ಬೆಳಗಾವಿ: ಶಾಲಾ ಶಿಕ್ಷಣ ಇಲಾಖೆಯಿಂದ ರಾಜ್ಯಮಟ್ಟದ ಪ್ರೌಢಶಾಲಾ ಸಹ ಶಿಕ್ಷಕರ ಒಂದೇ ಜೇಷ್ಠತಾ ಪಟ್ಟಿ ಸಿದ್ದಪಡಿಸಿ, ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು ಪ್ರಕಟಿಸಿ, ಸ್ವೀಕೃತವಾಗುವ ಆಕ್ಷೇಪಣೆಗಳನ್ನು ಪರಿಶೀಲಿಸಿ ಅಂತಿಮ ಜೇಷ್ಠತಾ ಪಟ್ಟಿಯನ್ನು ಪ್ರಕಟಿಸಲಾಗುವುದು ಮತ್ತು ಪಟ್ಟಿ ಪ್ರಕಟಿಸಿದ ನಂತರ ಪ್ರೌಢಶಾಲಾ ಸಹ ಶಿಕ್ಷಕರಿಗೆ ಬಡ್ತಿ ನೀಡುವ ಪ್ರಕ್ರಿಯೆಯನ್ನು ಬರುವ 2025ರ ಫೆಬ್ರವರಿ ಅಂತ್ಯದೊಳಗೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್ ಮಧು ಬಂಗಾರಪ್ಪ ಅವರು ಭರವಸೆ ನೀಡಿದರು.
ವಿಧಾನ ಪರಿಷತನಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ಎಸ್.ವಿ.ಸಂಕನೂರ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು ಈ ಸ್ಪಷ್ಟನೆ ನೀಡಿದ್ದಾರೆ. ಉಪನ್ಯಾಸಕರ ಹುದ್ದೆಗೆ ಪದೋನ್ನತಿ ನೀಡಬೇಕೆಂಬುದು ಪ್ರೌಢಶಾಲಾ ಸಹ ಶಿಕ್ಷಕರ ಬಹುದಿನಗಳ ಬೇಡಿಕೆಯಾಗಿದೆ. ಸಂಬಂಧಿಸಿದ ಇಲಾಖೆಯು ಈ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಸಂಕನೂರ ಅವರು ಅಸಮಾಧಾನ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಸಚಿವರಾದ ಮಧು ಬಂಗಾರಪ್ಪ, ಈಗಾಗಲೇ 2013ನೇ ಸಾಲಿನವರೆಗೆ ಪದೋನ್ನತಿ ಪ್ರಕ್ರಿಯೆ ನಡೆಸಲಾಗಿದೆ. ಪದೋನ್ನತಿ ಪ್ರಕ್ರಿಯೆ ನಡೆಸುವ ಹಿನ್ನೆಲೆಯಲ್ಲಿ ರಾಜ್ಯಮಟ್ಟದಲ್ಲಿ ಒಂದೇ ಜೇಷ್ಠತಾ ಪಟ್ಟಿಯನ್ನು ತಯಾರಿಸುವ ಬಗ್ಗೆ ಮಾರ್ಗದರ್ಶನ ಕೋರಿ 2024ರ ಫೆಬ್ರವರಿ ಮಾಹೆ ಮತ್ತು ಮಾರ್ಚ್ ಮಾಹೆಯಲ್ಲಿ ಶಾಲಾ ಶಿಕ್ಷಣ ಇಲಾಖೆ (ಪ್ರಾಥಮಿಕ ಮತ್ತು ಪ್ರೌಢ)ಯ ಆಯುಕ್ತರು ಹಾಗೂ ಏಪ್ರಿಲ್ ಮಾಹೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ( ಪದವಿ ಪೂರ್ವ) ನಿರ್ದೇಶಕರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಈ ಪ್ರಸ್ತಾವನೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು 2024ರ ಅಕ್ಟೋಬರ್ 16ರಂದು ನೀಡಿರುವ ಅಭಿಪ್ರಾಯದನ್ವಯ ಶಾಲಾ ಶಿಕ್ಷಣ ಇಲಾಖೆಯ ನಾಲ್ಕು ವಿಭಾಗಗಳಲ್ಲಿ ಸ್ನಾತಕೋತ್ತರ ಪದವಿ ಪಡೆದ ಅರ್ಹ ಸಹ ಶಿಕ್ಷಕರ ಜೇಷ್ಠತಾ ಪಟ್ಟಿಯನ್ನು ಪರಿಶೀಲಿಸಿ ಸಾಮಾನ್ಯ ಜೇಷ್ಠತಾ ಪಟ್ಟಿಯನ್ನು ಅಂತಿಮಗೊಳಿಸಲಾಗುವುದು ಎಂದು ಹೇಳಿದರು. ಅಂತಿಮವಾಗಿ ರಾಜ್ಯಮಟ್ಟದ ಒಂದೇ ಜೇಷ್ಠತಾ ಪಟ್ಟಿಯನ್ನು ತಯಾರಿಸಲು ಕರ್ನಾಟಕ ಸರ್ಕಾರಿ ನೌಕರರ (ಜೇಷ್ಠತಾ) ನಿಯಮಗಳು 1957ರ ನಿಯಮ 7-ಎ ರ ನಿಯಮದನ್ವಯ ಪರಿಶೀಲಿಸಿ ಅಗತ್ಯ ಕ್ರಮವಹಿಸಲು 2024ರ ಅಕ್ಟೋಬರ್ ಮಾಹೆಯಲ್ಲಿ ಬರೆದ ಪತ್ರದಲ್ಲಿ ನಿರ್ದೇಶನ ನೀಡಲಾಗಿದೆ ಎಂದು ಹೇಳಿದರು. ಬೆಂಗಳೂರಿನ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಿಗೆ, ಧಾರವಾಡ ಮತ್ತು ಕಲಬುರಗಿಯ ಅಪರ ಆಯುಕ್ತರಿಗೆ ಹಾಗೂ ಪದವಿ ಪೂರ್ವ ವಿಭಾಗದ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರಿಗೆ ನಿರ್ದೇಶನ ನೀಡಲಾಗಿದ್ದು, ಇದರನ್ವಯ ಪದೋನ್ನತಿ ಪ್ರಕ್ರಿಯೆಯನ್ನು ತ್ವರಿತವಾಗಿ ನಿಯಮಾನುಸಾರ ನಡೆಸಲು ಕ್ರಮ ವಹಿಸಲಾಗುವುದು ಎಂದು ಪ್ರತಿಕ್ರಿಯಿಸಿದರು.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.