PPE ಕಿಟ್ ಧರಿಸಿ ಕೋವಿಡ್ ಆರೈಕೆ ಕೇಂದ್ರಕ್ಕೆ ಭೇಟಿ ನೀಡಿದ ಪ್ರಿಯಾಂಕ್ ಖರ್ಗೆ
ಹಾಲಿ ಶಾಸಕ ಹಾಗೂ ಮಾಜಿ ಸಚಿವರಾದ ಪ್ರಿಯಾಂಕ್ ಖರ್ಗೆ PPE ಕಿಟ್ ಧರಿಸಿ ಕೋವಿಡ್ ಆರೈಕೆ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿನ ಕೊರೊನಾ ಸಂತ್ರಸ್ತರನ್ನು ಭೇಟಿ ಮಾಡಿ ಧೈರ್ಯ ತುಂಬಿದ್ದಾರೆ.
ಬೆಂಗಳೂರು: ಹಾಲಿ ಶಾಸಕ ಹಾಗೂ ಮಾಜಿ ಸಚಿವರಾದ ಪ್ರಿಯಾಂಕ್ ಖರ್ಗೆ PPE ಕಿಟ್ ಧರಿಸಿ ಕೋವಿಡ್ ಆರೈಕೆ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿನ ಕೊರೊನಾ ಸಂತ್ರಸ್ತರನ್ನು ಭೇಟಿ ಮಾಡಿ ಧೈರ್ಯ ತುಂಬಿದ್ದಾರೆ.
ಕಲಬುರಗಿ ಜಿಲ್ಲೆಯಲ್ಲಿ ಕೊರೋನಾ ವೈರಸ್ ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿರುವ ಕಾರಣ ಜಿಲ್ಲೆಯಲ್ಲಿ ಬೆಡ್‌ಗಳ ಕೊರತೆ ಉಂಟಾಗಿತ್ತು. ಬೆಡ್ ಕೊರತೆ ನೀಗಿಸುವ ಸಲುವಾಗಿ ಪರಿಸರ ಸ್ನೇಹಿ ಹಾಗೂ ಮರುಬಳಕೆ ಮಾಡಬಹುದಾದ 100 ಬೆಡ್‌ಗಳನ್ನು ಖರೀದಿಸಿ, ಇವುಗಳನ್ನು ಬಳಸಿಕೊಂಡು ಚಿತ್ತಾಪುರ ತಾಲೂಕಿನ ನಾಗಾವಿ ಬಳಿ ಕೋವಿಡ್ ಆರೈಕೆ ಕೇಂದ್ರವನ್ನು ಸ್ಥಾಪಿಸಲಾಗಿದೆ.
ಇಲ್ಲಿನ ಆರೈಕೆ ಕೇಂದ್ರದ ನಿರ್ವಹಣೆ ಹಾಗೂ ವ್ಯವಸ್ಥೆಯೂ ಉತ್ತಮವಾಗಿದ್ದು, ಈ "ಚಿತ್ತಾಪುರ ಮಾದರಿ"ಯನ್ನು ಕಲಬುರಗಿಯ ಎಲ್ಲಾ ತಾಲೂಕುಗಳಲ್ಲಿ ಅನುಷ್ಠಾನಗೊಳಿಸಬೇಕೆಂದು ಜಿಲ್ಲಾಡಳಿತಕ್ಕೆ ಮನವಿ ಮಾಡುತ್ತೇನೆ. ಬೆಡ್‌ಗಳ ಕೊರತೆಯಿಂದಾಗಿ ಜಿಲ್ಲೆಯಲ್ಲಿ ದಿನನಿತ್ಯ ಜನರು ಪರದಾಡುತ್ತಿದ್ದಾರೆ ಮತ್ತು ಕೆಲ ಜನರು ತಮ್ನ ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಈ ರೀತಿಯ ಆರೈಕೆ ಕೇಂದ್ರಗಳನ್ನು ಎಲ್ಲಾ ತಾಲೂಕುಗಳಲ್ಲಿ ಸ್ಥಾಪಿಸುವುದರಿಂದ ಬೆಡ್‌ಗಳ ಕೊರತೆಯನ್ನು ನೀಗಿಸಬಹುದು ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಇಂದು ಈ ಕೋವಿಡ್ ಆರೈಕೆ ಕೇಂದ್ರಕ್ಕೆ ಭೇಟಿ ನೀಡಿ PPE ಕಿಟ್ ಧರಿಸಿ ಇಲ್ಲಿನ ಊಟೋಪಚಾರ ಹಾಗೂ ವ್ಯವಸ್ಥೆಯನ್ನು ಪರಿಶೀಲಿಸಿದೆ. ಕೊರೋನಾ ಸೊಂಕಿಗೆ ಒಳಗಾಗಿರುವ ಇಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತರನ್ನ ಮಾತನಾಡಿಸಿ, ಅಲ್ಲಿನ ವ್ಯವಸ್ಥೆಯ ಕುರಿತು ಸಮಾಲೋಚನೆ ನಡೆಸಿದೆ ಹಾಗೂ ಕೊರೋನಾ ನಿಯಂತ್ರಣಕ್ಕಾಗಿ ಹಗಲಿರುಳು ಹೋರಾಡುತ್ತಿರುವ ಅಲ್ಲಿನ ವೈದ್ಯರು, ಶುಶ್ರೂಷಕರು, ಸಿಬ್ಬಂದಿಗಳೊಂದಿಗೆ ಚರ್ಚಿಸಿ ಅವರಿಗೆ ಆತ್ಮಸ್ಥೈರ್ಯ ತುಂಬಲಾಯಿತು.