ಬೆಂಗಳೂರು: ನನ್ನ ರಾಜಕೀಯ ಜೀವನ ಪ್ರಾರಂಭವಾಗಲು ಪ್ರೊ. ನಂಜುಂಡಸ್ವಾಮಿಯವರೇ ಕಾರಣ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಅವರು ಭಾನುವಾರದಂದು ಟಿ.ಎನ್.ಸೀತಾರಾಂ ಅವರ "ನೆನಪಿನ ಪುಟಗಳು" ಗ್ರಂಥ ಲೋಕಾರ್ಪಣೆಗೊಳಿಸಿ ಮಾತನಾಡಿದರು.
ಇದನ್ನೂ ಓದಿ: ಟೀಂ ಇಂಡಿಯಾಗೆ ಬಿಗ್ ಶಾಕ್: ದಕ್ಷಿಣ ಆಫ್ರಿಕಾ ಸರಣಿಯಲ್ಲಿ ಆಡಲ್ಲ ಈ ಪವರ್ ಫುಲ್ ವೇಗಿ!
ಟಿ.ಎನ್.ಸೀತಾರಾಂ ಸುಮಾರು 40 ವರ್ಷಗಳ ಒಡನಾಟವಿರುವ ಆಪ್ತಸ್ನೇಹಿತ. ನಾನು ಲಂಕೇಶ್ ಪತ್ರಿಕಾಲಯಕ್ಕೆ ಭೇಟಿ ನೀಡುತ್ತಿದ್ದೆ. ಕಾನೂನು ವಿದ್ಯಾರ್ಥಿಯಾಗಿದ್ದಾಗ ಪ್ರೊ. ನಂಜುಂಡಸ್ವಾಮಿಯವರು ಕಾನೂನು ಕಾಲೇಜಿನ ಪ್ರಾಧ್ಯಾಪಕರಾಗಿದ್ದರು. ಆಗ ರಾಜಕೀಯ ಕ್ಷೇತ್ರದಲ್ಲಿ ಆಸಕ್ತಿಯಿದ್ದ ವಿದ್ಯಾರ್ಥಿಗಳೊಂದಿಗೆ ಚರ್ಚೆ ನಡೆಸುತ್ತಿದ್ದರು. ಸಮಾಜವಾದಿ ಯುವಜನಸಭಾದಲ್ಲಿ ನಾನು ಸದಸ್ಯನಾಗಲು ನೆರವಾದರು. 1971 ರಲ್ಲಿ ವೀರೆಂದ್ರ ಪಾಟೀಲ್ ಮುಖ್ಯಮಂತ್ರಿಯಾಗಿದ್ದಾಗ, ಸರ್ಕಾರದ ವಿರುದ್ಧ ನಡೆದ ಚಳವಳಿಯಲ್ಲಿ ನಾನು ಭಾಗಿಯಾಗಿದ್ದೆ. ನನ್ನ ರಾಜಕೀಯ ಜೀವನ ಪ್ರಾರಂಭವಾಗಲು ಪ್ರೊ. ನಂಜುಂಡಸ್ವಾಮಿಯವರೇ ಕಾರಣ.
ಜನತಾಪಾರ್ಟಿಯಲ್ಲಿ ಪದಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ನನಗೆ ಪಕ್ಷದ ನಾಯಕರು ಪ್ರೋತ್ಸಾಹ ನೀಡಿದರು. ನಂತರ ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆ ಗೆದ್ದ ಮೇಲೆ ರಾಮಕೃಷ್ಣ ಹೆಗಡೆಯವರಿಗೆ ಬೆಂಬಲ ಸೂಚಿಸಿದೆ. ನಂತರ ಕಾವಲು ಸಮಿತಿಯ ಅಧ್ಯಕ್ಷನಾಗಿ ಕಾರ್ಯನಿರ್ವಹಿಸಿದೆ. 1984 ರಲ್ಲಿ ರೇಷ್ಮೆ ಸಚಿವನಾಗಿ ಕೆಲಸ ಮಾಡಿದೆ. 1985 ರಲ್ಲಿ ಜನತಾದಳದ ಪರವಾಗಿ ನಿಂತು ಜಯ ಸಾಧಿಸಿದ ನಂತರ ಪಶುಸಂಗೋಪನೆ ಸಚಿವನಾಗಿ ಕೆಲಸ ನಿರ್ವಹಿಸಿದೆ. ಆ ಸಂದರ್ಭದಲ್ಲಿ ಕಾರಣಾತರಗಳಿಂದ ಸಚಿವ ಸ್ಥಾನ ಕಳೆದುಕೊಳ್ಳಬೇಕಾಯಿತು. ಆ ಸಂದರ್ಭದಲ್ಲಿ ನನ್ನ ಬಳಿಯಿದ್ದ ಸ್ಕೂಟರ್ ನಲ್ಲಿ ಓಡಾಡುತ್ತಿದ್ದೆ.
ಇದನ್ನೂ ಓದಿ: ಸೊಸೆ ಐಶ್ವರ್ಯಾರನ್ನ ಅನ್’ಫಾಲೋ ಮಾಡಿದ ಬೆನ್ನಲ್ಲೇ ಅಮಿತಾಬ್ ವಿಚಿತ್ರ ಪೋಸ್ಟ್!
ಟಿ.ಎನ್.ಸೀತಾರಾಂ ಅವರು ಬದುಕಿನ ಎಲ್ಲ ಸ್ತರಗಳ ಅನುಭವ ಇರುವವರು. ವಿದ್ಯಾರ್ಥಿ ದೆಸೆ, ಸ್ನೇಹಿತರ ಒಡನಾಟ, ರಾಜಕೀಯ, ಕಲಾ ಸೇವೆಯಲ್ಲಿ ತೊಡಗಿರುವ ಸೀತಾರಾಂ ಅವರು ಬಹುಮುಖ ಪ್ರತಿಭೆ. ರಾಮಕೃಷ್ಣ ಹೆಗಡೆಯವರ ಆಪ್ತರಾಗಿರುವವರು. ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯರಾಗಿದಿದ್ದರೆ, ಶಾಸಕರಾಗುವ ಸಾಧ್ಯತೆಯೂ ಇತ್ತು. ರಾಮಕೃಷ್ಣ ಹೆಗಡೆಯವರಿಗೆ ಬಹಳ ಜನಪ್ರಿಯತೆ ಇದ್ದ ಕಾರಣ, ಜನತಾ ಪಾರ್ಟಿ ಪರವಾದ ಅಲೆ ಇತ್ತು.
ನೆನಪಿನ ಪುಟಗಳ ಪುಸ್ತಕವನ್ನು ಉತ್ತಮವಾಗಿ ಹಾಗೂ ಸತ್ಯವನ್ನೇ ಬರೆದಿದ್ದಾರೆ. ನನ್ನ ಉತ್ತಮ ಸ್ನೇಹಿತರಾಗಿರುವ ಟಿ.ಎನ್.ಸೀತಾರಾಂ ಅವರು ಬರೆದಿರುವ ಕೃತಿಯನ್ನು ಅತ್ಯಂತ ಸಂತೋಷದಿಂದ ಬಿಡುಗಡೆ ಮಾಡುತ್ತಿದ್ದೇನೆ.
ಹಿರಿಯ ನಟ, ಆಪ್ ಪಕ್ಷದ ರಾಜ್ಯಾಧ್ಯಕ್ಷರಾದ ಡಾ|| ಮುಖ್ಯಮಂತ್ರಿ ಚಂದ್ರು, ಲೇಖಕಿಯರ ಸಂಘದ ಅಧ್ಯಕ್ಷರಾದ ಹೆಚ್.ಎಲ್ ಪುಷ್ಪ, ಏಷಿಯಾನೆಟ್ ಸುವರ್ಣ ಸಂಪಾದಕರಾದ ರವಿ ಹೆಗ್ಡೆ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ