ವಿಧಾನ ಪರಿಷತ್ ನಲ್ಲಿ ಪ್ರತಿಪಕ್ಷಗಳ ವಿರೋಧದ ನಡುವೆಯೂ ಮತಾಂತರ ನಿಷೇಧ ವಿಧೇಯಕ ಅಂಗೀಕಾರ

ಪ್ರತಿಪಕ್ಷ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರ ತೀವ್ರ ವಿರೋಧದ ನಡುವೆಯೂ ರಾಜ್ಯ ಸರ್ಕಾರ ವಿಧಾನಪರಿಷತ್ ನಲ್ಲಿ ಮತಾಂತರ ನಿಷೇಧ ವಿಧೇಯಕವನ್ನು ಅಂಗೀಕಾರ ಮಾಡಿದೆ.

Written by - Zee Kannada News Desk | Last Updated : Sep 15, 2022, 10:17 PM IST
  • ದೇ ವೇಳೆ ವಿಧಾನಪರಿಷತ್ ನ ಪ್ರತಿಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್ ಅವರು ವಿಧೇಯಕದ ಪ್ರತಿಯನ್ನು ಹರಿದು ಹಾಕಿ ಸರ್ಕಾರದ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಿದರು.
ವಿಧಾನ ಪರಿಷತ್ ನಲ್ಲಿ ಪ್ರತಿಪಕ್ಷಗಳ ವಿರೋಧದ ನಡುವೆಯೂ ಮತಾಂತರ ನಿಷೇಧ ವಿಧೇಯಕ ಅಂಗೀಕಾರ title=
ಸಾಂದರ್ಭಿಕ ಚಿತ್ರ

ಬೆಂಗಳೂರು: ಪ್ರತಿಪಕ್ಷ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರ ತೀವ್ರ ವಿರೋಧದ ನಡುವೆಯೂ ರಾಜ್ಯ ಸರ್ಕಾರ ವಿಧಾನಪರಿಷತ್ ನಲ್ಲಿ ಮತಾಂತರ ನಿಷೇಧ ವಿಧೇಯಕವನ್ನು ಅಂಗೀಕಾರ ಮಾಡಿದೆ.

ವಿಧಾನಪರಿಷತ್ ನಲ್ಲಿ ಮತಾಂತರ ನಿಷೇಧ ವಿಧೇಯಕ ಅಂಗಿಕಾರಕ್ಕೆ ಸಭಾಪತಿ ಸೂಚನೆ ನೀಡಿದ ಬೆನ್ನಲ್ಲೇ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದ ಸದಸ್ಯರು ಸದನದಲ್ಲಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಇದೇ ವೇಳೆ ವಿಧಾನಪರಿಷತ್ ನ ಪ್ರತಿಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್ ಅವರು ವಿಧೇಯಕದ ಪ್ರತಿಯನ್ನು ಹರಿದು ಹಾಕಿ ಸರ್ಕಾರದ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಿದರು.

ಇದನ್ನೂ ಓದಿ: ಉತ್ತರ ಭಾರತದಿಂದ ದಕ್ಷಿಣ ಭಾರತದವರೆಗಿನ ಹಲವು ರಾಜ್ಯಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಭಾರೀ ಮಳೆ

ಸರ್ಕಾರದ ಈ ನಡೆಗೆ ಪ್ರತಿಪಕ್ಷದ ಸದಸ್ಯರು ತೀವ್ರ ಪ್ರತಿರೋಧ ವ್ಯಕ್ತಪಡಿಸಿ ಸಭಾತ್ಯಾಗ ಮಾಡಿದರು. ಇದೆ ವೇಳೆ ವಿಧಾನಪರಿಷತ್ ನ ಕಲಾಪವನ್ನು ನಾಳೆ ಬೆಳಗ್ಗೆ 10.30ಕ್ಕೆ ಮುಂದೂಡಲಾಯಿತು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News