ಬೆಂಗಳೂರು: ವಕೀಲರ ಹಿತರಕ್ಷಣೆಗಾಗಿ ಈಗ ರಾಜ್ಯ ಸರ್ಕಾರ ಸದನದಲ್ಲಿ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ವಿಧೇಯಕ – 2023 ವನ್ನು ಮಂಡನೆ ಮಾಡಿದೆ.
ಇದನ್ನೂ ಓದಿ: ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿ ಡಬಲ್ ಧಮಾಕಾ: ಖಾತೆ ಸೇರಲಿದೆ ಇಷ್ಟು ಹೆಚ್ಚುವರಿ ಮೊತ್ತ!
ಈಗ ಈ ಕುರಿತಾಗಿ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ 'ನಾನು ಕೂಡ ಕಾನೂನು ಪದವಿ ಪಡೆದು ವಕೀಲನಾಗಿ ಕೆಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದೇನೆ. ವಕೀಲ ವೃತ್ತಿಯಲ್ಲಿ ಎದುರಾಗುವ ಸವಾಲುಗಳ ಅನುಭವ ಮತ್ತು ಅರಿವು ಇದೆ. ಅನ್ಯಾಯಕ್ಕೊಳಗಾದ ಜನರಿಗೆ ನ್ಯಾಯ ಕೊಡಿಸುವ ಸಂದರ್ಭದಲ್ಲಿ ವಕೀಲರು ಎದುರಿಸಬಹುದಾದ ಬೆದರಿಕೆ, ಹಲ್ಲೆ, ವೈಯಕ್ತಿಕ ನಿಂದನೆ ಇಂಥವುಗಳಿಂದ ರಕ್ಷಣೆ ನೀಡುವುದು ನಮ್ಮ ಸರ್ಕಾರದ ಆದ್ಯ ಕರ್ತವ್ಯ ಎಂದು ಭಾವಿಸಿ,“ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ವಿಧೇಯಕ – 2023” ಅನ್ನು ಇಂದಿನ ಅಧಿವೇಶನದಲ್ಲಿ ಮಂಡಿಸಲಾಗಿದೆ.
ನಾನು ಕೂಡ ಕಾನೂನು ಪದವಿ ಪಡೆದು ವಕೀಲನಾಗಿ ಕೆಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದೇನೆ. ವಕೀಲ ವೃತ್ತಿಯಲ್ಲಿ ಎದುರಾಗುವ ಸವಾಲುಗಳ ಅನುಭವ ಮತ್ತು ಅರಿವು ಇದೆ. ಅನ್ಯಾಯಕ್ಕೊಳಗಾದ ಜನರಿಗೆ ನ್ಯಾಯ ಕೊಡಿಸುವ ಸಂದರ್ಭದಲ್ಲಿ ವಕೀಲರು ಎದುರಿಸಬಹುದಾದ ಬೆದರಿಕೆ, ಹಲ್ಲೆ, ವೈಯಕ್ತಿಕ ನಿಂದನೆ ಇಂಥವುಗಳಿಂದ ರಕ್ಷಣೆ ನೀಡುವುದು ನಮ್ಮ ಸರ್ಕಾರದ ಆದ್ಯ… pic.twitter.com/1cyC5jtmLL
— Siddaramaiah (@siddaramaiah) December 11, 2023
ವಕೀಲ ವೃತ್ತಿಯಲ್ಲಿ ತೊಡಗಿಸಿಕೊಂಡಿರುವ ಪ್ರತಿಯೊಬ್ಬರೂ ಭಯಮುಕ್ತರಾಗಿ ಕಾರ್ಯನಿರ್ವಹಿಸಿದಾಗ ಮಾತ್ರ ನೊಂದವರಿಗೆ ನ್ಯಾಯ ಸಿಗಲು ಸಾಧ್ಯ. ಇಂತಹ ನಿರ್ಭೀತ ವಾತಾವರಣ ನಿರ್ಮಾಣ ಮಾಡಲು ನಾವು ಬದ್ಧ ಎಂಬುದನ್ನು ಮತ್ತೊಮ್ಮೆ ನಾಡಿನ ವಕೀಲ ಬಂಧುಗಳಿಗೆ ಖಾತ್ರಿಪಡಿಸುತ್ತಿದ್ದೇನೆ ಎಂದು ಅವರು ಭರವಸೆ ನೀಡಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.