಿ 7 ಕೋಟಿ ಹಣ ಸಿಕ್ಕಿತ್ತು. ಅವರು ಇದೇ ಸಂಸ್ಥೆಯ ಜವಾಬ್ದಾರಿ ಹೊತ್ತಿದ್ದರು. ಆ ಪ್ರಕರಣದಲ್ಲಿ ಅವರ ಹೆಸರನ್ನು ಕೈಬಿಡಲಾಗಿದ್ದರೂ ಅವರ ಪುತ್ರನ ಹೆಸರು ಹಾಗೇ ಇದೆ. ಈ ಅಕ್ರಮದಲ್ಲೂ ಅವರ ಕೈವಾಡ ಇಲ್ಲವೇ? ಈ ಬಗ್ಗೆ ತನಿಖೆಯಾಗಬೇಕಲ್ಲವೇ?


ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ವಿರೋಧ ಪಕ್ಷದ ನಾಯಕರು ಈ ಬಗ್ಗೆ ಉತ್ತರ ನೀಡಬೇಕು. ಇವರನ್ನು ಕೂಡ ರಾಮಭಕ್ತರು ಎಂದು ಹೇಳಿ ಬೀದಿಗಿಳಿದು ಹೋರಾಟ ಮಾಡುತ್ತೀರಾ? ಅಥವಾ ಇವರನ್ನು ಪಕ್ಷದಿಂದ ವಜಾ ಮಾಡಿ ರಾಜ್ಯದ ಜನರಿಗೆ ತ್ತರ ನೀಡುತ್ತೀರಾ? ರಾಜ್ಯ ಬಿಜೆಪಿ ನಾಯಕರಿಗೆ ಇದರಲ್ಲಿ ಪಾಲಿದೆ. ಇವರು ಕನ್ನಡ ವಿರೋಧಿ ಬಿಜೆಪಿ. ಇವರಿಗೆ ಹಣ ಬಂದರೆ ಸಾಕು ಯಾವುದಕ್ಕೂ ಹಿಂಜರಿಯುವುದಿಲ್ಲ. ರಾಜ್ಯದ ಗೌರವವನ್ನು ಈ ರೀತಿ ಮಾರಾಟ ಮಾಡುತ್ತಾರೆ ಎಂದು ಭಾವಿಸಿರಲಿಲ್ಲ.


ನಮ್ಮ ಸರ್ಕಾರ ಈ ವಿಚಾರದಲ್ಲಿ ಎಚ್ಛೆತ್ತು ಎಫ್ ಐಆರ್ ದಾಖಲಿಸಲಾಗಿದೆ. ನಮ್ಮ ಅಧಿಕಾರಿಗಳು ಹೈದರಾಬಾದ್ ನಲ್ಲಿದ್ದು, ತೆಲಂಗಾಣ ಉಪಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡಿ ತನಿಖೆಗೆ ಸಹಕಾರ ನೀಡುವಂತೆ ಕೋರಿದ್ದೇವೆ. ಈ ವಿಚಾರವಾಗಿ ಎಂ.ಬಿ ಪಾಟೀಲ್ ಅವರಿಗೂ ತಿಳಿಸಿದ್ದೇನೆ. ಅವರು ಡಾವೋಸ್ ನಲ್ಲಿರುವ ಕಾರಣ ಈ ವಿಚಾರವಾಗಿ ನಾನು ಮಾಧ್ಯಮಗೋಷ್ಠಿ ಮೂಲಕ ತಿಳಿಸುತ್ತಿದ್ದೇನೆ.”


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.